ದೀದಿಗೆ ಮತ್ತೊಂದು ಶಾಕ್: ಟಿಎಂಸಿ ಮಾಜಿ ಸಂಸದ ದಿನೇಶ್ ತ್ರಿವೇದಿ ಬಿಜೆಪಿಗೆ ಸೇರ್ಪಡೆ

ಪಶ್ಚಿಮ ಬಂಗಾಳ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ದೀದಿಗೆ ಮತ್ತೊಂದು ಆಘಾತ ಎದುರಾಗಿದ್ದು, ತೃಣಮೂಲ ಕಾಂಗ್ರೆಸ್ ಪಕ್ಷದ ಮಾಜಿ ಸಂಸದ ದಿನೇಶ್ ತ್ರಿವೇದಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

Published: 06th March 2021 02:02 PM  |   Last Updated: 06th March 2021 04:15 PM   |  A+A-


Dinesh Trivedi Joins BJP

ದಿನೇಶ್ ತ್ರಿವೇದಿ ಬಿಜೆಪಿಗೆ ಸೇರ್ಪಡೆ

Posted By : Srinivasamurthy VN
Source : ANI

ನವದೆಹಲಿ: ಪಶ್ಚಿಮ ಬಂಗಾಳ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ದೀದಿಗೆ ಮತ್ತೊಂದು ಆಘಾತ ಎದುರಾಗಿದ್ದು, ತೃಣಮೂಲ ಕಾಂಗ್ರೆಸ್ ಪಕ್ಷದ ಮಾಜಿ ಸಂಸದ ದಿನೇಶ್ ತ್ರಿವೇದಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಹೌದು.. ತೃಣಮೂಲ ಕಾಂಗ್ರೆಸ್ ಪಕ್ಷದ (ಟಿಎಂಸಿ) ಮಾಜಿ ಸಂಸದ ಹಾಗೂ ಹಿರಿಯ ರಾಜಕಾರಣಿ ದಿನೇಶ್ ತ್ರಿವೇದಿ ಅವರು ದೆಹಲಿಯಲ್ಲಿ ಶನಿವಾರ ಅಧಿಕೃತವಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸಮ್ಮುಖದಲ್ಲಿ ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವ ಪಿಯೂಷ್ ಗೋಯಲ್ ಹಾಗೂ ನೈಸರ್ಗಿಕ ಅನಿಲ ಸಚಿವ ಧರ್ಮೇಂದ್ರ ಪ್ರಧಾನ್ ಉಪಸ್ಥಿತರಿದ್ದರು. ನಡ್ಡಾ ಅವರು ತ್ರಿವೇದಿ ಅವರಿಗೆ ಬಿಜೆಪಿ ಪಕ್ಷದ ಶಾಲು ಹೊದಿಸಿ, ಹೂಗುಚ್ಛ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಪ್ರತಿಕ್ರಿಯಿಸಿರುವ 70 ವರ್ಷದ ತ್ರಿವೇದಿ, ನಾನು ಕಾಯುತ್ತಿದ್ದ ಸುವರ್ಣ ಕ್ಷಣ ಇದಾಗಿದ್ದು, ಚುನಾವಣೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುತ್ತೇನೆ. ನಾನು ಸ್ಪರ್ಧಿಸುತ್ತೇನೆಯೋ ಇಲ್ಲವೋ ಆದರೆ ರಾಜಕೀಯದಲ್ಲಿ ಸಕ್ರಿಯನಾಗಿರುತ್ತೇನೆ. ಬಂಗಾಳ ತೃಣಮೂಲ ಕಾಂಗ್ರೆಸ್ ಪಕ್ಷವನ್ನು ತಿರಸ್ಕರಿಸಿದೆ. ಅವರಿಗೆ ಅಭಿವೃದ್ಧಿ ಬೇಕೇ ಹೊರತು ಭ್ರಷ್ಟಾಚಾರ ಅಥವಾ ಗಲಭೆಗಳಲ್ಲ. ನಾನು ಯಾವುದೇ ಸವಾಲಿಗೂ ಸಿದ್ಧವಿದ್ದು, ರಾಜಕಾರಣ ಆಟವಲ್ಲ. ಇದು ನಿಜಕ್ಕೂ ಗಂಭೀರ ವಿಚಾರವಾಗಿದ್ದು, ಇದನ್ನು ಸಿಎಂ ಮಮಮತಾ ಬ್ಯಾನರ್ಜಿ ಮರೆತಿದ್ದಾರೆ ಎಂದು ಟೀಕಿಸಿದರು.

ಅಂತೆಯೇ ಕುಟುಂಬ ರಾಜಕಾರಣವನ್ನು ಟೀಕಿಸಿದ ಅವರು, ಕೆಲ ಪಕ್ಷಗಳಿಗೆ ಒಂದು ನಿರ್ದಿಷ್ಟ ಕುಟುಂಬಗಳೇ ಸರ್ವೋಚ್ಛವಾಗಿರುತ್ತದೆ. ಆದರೆ ಬಿಜೆಪಿ ಪಕ್ಷದಲ್ಲಿ ಮತದಾರರೇ ಸರ್ವೋಚ್ಛರಾಗಿದ್ದಾರೆ ಎಂದು ತ್ರಿವೇದಿ ಹೇಳಿದರು. ಇದೇ ವೇಳೆ ಕೋವಿಡ್ ಸಾಂಕ್ರಾಮಿಕ ಸಂದರ್ಭದಲ್ಲಿ ಪ್ರಧಾನಿ ಮೋದಿ ಕೈಗೊಂಡ ಕ್ರಮಗಳ ಕುರಿತು ಶ್ಲಾಘಿಸಿದ ತ್ರಿವೇದಿ, ನೆರೆಯ ರಾಷ್ಟ್ರಗಳನ್ನೂ ಒಳಗೊಂಡಂತೆ ಪ್ರಧಾನಿ ಮೋದಿ ನೆರವಾಗುತ್ತಿದ್ದಾರೆ. ಇದು ನಿಜಕ್ಕೂ ಶ್ಲಾಘನೀಯ ಎಂದು ಹೇಳಿದ್ದಾರೆ.

ಇದಕ್ಕೂ ಮೊದಲು ತ್ರಿವೇದಿ ಸೇರ್ಪಡೆ ಕುರಿತು ಮಾತನಾಡಿ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು, ದಿನೇಶ್ ತ್ರಿವೇದಿ ಅವರು ಸೈದ್ಧಾಂತಿಕ ನಾಯಕ. ಅವರು ಒಬ್ಬ ಉತ್ತಮ ವ್ಯಕ್ತಿ. ಆದರೆ ಈ ಹಿಂದೆ ತಪ್ಪು ಪಕ್ಷದಲ್ಲಿ ಗುರುತಿಸಿಕೊಂಡಿದ್ದರು. ಇದೀಗ ಅವರು ಉತ್ತಮ ಪಕ್ಷಕ್ಕೆ ಬಂದಿದ್ದಾರೆ ಎಂದು ಹೇಳಿದರು. 

ಇನ್ನು ಬಂಗಾಳ ಚುನಾವಣೆ ಘೋಷಣೆಯಾಗಿದ್ದು, ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಪಕ್ಷದ 10 ವರ್ಷಗಳ ಸರ್ಕಾರವನ್ನು ಸೋಲಿಸಿ ಅಧಿಕಾರದ ಗದ್ದುಗೆ ಹಿಡಿಯಲು ಪಣತೊಟ್ಟಿ ನಿಂತಿರುವ ಬಿಜೆಪಿ ಹಲವು ಟಿಎಂಸಿ ನಾಯಕರನ್ನು ತನ್ನ ಪಕ್ಷಕ್ಕೆ ಸೇರಿಸಿಕೊಂಡಿದೆ. ಇದಕ್ಕೆ 70 ವರ್ಷದ ದಿವೇಶ್ ತ್ರಿವೇದಿ ಹೊಸ ಸೇರ್ಪಡೆ. ದಿನೇಶ್ ತ್ರಿವೇದಿ ಬಂಗಾಳ ಸಿಎಂ ಮತ್ತು ಟಿಎಂಸಿ ಅಧಿನಾಯಕಿ ಮಮತಾ ಬ್ಯಾನರ್ಜಿ ಅವರ ಆಪ್ತರಾಗಿದ್ದರು. 2019 ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಸೋತ ನಂತರ ಅವರನ್ನು ರಾಜ್ಯಸಭೆಗೆ ಪಕ್ಷ ಕಳುಹಿಸಲಾಗಿತ್ತು. ಆದರೆ ಬಳಿಕ ಉಂಟಾಗಿದ್ದ ಭಿನ್ನಾಭಿಪ್ರಾಯದಿಂದಾಗಿ ತ್ರಿವೇದಿ ಅವರನ್ನು ಟಿಎಂಸಿ ಪಕ್ಷದಿಂದ ಉಚ್ಛಾಟಿಸಲಾಗಿತ್ತು.  

Stay up to date on all the latest ರಾಷ್ಟ್ರೀಯ news
Poll
Mamata_PM_Modi1

ಕೋವಿಡ್ ಉಲ್ಬಣದ ಕಾರಣ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮತ್ತು ಟಿಎಂಸಿ ಸಾಮೂಹಿಕ ಚುನಾವಣಾ ಪ್ರಚಾರವನ್ನು ಸ್ಥಗಿತಗೊಳಿಸಬೇಕೇ?


Result
ಹೌದು
ಬೇಡ
flipboard facebook twitter whatsapp