ರೈತರ ಮಕ್ಕಳು ಪ್ರಾಣ ಪಣಕ್ಕಿಟ್ಟು ಗಡಿ ಕಾಯುತ್ತಿದ್ದಾರೆ, ಆದರೆ ಕೇಂದ್ರದಿಂದ ಅನ್ನದಾತರ ಮೇಲೆ ದೌರ್ಜನ್ಯ: ರಾಹುಲ್

ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೂರು ಹೊಸ ಕೃಷಿ ಕಾನೂನುಗಳ ವಿರುದ್ಧ ರಾಷ್ಟ್ರ ರಾಜಧಾನಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಶನಿವಾರ ನೂರನೇ ದಿನಕ್ಕೆ ಕಾಲಿಟ್ಟಿದ್ದು,...

Published: 06th March 2021 03:22 PM  |   Last Updated: 06th March 2021 03:22 PM   |  A+A-


Rahul Gandhi

ರಾಹುಲ್ ಗಾಂಧಿ

Posted By : Lingaraj Badiger
Source : PTI

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೂರು ಹೊಸ ಕೃಷಿ ಕಾನೂನುಗಳ ವಿರುದ್ಧ ರಾಷ್ಟ್ರ ರಾಜಧಾನಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಶನಿವಾರ ನೂರನೇ ದಿನಕ್ಕೆ ಕಾಲಿಟ್ಟಿದ್ದು, ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಪ್ರತಿಭಟನೆಗೆ ಸ್ಪಂದಿಸದ ಕೇಂದ್ರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ದೆಹಲಿಯಲ್ಲಿ ಗಡಿಯಲ್ಲ ಪ್ರತಿಭಟನೆ ನಡೆಸುತ್ತಿರುವ ರೈತರ ಮಕ್ಕಳು ಪ್ರಾಣ ಪಣಕ್ಕಿಟ್ಟು ಗಡಿ ಕಾಯುತ್ತಿದ್ದಾರೆ. ಆದರೆ ಕೇಂದ್ರ ಸರ್ಕಾರ ಅನ್ನದಾತರ ಮೇಲೆ ದೌರ್ಜನ್ಯ ನಡೆಸುತ್ತಿದೆ ಎಂದು ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೇಶದ ಗಡಿಯಲ್ಲಿ ರೈತರ ಮಕ್ಕಳು ಪ್ರಾಣವನ್ನೇ ಪಣಕ್ಕಿಟ್ಟು ಗಡಿ ಕಾಯುತ್ತಿದ್ದಾರೆ. ಅತ್ತ ದೆಹಲಿ ಗಡಿಯಲ್ಲಿ ಮೊಳೆಯನ್ನು ಹಾಕಲಾಗಿದೆ. ಅನ್ನದಾತರು ತಮ್ಮ ಹಕ್ಕಿಗಾಗಿ ಹೋರಾಡುತ್ತಿದ್ದಾರೆ. ಆದರೆ ಕೇಂದ್ರ ಸರ್ಕಾರ ಅವರ ಮೇಲೆ ದೌರ್ಜನ್ಯ ಎಸಗುತ್ತಿದೆ ಎಂದು ರಾಹುಲ್ ಗಾಂಧಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ವಿವಾದಿತ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರ ಪ್ರತಿಭಟನೆಗೆ ರಾಹುಲ್ ಗಾಂಧಿ ಮೊದಲಿನಿಂದಲೂ ಬೆಂಬಲ ನೀಡಿದ್ದು, ಈ ಸಂಬಂಧ ಕೇಂದ್ರದ ವಿರುದ್ಧ ಹಲವು ಬಾರಿ ವಾಗ್ದಾಳಿ ನಡೆಸಿದ್ದಾರೆ.

ಪ್ರತಿಭಟನಾನಿರತ ರೈತ ಸಂಘಗಳು ಮಾರ್ಚ್ 6 ಅನ್ನು ‘ಕಪ್ಪು ದಿನ’ವಾಗಿ ಆಚರಿಸುತ್ತಿದ್ದು, ಕುಂಡ್ಲಿ-ಮನೇಸರ್-ಪಾಲ್ವಾಲ್ (ಕೆಎಂಪಿ) ಎಕ್ಸ್‌ಪ್ರೆಸ್‌ವೇಯನ್ನು ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿವೆ.

Stay up to date on all the latest ರಾಷ್ಟ್ರೀಯ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp