ತಮಿಳುನಾಡು ಚುನಾವಣೆ: ಕಾಂಗ್ರೆಸ್‌ಗೆ 24 ಸ್ಥಾನ ಬಿಟ್ಟುಕೊಟ್ಟ ಡಿಎಂಕೆ, ಬೆಳಗ್ಗೆ 10 ಗಂಟೆಗೆ ಒಪ್ಪಂದಕ್ಕೆ ಸಹಿ!

ಡಿಎಂಕೆ ಅಧ್ಯಕ್ಷ ಎಂಕೆ ಸ್ಟಾಲಿನ್ ಅವರ ಅಲ್ವಾರ್ಪೇಟೆ ನಿವಾಸದಲ್ಲಿ ಶನಿವಾರ ತಡರಾತ್ರಿ ಮಾತುಕತೆ ನಡೆಸಿದ ನಂತರ ಕಾಂಗ್ರೆಸ್ ಜೊತೆ ಸೀಟು ಹಂಚಿಕೆ ಒಪ್ಪಂದವನ್ನು ಅಂತಿಮಗೊಳಿಸಿದೆ. ಭಾನುವಾರ ಬೆಳಿಗ್ಗೆ 10 ಗಂಟೆಗೆ ಒಪ್ಪಂದಕ್ಕೆ ಸಹಿ ಹಾಕಲಾಗುತ್ತದೆ.

Published: 07th March 2021 12:47 AM  |   Last Updated: 07th March 2021 12:51 AM   |  A+A-


Rahul-MK Stalin

ರಾಹುಲ್-ಎಂಕೆ ಸ್ಟಾಲಿನ್

Posted By : Vishwanath S
Source : UNI

ಚೆನ್ನೈ: ಡಿಎಂಕೆ ಅಧ್ಯಕ್ಷ ಎಂಕೆ ಸ್ಟಾಲಿನ್ ಅವರ ಅಲ್ವಾರ್ಪೇಟೆ ನಿವಾಸದಲ್ಲಿ ಶನಿವಾರ ತಡರಾತ್ರಿ ಮಾತುಕತೆ ನಡೆಸಿದ ನಂತರ ಕಾಂಗ್ರೆಸ್ ಜೊತೆ ಸೀಟು ಹಂಚಿಕೆ ಒಪ್ಪಂದವನ್ನು ಅಂತಿಮಗೊಳಿಸಿದೆ. ಭಾನುವಾರ ಬೆಳಿಗ್ಗೆ 10 ಗಂಟೆಗೆ ಒಪ್ಪಂದಕ್ಕೆ ಸಹಿ ಹಾಕಲಾಗುತ್ತದೆ.

ಆದರೆ, ಇದನ್ನು ಕಾಂಗ್ರೆಸ್ ನಾಯಕರು ಎಷ್ಟು ಸ್ಥಾನಗಳನ್ನು ಹಂಚಿಕೆ ಮಾಡಿದ್ದಾರೆ ಎಂಬುದನ್ನು ಬಹಿರಂಗಪಡಿಸಲು ನಿರಾಕರಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಹಸ್ತಕ್ಷೇಪದ ನಂತರ ತಡರಾತ್ರಿ ಸಭೆ ನಡೆದಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ.

ತಮಿಳುನಾಡಿನ ಉಸ್ತುವಾರಿ ಕಾಂಗ್ರೆಸ್ ನಾಯಕ ದಿನೇಶ್ ಗುಂಡು ರಾವ್ ಮತ್ತು ಟಿಎನ್‌ಸಿಸಿ ಅಧ್ಯಕ್ಷ ಕೆ.ಎಸ್.ಅಲಗಿರಿ ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಕೆ.ಆರ್.ರಾಮಸಾಮಿ ಅವರು ಸ್ಟಾಲಿನ್ ಅವರೊಂದಿಗೆ ಸುಮಾರು 20 ನಿಮಿಷಗಳ ಕಾಲ ಚರ್ಚೆ ನಡೆಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಗುಂಡು ರಾವ್, 'ನಮ್ಮ ಹೈಕಮಾಂಡ್‌ನ ಹಿರಿಯ ನಾಯಕರೊಂದಿಗೆ ಚರ್ಚಿಸಿದ ನಂತರ, ನಾವು ಡಿಎಂಕೆ ಮುಖ್ಯಸ್ಥ ಎಂ.ಕೆ ಸ್ಟಾಲಿನ್ ಅವರನ್ನು ಭೇಟಿ ಮಾಡಿದ್ದೇವೆ. ಸೀಟು ಹಂಚಿಕೆ ಕುರಿತು ನಾವು ಒಪ್ಪಂದಕ್ಕೆ ಬಂದಿದ್ದೇವೆ. ಭಾನುವಾರ ಬೆಳಿಗ್ಗೆ 10 ಗಂಟೆಗೆ ಒಪ್ಪಂದಕ್ಕೆ ಸಹಿ ಹಾಕಲಾಗುವುದು. 'ಪಕ್ಷಕ್ಕೆ ನಿಗದಿಪಡಿಸಿದ ಸ್ಥಾನಗಳ ಬಗ್ಗೆ ಕೇಳಿದಾಗ, ಮತದಾನ ಒಪ್ಪಂದಕ್ಕೆ ಸಹಿ ಹಾಕಿದ ನಂತರ ಅದನ್ನು ಭಾನುವಾರ ಬಹಿರಂಗಪಡಿಸಲಾಗುವುದು ಎಂದರು.


Stay up to date on all the latest ರಾಷ್ಟ್ರೀಯ news
Poll
Yediyurappa

ಯಡಿಯೂರಪ್ಪ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿ ತಮ್ಮ ಅವಧಿಯನ್ನು ಪೂರ್ಣಗೊಳಿಸಲು ಸಾಧ್ಯವಾಗುವುದೇ?


Result
ಹೌದು
ಇಲ್ಲ
flipboard facebook twitter whatsapp