ಕೇರಳ ವಿಧಾನಸಭೆ ಚುನಾವಣೆ: ಮೆಟ್ರೋ ಮ್ಯಾನ್ ಇ.ಶ್ರೀಧರನ್ ಬಿಜೆಪಿಯ ಸಿಎಂ ಅಭ್ಯರ್ಥಿ!

ಕೇರಳ ವಿಧಾನಸಭೆ ಚುನಾವಣೆಗೆ ಬಿಜೆಪಿ ಮೆಟ್ರೋ ಮ್ಯಾನ್ ಇ.ಶ್ರೀಧರನ್ ಅವರನ್ನು ಸಿಎಂ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದೆ. 

Published: 04th March 2021 04:08 PM  |   Last Updated: 04th March 2021 04:19 PM   |  A+A-


Metro Man E Sreedharan (Photo | Albin Mathew, EPS)

ಕೇರಳ ವಿಧಾನಸಭೆ ಚುನಾವಣೆ: ಮೆಟ್ರೋ ಮ್ಯಾನ್ ಇ ಶ್ರೀಧರನ್ ಬಿಜೆಪಿಯ ಸಿಎಂ ಅಭ್ಯರ್ಥಿ!

Posted By : Srinivas Rao BV
Source : The New Indian Express

ತಿರುವನಂತಪುರಂ: ಕೇರಳ ವಿಧಾನಸಭೆ ಚುನಾವಣೆಗೆ ಬಿಜೆಪಿ ಮೆಟ್ರೋ ಮ್ಯಾನ್ ಇ.ಶ್ರೀಧರನ್ ಅವರನ್ನು ಸಿಎಂ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದೆ. 

ಈ ಬಗ್ಗೆ ಕೇರಳ ರಾಜ್ಯ ಬಿಜೆಪಿಯ ಮುಖ್ಯಸ್ಥ ಸುರೇಂದ್ರನ್, "ಇ.ಶ್ರೀಧರನ್ ಅವರು ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿಯಾಗಿರಲಿದ್ದಾರೆ" ಎಂದು ಹೇಳಿದ್ದಾರೆ.
  
ಶ್ರೀಧರನ್ ಅವರನ್ನು ಸಿಎಂ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡುವುದಕ್ಕೂ ಮುನ್ನ ಅವರು ಪಾಲರೀವತ್ತೊಂ ನಲ್ಲಿ ನಿರ್ಮಾಣವಾಗುತ್ತಿರುವ ಮೇಲ್ಸೇತುವೆಗೆ ಭೇಟಿ ನೀಡಿದ್ದರು. ಈ ವೇಳೆ ಪ್ರತಿಕ್ರಿಯೆ ನೀಡಿರುವ ಇ ಶ್ರೀಧರನ್, ತಮ್ಮ ಪಕ್ಷ ಕೇರಳದಲ್ಲಿ ಅಧಿಕಾರಕ್ಕೆ ಬರಲಿದ್ದು, ದೊಡ್ಡ ಅಂತರದ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

ಜನಕ್ಕೆ ತಮಗೇನು ಬೇಕು ಎಂಬುದರ ಬಗ್ಗೆ ಸ್ಪಷ್ಟತೆ ಇದೆ. ಜನತೆ ಬಿಜೆಪಿಯನ್ನು ಅಧಿಕಾರಕ್ಕೆ ತರುವ ವಿಶ್ವಾಸವಿದೆ ಎಂದು ಹೇಳಿದ್ದಾರೆ. ನಾನು ಈಗ ಇರುವ ಪ್ರದೇಶವಾದ (ಪೊನ್ನಾನಿ)ಯಿಂದ ದೂರದ ಪ್ರದೇಶದಲ್ಲಿ ಸ್ಪರ್ಧಿಸಲು ಇಚ್ಛಿಸುವುದಿಲ್ಲ ಎಂಬ ಬೇಡಿಕೆ ಮುಂದಿಟ್ಟಿದ್ದೇನೆ ಎಂದು ಶ್ರೀಧರನ್ ತಿಳಿಸಿದ್ದಾರೆ. 

ಯಾವ ಜವಾಬ್ದಾರಿಗಳನ್ನು ತೆಗೆದುಕೊಳ್ಳಬೇಕೆಂಬುದು ಮಾನಸಿಕ ವಯಸ್ಸಿನ ಆಧಾರದಲ್ಲಿ ನಿರ್ಧರಿಸಲಾಗುತ್ತದೆಯೇ ಹೊರತು ದೈಹಿಕ ವಯಸ್ಸಿನ ಆಧಾರದಲ್ಲಿ ಅಲ್ಲ ಎಂದು ಶ್ರೀಧರನ್ ಹೇಳಿದ್ದಾರೆ. ಬುಧವಾರದಂದು ರಾಜ್ಯಾಧ್ಯಕ್ಷ ಸುರೇಂದ್ರನ್ ಅವರು ಶ್ರೀಧರನ್ ಅವರನ್ನೊಳಗೊಂಡ 16 ಸದಸ್ಯರ ರಾಜ್ಯ ಚುನಾವಣಾ ಸಮಿತಿಯನ್ನು ರಚಿಸಿದ್ದರು. ಏ.06 ರಂದು ಕೇರಳ ವಿಧಾನಸಭೆ ಚುನಾವಣೆ ನಡೆಯಲಿದೆ. ಮೇ.2 ರಂದು ಮತ ಎಣಿಕೆ ನಡೆಯಲಿದೆ.

Stay up to date on all the latest ರಾಷ್ಟ್ರೀಯ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp