ಕೊರೋನಾ: ಮೊದಲ ಡೋಸ್ ಕೋವಿಡ್ ಲಸಿಕೆ ಹಾಕಿಸಿಕೊಂಡ ರಾಷ್ಟ್ರಪತಿ ರಾಮನಾಥ್ ಕೋವಿಂದ್
ಮಾರಕ ಕೊರೋನಾ ವೈರಸ್ ವಿರುದ್ಧ ಕೇಂದ್ರ ಸರ್ಕಾರ ಆರಂಭಿಸಿರುವ ಲಸಿಕೆ ವಿತರಣೆ ಮುಂದುವರೆದಿದ್ದು, ಇಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಲಸಿಕೆ ಹಾಕಿಸಿಕೊಂಡಿದ್ದಾರೆ.
Published: 03rd March 2021 02:49 PM | Last Updated: 03rd March 2021 03:16 PM | A+A A-

ಲಸಿಕೆ ಹಾಕಿಸಿಕೊಂಡ ರಾಷ್ಟ್ರಪತಿ ರಾಮನಾಥ್ ಕೋವಿಂದ್
ನವದೆಹಲಿ: ಮಾರಕ ಕೊರೋನಾ ವೈರಸ್ ವಿರುದ್ಧ ಕೇಂದ್ರ ಸರ್ಕಾರ ಆರಂಭಿಸಿರುವ ಲಸಿಕೆ ವಿತರಣೆ ಮುಂದುವರೆದಿದ್ದು, ಇಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಲಸಿಕೆ ಹಾಕಿಸಿಕೊಂಡಿದ್ದಾರೆ.
ಬುಧವಾರ ರಾಜಧಾನಿ ದೆಹಲಿಯ ಆರ್ಮಿ (ರಿಸರ್ಚ್ ಆ್ಯಂಡ್ ರೆಫರಲ್) ಆಸ್ಪತ್ರೆಯಲ್ಲಿ ರಾಮನಾಥ್ ಕೋವಿಂದ್ ಅವರು ತಮ್ಮ ಮೊದಲ ಡೋಸ್ ಕೋವಿಡ್ ಲಸಿಕೆ ಹಾಕಿಸಿಕೊಂಡರು.
ಈ ಸಂದರ್ಭದಲ್ಲಿ ಮಾತನಾಡಿದ ಕೋವಿಂದ್ ಅವರು, 'ವಿಶ್ವದ ಅತಿ ದೊಡ್ಡ ಕೋವಿಡ್ ಲಸಿಕಾ ವಿತರಣೆ ಕಾರ್ಯಕ್ರಮದ ಬಗ್ಗೆ ಅತೀವ ಹೆಮ್ಮೆ ಇದ್ದು, ಎರಡು ಲಸಿಕೆಗಳನ್ನು ದೇಶೀಯವಾಗಿ ಅಭಿವೃದ್ಧಿಪಡಿಸಲಾಗಿದೆ ಎಂದು ಹೇಳಿದರು.
Delhi: President Ram Nath Kovind receives first dose of COVID19 vaccine at RR Hospital pic.twitter.com/5dnJxBRQ9a
— ANI (@ANI) March 3, 2021
ಪ್ರಧಾನಿ ನರೇಂದ್ರ ಮೋದಿ ಇದೇ ಸೋಮವಾರ ಏಮ್ಸ್ನಲ್ಲಿ ಕೊವ್ಯಾಕ್ಸಿನ್ ಲಸಿಕೆ ಹಾಕಿಸಿಕೊಳ್ಳುವ ಮೂಲಕ ದೇಶದಲ್ಲಿ 3ನೇ ಹಂತದ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದ್ದರು. ಅದರ ಮುಂದುವರೆದ ಭಾಗವಾಗಿ ಸುಪ್ರೀಂ ಕೋರ್ಟ್ನ ನ್ಯಾಯಮೂರ್ತಿಗಳು, ನಿವೃತ್ತ ನ್ಯಾಮೂರ್ತಿಗಳು ಹಾಗೂ ಅವರ ಮನೆಯ ಸದಸ್ಯರಿಗೆ ಮಂಗಳವಾರದಿಂದ ಕೋವಿಡ್-19 ಲಸಿಕೆ ವಿತರಣೆ ಮಾಡಲಾಗುತ್ತಿದೆ.
ಸುಪ್ರೀಂ ಕೋರ್ಟ್ನ 30 ನ್ಯಾಯಮೂರ್ತಿಗಳ ಪೈಕಿ 59 ವರ್ಷ ವಯಸ್ಸಿನ ಸೂರ್ಯ ಕಾಂತ್ ಅವರನ್ನು ಹೊರತು ಪಡಿಸಿ, ಉಳಿದ ಎಲ್ಲ ನ್ಯಾಯಮೂರ್ತಿಗಳು ಕೋವಿಡ್ ಲಸಿಕೆ ಹಾಕಿಸಿಕೊಳ್ಳಲು ಅವಕಾಶವಿದೆ. ಎರಡನೇ ಹಂತದ ಲಸಿಕೆ ಅಭಿಯಾನದಲ್ಲಿ 60 ವರ್ಷ ವಯಸ್ಸು ಮೇಲ್ಪಟ್ಟವರು ಹಾಗೂ ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವ 45 ವರ್ಷ ವಯಸ್ಸಿಗಿಂತ ಮೇಲ್ಪಟ್ಟ ವ್ಯಕ್ತಿಗಳು ಲಸಿಕೆ ಹಾಕಿಸಿಕೊಳ್ಳಬಹುದಾಗಿದೆ.