ಬಾಲಕಿಯರ ಬಟ್ಟೆ ಬಿಚ್ಚಿಸಿ ನೃತ್ಯ ಮಾಡಿಸಿದ ಪೊಲೀಸರು: ಉನ್ನತ ಮಟ್ಟದ ತನಿಖೆಗೆ 'ಮಹಾ' ಸರ್ಕಾರ ಆದೇಶ

ಜಲಗಾಂವ್ ನ ಹಾಸ್ಟೆಲ್‌ನಲ್ಲಿ ಪೊಲೀಸರು ಬಾಲಕಿಯರ ಬಟ್ಟೆ ಬಿಚ್ಚಿಸಿ ಬಲವಂತವಾಗಿ ನೃತ್ಯ ಮಾಡಿಸಿದ ಘಟನೆ ಕುರಿತು ತನಿಖೆ ಮಾಡಲು ಮಹಾರಾಷ್ಟ್ರ ಸರ್ಕಾರ ನಾಲ್ಕು ಸದಸ್ಯರ ಉನ್ನತ ಮಟ್ಟದ ಸಮಿತಿ ರಚಿಸಿದೆ...

Published: 03rd March 2021 03:48 PM  |   Last Updated: 03rd March 2021 07:28 PM   |  A+A-


stop

ಸಾಂದರ್ಭಿಕ ಚಿತ್ರ

Posted By : Lingaraj Badiger
Source : PTI

ಮುಂಬೈ: ಜಲಗಾಂವ್ ನ ಹಾಸ್ಟೆಲ್‌ನಲ್ಲಿ ಪೊಲೀಸರು ಬಾಲಕಿಯರ ಬಟ್ಟೆ ಬಿಚ್ಚಿಸಿ ಬಲವಂತವಾಗಿ ನೃತ್ಯ ಮಾಡಿಸಿದ ಘಟನೆ ಕುರಿತು ತನಿಖೆ ಮಾಡಲು ಮಹಾರಾಷ್ಟ್ರ ಸರ್ಕಾರ ನಾಲ್ಕು ಸದಸ್ಯರ ಉನ್ನತ ಮಟ್ಟದ ಸಮಿತಿ ರಚಿಸಿದೆ ಎಂದು ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶಮುಖ್ ಅವರು ಬುಧವಾರ ತಿಳಿಸಿದ್ದಾರೆ.

ಪ್ರತಿಪಕ್ಷ ಸದಸ್ಯರು ಈ ವಿಷಯವನ್ನು ಇಂದು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ನಂತರ ಗೃಹ ಸಚಿವರು ಈ ಘೋಷಣೆ ಮಾಡಿದ್ದಾರೆ.

"ಇದು ಅತ್ಯಂತ ದುರದೃಷ್ಟಕರ ಘಟನೆ. ಇದರ ಬಗ್ಗೆ ತನಿಖೆ ನಡೆಸಲು ನಾಲ್ಕು ಸದಸ್ಯರ ಉನ್ನತ ಮಟ್ಟದ ಅಧಿಕಾರಿಗಳ ಸಮಿತಿಯನ್ನು ರಚಿಸಲಾಗಿದೆ. ಎರಡು ದಿನಗಳಲ್ಲಿ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ. ವರದಿ ಬಂದ ನಂತರ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು" ಎಂದು ದೇಶಮುಖ್ ತಿಳಿಸಿದ್ದಾರೆ.

ಮಾಧ್ಯಮ ವರದಿಗಳ ಪ್ರಕಾರ, ಜಲಗಾಂವ್ ನ ಹಾಸ್ಟೆಲ್‌ನ ಕೆಲವು ಹುಡುಗಿಯರ ತನಿಖೆಯ ನೆಪದಲ್ಲಿ ಹೊರಗಿನ ಜನರು ಮತ್ತು ಪೊಲೀಸರಿಗೆ ಹಾಸ್ಟೆಲ್ ಪ್ರವೇಶಿಸಲು ಅನುಮತಿ ನೀಡಲಾಗಿದೆ. ಹೀಗಾಗಿ ಹಾಸ್ಟೆಲ್ ಗೆ ಬಂದ ಪೊಲೀಸರು ಬಲವಂತವಾಗಿ ಕೆಲವು ಹುಡುಗಿಯರ ಬಟ್ಟೆ ಬಿಚ್ಚಿಸಿದ್ದಾರೆ ಮತ್ತು ಡ್ಯಾನ್ಸ್ ಮಾಡಲು ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಅಲ್ಲದೆ ಅದರ ವೀಡಿಯೊ ಕ್ಲಿಪ್ ಸಹ ಬಹಿರಂಗವಾಗಿದೆ.


Stay up to date on all the latest ರಾಷ್ಟ್ರೀಯ news
Poll
CBSE board exam

12 ನೇ ತರಗತಿ ಮೌಲ್ಯಮಾಪನಕ್ಕೆ 10 ನೇ ತರಗತಿ ಅಂಕಗಳನ್ನು ಸೇರಿಸುವ ಸಿಬಿಎಸ್‌ಇ ಸೂತ್ರವನ್ನು ನೀವು ಬೆಂಬಲಿಸುತ್ತೀರಾ?


Result
ಹೌದು
ಇಲ್ಲ
flipboard facebook twitter whatsapp