ಮತ್ತೊಂದು ಸ್ವಾತಂತ್ರ್ಯ ಹೋರಾಟಕ್ಕೆ ಸಜ್ಜಾಗಲು ಯುವ ಜನತೆಗೆ ರಾಹುಲ್ ಪ್ರಚೋದನೆ: ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಯುವ ಜನತೆಯನ್ನು ಮತ್ತೊಂದು ಸ್ವಾತಂತ್ರ್ಯ ಹೋರಾಟಕ್ಕೆ ಸಜ್ಜಾಗುವಂತೆ ಪ್ರಚೋದಿಸುತ್ತಿರುವಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳುವುದನ್ನು ನಿಷೇಧಿಸುವಂತೆ ಬಿಜೆಪಿ ಒತ್ತಾಯಿಸಿದೆ.

Published: 05th March 2021 12:07 PM  |   Last Updated: 05th March 2021 12:38 PM   |  A+A-


Rahul Gandhi during an interaction with the students

ವಿದ್ಯಾರ್ಥಿನಿಯರೊಂದಿಗೆ ರಾಹುಲ್ ಗಾಂಧಿ

Posted By : Shilpa D
Source : PTI

ಚೆನ್ನೈ: ಯುವ ಜನತೆಯನ್ನು ಮತ್ತೊಂದು ಸ್ವಾತಂತ್ರ್ಯ ಹೋರಾಟಕ್ಕೆ ಸಜ್ಜಾಗುವಂತೆ ಪ್ರಚೋದಿಸುತ್ತಿರುವಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳುವುದನ್ನು ನಿಷೇಧಿಸುವಂತೆ ಒತ್ತಾಯಿಸಿ ಚುನಾವಣಾ ಆಯೋಗಕ್ಕೆ ತಮಿಳುನಾಡು ರಾಜ್ಯ ಘಟಕ ಒತ್ತಾಯಿಸಿದೆ. 

ಶಿಕ್ಷಣ ಸಂಸ್ಥೆಯನ್ನು ತಮ್ಮ ರಾಜಕೀಯ ಪ್ರಚಾರಕ್ಕಾಗಿ ಬಳಸಿಕೊಳ್ಳುವ ಮೂಲಕ ರಾಹುಲ್ ಗಾಂಧಿ ಮಾದರಿ ನೀತಿ ಸಂಹಿತೆ ಹಾಗೂ ಭಾರತೀಯ ದಂಡ ಸಂಹಿತೆಯ (ಐಪಿಸಿ) ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಮಾರ್ಚ್ 1ರಂದು ಕನ್ಯಾಕುಮಾರಿಯ ಸೇಂಟ್ ಜೋಸೆಫ್ ಮ್ಯಾಟ್ರಿಕ್ ಶಾಲೆಯ ಆವರಣವನ್ನು ತಮ್ಮ ರಾಜಕೀಯ ಪ್ರಚಾರಕ್ಕೆ ಬಳಸಿಕೊಳ್ಳುವ ಮೂಲಕ ರಾಹುಲ್ ಗಾಂಧಿ ಅವರು, ಮಾದರಿ ನೀತಿ ಸಂಹಿತೆ ಹಾಗೂ ಐಪಿಸಿಯ ನಿಯಮಗಳನ್ನು ಉಲ್ಲಂಘಿಸಿದ್ದಾರೆ, ಮತ್ತೊಂದು ಸ್ವಾತಂತ್ರ್ಯ ಹೋರಾಟಕ್ಕೆ ಸಜ್ಜಾಗುವಂತೆ ಯುವಕರನ್ನು ಪ್ರಚೋದಿಸುತ್ತಿದ್ದಾರೆ ಎಂದು ತಮಿಳುನಾಡು ಬಿಜೆಪಿ ಆರೋಪಿಸಿದೆ.

ರಾಹುಲ್ ಗಾಂಧಿ ಐಪಿಸಿಯ 109 ಮತ್ತು 124ಎ ಸೆಕ್ಷನ್‌ಗಳ ಅಡಿ ಅಪರಾಧಗಳನ್ನು ಎಸಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ ವಿಧಾನಸಭೆ ಚುನಾವಣೆಯ ಪ್ರಚಾರದಲ್ಲಿ ಪಾಲ್ಗೊಳ್ಳದಂತೆ ರಾಹುಲ್ ಗಾಂಧಿ ಅವರ ಮೇಲೆ ನಿಷೇಧ ವಿಧಿಸಬೇಕು. ಐಪಿಸಿಯ 124 ಎ (ದೇಶದ್ರೋಹ) ಸೆಕ್ಷನ್ ಅಡಿ ಅವರ ಮೇಲೆ ಎಫ್‌ಐಆರ್ ದಾಖಲಿಸಬೇಕು ಎಂದು ಒತ್ತಾಯಿಸಿದ್ದಾರೆ.

Stay up to date on all the latest ರಾಷ್ಟ್ರೀಯ news
Poll
Kumbh-Covid-19

ಚುನಾವಣಾ ಸಮಾವೇಶ, ಕುಂಭಮೇಳ, ಧಾರ್ಮಿಕ ಸಭೆಗಳು ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಹದಗೆಡಿಸುತ್ತಿವೆಯೇ?


Result
ಹೌದು, ಅದು ನಿಜ.
ಇಲ್ಲ, ಖಂಡಿತ ಅಲ್ಲ.
flipboard facebook twitter whatsapp