ಕೋವಿಡ್ 19 ಲಸಿಕಾ ಪ್ರಮಾಣ ಪತ್ರದಲ್ಲಿ ಮೋದಿ ಫೋಟೋ: ಚುನಾವಣಾ ಆಯೋಗಕ್ಕೆ ದೂರು
ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವ ಕೇರಳದಲ್ಲಿ ನೀಡಲಾಗುತ್ತಿರುವ ಕೋವಿಡ್-19 ಲಸಿಕಾ ಪ್ರಮಾಣಪತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಫೋಟೋವನ್ನು ತೆಗೆದು ಹಾಕಬೇಕೆಂದು ಡೆಮಾಕ್ರಟಿಕ್ ಯೂತ್ ಫೆಡರೇಷನ್ ಆಫ್ ಇಂಡಿಯಾ ಮುಖಂಡರೊಬ್ಬರು ಗುರುವಾರ ಚುನಾವಣಾ ಆಯೋಗದಲ್ಲಿ ದೂರು ದಾಖಲಿಸಿದ್ದಾರೆ.
Published: 04th March 2021 08:01 PM | Last Updated: 04th March 2021 08:04 PM | A+A A-

ಕೋವಿಡ್ ಲಸಿಕೆ ಪಡೆಯುತ್ತಿರುವ ಪ್ರಧಾನಿ ಮೋದಿ ಚಿತ್ರ
ತಿರುವನಂತಪುರಂ: ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವ ಕೇರಳದಲ್ಲಿ ನೀಡಲಾಗುತ್ತಿರುವ ಕೋವಿಡ್-19 ಲಸಿಕಾ ಪ್ರಮಾಣಪತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಫೋಟೋವನ್ನು ತೆಗೆದು ಹಾಕಬೇಕೆಂದು ಡೆಮಾಕ್ರಟಿಕ್ ಯೂತ್ ಫೆಡರೇಷನ್ ಆಫ್ ಇಂಡಿಯಾ ಮುಖಂಡರೊಬ್ಬರು ಗುರುವಾರ ಚುನಾವಣಾ ಆಯೋಗದಲ್ಲಿ ದೂರು ದಾಖಲಿಸಿದ್ದಾರೆ.
ಏಪ್ರಿಲ್ ರಂದು ಕೇರಳ ವಿಧಾನಸಭಾ ಚುನಾವಣೆ ನಡೆಯಲಿದ್ದು, ಈಗಾಗಲೇ ನೀತಿ ಸಂಹಿತೆ ಜಾರಿಯಾಗಿರುವುದಾಗಿ ಕೇರಳ ರಾಜ್ಯ ಯುವ ಸಮಿತಿ ರಾಜ್ಯ ಸಹ ಸಂಘಟಕ ಮಿಧುನ್ ಶಾ ಆಯೋಗಕ್ಕೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.
ರಾಜ್ಯದಲ್ಲಿ ನೀಡಲಾದ ಕೋವಿಡ್ -19 ಲಸಿಕಾ ಪ್ರಮಾಣಪತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಫೋಟೋ ಮತ್ತು ಅವರ ಭಾಷಣದ ಆಯ್ದ ಭಾಗಗಳಿವೆ. ಇದು ಚುನಾವಣಾ ಕಾರ್ಯವಿಧಾನದ ಮೇಲೆ ಪ್ರಭಾವ ಬೀರಬಹುದಾದ್ದರಿಂದ, ಅದನ್ನು ತೆಗೆದುಹಾಕಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಮನವಿ ಮಾಡಿರುವುದಾಗಿ ಅವರು ಹೇಳಿದ್ದಾರೆ.
ತಿರುವನಂತಪುರಂನ ಕೇಂದ್ರವೊಂದರಲ್ಲಿ ಇಂದು ಬೆಳಗ್ಗೆ ಲಸಿಕೆ ಪಡೆದ ನಂತರ ಪಡೆದ ಪ್ರಮಾಣ ಪತ್ರದ ಆಧಾರದ ಮೇಲೆ ದೂರು ದಾಖಲಿಸಿರುವುದಾಗಿ ಶಾ ತಿಳಿಸಿದ್ದಾರೆ.