ಉತ್ತರಾಖಂಡ್: ಬಿಜೆಪಿ ಕೋರ್ ಕಮಿಟಿ ದಿಢೀರ್ ಸಭೆ; ಸರ್ಕಾರದಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ

ಉತ್ತರಾಖಂಡ್ ನಲ್ಲಿ ಬಿಜೆಪಿಯ ಕೋರ್ ಕಮಿಟಿ ಸಭೆ ದಿಢೀರ್ ನಡೆದಿದ್ದು ಸರ್ಕಾರದಲ್ಲಿ ಮಹತ್ವದ ಬದಲಾವಣೆಗಳಾಗುವ ಸಾಧ್ಯತೆಗಳಿವೆ. 

Published: 07th March 2021 02:04 PM  |   Last Updated: 07th March 2021 02:04 PM   |  A+A-


Uttarakhand: Sudden meeting of BJP core group fuels speculation about major change in government

ಉತ್ತರಾಖಂಡ್ ಸಿಎಂ ತ್ರಿವೇಂದ್ರ ಸಿಂಗ್ ರಾವತ್

Posted By : Srinivas Rao BV
Source : The New Indian Express

ಡೆಹ್ರಾಡೂನ್: ಉತ್ತರಾಖಂಡ್ ನಲ್ಲಿ ಬಿಜೆಪಿಯ ಕೋರ್ ಕಮಿಟಿ ಸಭೆ ದಿಢೀರ್ ನಡೆದಿದ್ದು ಸರ್ಕಾರದಲ್ಲಿ ಮಹತ್ವದ ಬದಲಾವಣೆಗಳಾಗುವ ಸಾಧ್ಯತೆಗಳಿವೆ. 

ಶನಿವಾರ ಸಂಜೆ ಕೋರ್ ಕಮಿಟಿ ಸಭೆ ನಡೆದಿದ್ದು, ಚತ್ತೀಸ್ ಗಢದ ಮಾಜಿ ಸಿಎಂ, ಬಿಜೆಪಿಯ ರಾಷ್ಟ್ರೀಯ ಉಪಾಧ್ಯಕ್ಷ                  ರಮಣ್ ಸಿಂಗ್ ನೇತೃತ್ವದಲ್ಲಿ ಕೋರ್ ಕಮಿಟಿ ಸಭೆ ನಡೆದಿದ್ದು, ಬಿಜೆಪಿ ಉಸ್ತುವಾರಿ ದುಷ್ಯಂತ್ ಕುಮಾರ್ ಗೌತಮ್ ಸಹ ಭಾಗಿಯಾಗಿದ್ದರು. 

ಪೂರ್ವನಿಗದಿತ ವೇಳಾಪಟ್ಟಿ ಇಲ್ಲದೇ ದಿಢೀರ್ ಕೋರ್ ಕಮಿಟಿ ಸಭೆ ನಡೆದಿದ್ದು ಹಲವು ಊಹಾಪೋಹಗಳಿಗೆ ಕಾರಣವಾಗಿದೆ. ಗೈರ್ಸೇನ್ ನಲ್ಲಿ ಬಜೆಟ್ ಅಧಿವೇಶನದ ಸಮಯದಲ್ಲಿ ಈ ಕೋರ್ ಕಮಿಟಿ ಸಭೆ ನಡೆದಿರುವುದು ಕುತೂಹಲ ಮೂಡಿಸಿದೆ. 

ಬೇಸಿಗೆ ರಾಜಧಾನಿ ಭರಾರಿಸೈನ್‌ (ಗೈರ್‌ಸೈನ್‌) ನಿಂದ ಬಿಜೆಪಿ ಶಾಸಕರು, ಸಿಎಂ ತ್ರಿವೇಂದ್ರ ಸಿಂಗ್ ರಾವತ್ ಡೆಹ್ರಾಡೂನ್ ಗೆ ದೌಡಾಯಿಸಿದ್ದು ಸಚಿವ ಸಂಪುಟ ವಿಸ್ತರಣೆಯ ಸುಳಿವು ಇದಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.
 
ಕೋರ್ ಕಮಿಟಿ ಸದಸ್ಯರಾದ ರಾಜ್ಯಸಭಾ ಸದಸ್ಯ ನರೇಶ್ ಬನ್ಸಾಲ್, ತೇಹ್ರಿ ಸಂಸದರಾದ ಮಾಲಾ ರಾಜ್ಯ ಲಕ್ಷ್ಮಿ ಶಾ, ಮಾಜಿ ಸಿಎಂ ವಿಜಯ್ ಬಹುಗುಣ, ನೈನಿತಾಲ್ ನ ಸಂಸದರಾದ ಅಜಯ್ ಭಟ್, ಸಚಿವ ಮದನ್ ಕೌಶಿಕ್, ರಾಜ್ಯ ಸಚಿವ ಧನ್ ಸಿಂಗ್ ರಾವತ್, ಬಿಜೆಪಿ ಪ್ರಧಾನ ಕಾರ್ಯದರ್ಶಿ ಅಜಯ್ ಕುಮಾರ್ ಸುಮಾರು 2 ಗಂಟೆಗಳ ಕಾಲ ನಡೆದ ಸಭೆಯಲ್ಲಿ ಭಾಗವಹಿಸಿದ್ದರು. 

ಕೋರ್ ಕಮಿಟಿ ಪ್ರತಿ ಸದಸ್ಯರೊಂದಿಗೆ ರಮಣ್ ಸಿಂಗ್ ಪ್ರತ್ಯೇಕ ಮಾತುಕತೆ ನಡೆಸಿ, ಪ್ರತಿಕ್ರಿಯೆ ಸಂಗ್ರಹಿಸಿದ್ದಾರೆ. ಬಳಿಕ ಮುಖ್ಯಮಂತ್ರಿಗಳ ಅಧಿಕೃತ ನಿವಾಸ, ಆರ್ ಎಸ್ಎಸ್ ಕಚೇರಿಗೂ ರಮಣ್ ಸಿಂಗ್ ಭೇಟಿ ನೀಡಿ ಮಾತುಕತೆ ನಡೆಸಿದರು.

Stay up to date on all the latest ರಾಷ್ಟ್ರೀಯ news
Poll
Mamata_PM_Modi1

ಕೋವಿಡ್ ಉಲ್ಬಣದ ಕಾರಣ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮತ್ತು ಟಿಎಂಸಿ ಸಾಮೂಹಿಕ ಚುನಾವಣಾ ಪ್ರಚಾರವನ್ನು ಸ್ಥಗಿತಗೊಳಿಸಬೇಕೇ?


Result
ಹೌದು
ಬೇಡ
flipboard facebook twitter whatsapp