ಚುನಾವಣೆ ಇರುವ ರಾಜ್ಯಗಳಲ್ಲಿ ಕೊರೋನಾ ಲಸಿಕೆ ಸರ್ಟಿಫಿಕೇಟ್ ನಲ್ಲಿ ಪ್ರಧಾನಿ ಮೋದಿ ಫೋಟೋ ಹಾಕಬೇಡಿ: ಕೇಂದ್ರಕ್ಕೆ ಚುನಾವಣಾ ಆಯೋಗ ಸೂಚನೆ

ಮುಂಬರುವ ದಿನಗಳಲ್ಲಿ ಚುನಾವಣೆಯಿರುವ ರಾಜ್ಯಗಳಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಕೊರೋನಾ ವೈರಸ್ ಲಸಿಕೆ ಪ್ರಮಾಣಪತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಫೋಟೋಗಳನ್ನು ಪ್ರಕಟಿಸಬಾರದೆಂದು ಚುನಾವಣಾ ಆಯೋಗ ಕೇಂದ್ರ ಸರ್ಕಾರಕ್ಕೆ ಆದೇಶ ನೀಡಿದೆ.

Published: 06th March 2021 12:40 PM  |   Last Updated: 06th March 2021 01:09 PM   |  A+A-


Chief Election Commissioner Sunil Arora (C) with Election Commissioners Sushil Chandra (L) and Rajiv Kumar addresses a press conference.

ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರ, ಚುನಾವಣಾಧಿಕಾರಿಗಳಾದ ಸುಶಿಲ್ ಚಂದ್ರ ಮತ್ತು ರಾಜೀವ್ ಕುಮಾರ್ ಜೊತೆಗೆ

Posted By : Sumana Upadhyaya
Source : PTI

ನವದೆಹಲಿ: ಮುಂಬರುವ ದಿನಗಳಲ್ಲಿ ಚುನಾವಣೆಯಿರುವ ಪಂಚ ರಾಜ್ಯಗಳಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಕೊರೋನಾ ವೈರಸ್ ಲಸಿಕೆ ಪ್ರಮಾಣಪತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಫೋಟೋಗಳನ್ನು ಪ್ರಕಟಿಸಬಾರದೆಂದು ಚುನಾವಣಾ ಆಯೋಗ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದೆ.

ಲಸಿಕೆ ಪ್ರಮಾಣ ಪತ್ರದಲ್ಲಿ ಪ್ರಧಾನಿ ಮೋದಿಯವರ ಫೋಟೋಗಳನ್ನು ತೆಗೆದುಹಾಕಬೇಕೆಂದು ಪಶ್ಚಿಮ ಬಂಗಾಳದಲ್ಲಿ ಆಡಳಿತಾರೂಢ ಟಿಎಂಸಿ ಕಳೆದ ಮಂಗಳವಾರ ಚುನಾವಣಾ ಆಯೋಗದ ಮೊರೆ ಹೋಗಿತ್ತು. ಕೋವಿನ್ ಪ್ಲಾಟ್ ಫಾರ್ಮ್ ನಲ್ಲಿ ತಯಾರಾಗುವ ಲಸಿಕೆ ಪ್ರಮಾಣಪತ್ರದಲ್ಲಿ ಪ್ರಧಾನಿಯವರ ಫೋಟೋ ಹಾಕುವ ಮೂಲಕ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದಂತಾಗುತ್ತದೆ ಎಂದು ಅದು ಆರೋಪಿಸಿತ್ತು.

ಟಿಎಂಸಿ ಆರೋಪಕ್ಕೆ ಸಂಬಂಧಪಟ್ಟಂತೆ ಕೇಂದ್ರ ಚುನಾವಣಾ ಆಯೋಗ ಪಶ್ಚಿಮ ಬಂಗಾಳ ಮುಖ್ಯ ಚುನಾವಣಾಧಿಕಾರಿ ಬಳಿ ವರದಿ ಕೇಳಿದೆ. ಮುಖ್ಯ ಚುನಾವಣಾಧಿಕಾರಿಯ ವರದಿ ಪ್ರಕಾರ, ಆರೋಗ್ಯ ಸಚಿವಾಲಯ ಒಂದು ವ್ಯವಸ್ಥೆಯನ್ನು ಅಳವಡಿಸಿಕೊಂಡು ಅದರಲ್ಲಿ 5 ರಾಜ್ಯಗಳಲ್ಲಿ ಕೋವಿಡ್ ಲಸಿಕೆಯನ್ನು ಪಡೆದ ನಂತರ ನೀಡುವ ಪ್ರಮಾಣ ಪತ್ರದಲ್ಲಿ ಮಾರ್ಚ್ 27ರಿಂದ ಪ್ರಧಾನಿ ಮೋದಿಯವರ ಫೋಟೋಗಳನ್ನು ಪ್ರಕಟಿಸಬಾರದೆಂದು ಚುನಾವಣಾ ಆಯೋಗ ಸೂಚನೆ ನೀಡಿದೆ.

Stay up to date on all the latest ರಾಷ್ಟ್ರೀಯ news
Poll
Kumbh-Covid-19

ಚುನಾವಣಾ ಸಮಾವೇಶ, ಕುಂಭಮೇಳ, ಧಾರ್ಮಿಕ ಸಭೆಗಳು ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಹದಗೆಡಿಸುತ್ತಿವೆಯೇ?


Result
ಹೌದು, ಅದು ನಿಜ.
ಇಲ್ಲ, ಖಂಡಿತ ಅಲ್ಲ.
flipboard facebook twitter whatsapp