ಭೀಮಾ ಕೋರೆಗಾಂವ್‌ ಪ್ರಕರಣ: ಹೋರಾಟಗಾರ ವರವರ ರಾವ್ ಆಸ್ಪತ್ರೆಯಿಂದ ಡಿಸ್ಚಾರ್ಜ್

ಎಲ್ಗಾರ್ ಪರಿಷತ್ ಪ್ರಕರಣ, ಮಾವೋವಾದಿಗಳೊಂದಿಗೆ ನಂಟು ಹೊಂದಿರುವ ಆರೋಪ ಎದುರಿಸುತ್ತಿರುವ ಕವಿ, ಹೋರಾಟಗಾರ ವರವರ ರಾವ್ ಅವರು ನಾನಾವತಿ ಆಸ್ಪತ್ರೆಯಿಂದ ಶನಿವಾರ ರಾತ್ರಿ ಬಿಡುಗಡೆಯಾಗಿದ್ದಾರೆ.

Published: 07th March 2021 11:12 AM  |   Last Updated: 07th March 2021 11:12 AM   |  A+A-


Varavara rao

ವರವರ ರಾವ್

Posted By : Shilpa D
Source : PTI

ಮುಂಬೈ: ಎಲ್ಗಾರ್ ಪರಿಷತ್ ಪ್ರಕರಣ, ಮಾವೋವಾದಿಗಳೊಂದಿಗೆ ನಂಟು ಹೊಂದಿರುವ ಆರೋಪ ಎದುರಿಸುತ್ತಿರುವ ಕವಿ, ಹೋರಾಟಗಾರ ವರವರ ರಾವ್ ಅವರು ನಾನಾವತಿ ಆಸ್ಪತ್ರೆಯಿಂದ ಶನಿವಾರ ರಾತ್ರಿ ಬಿಡುಗಡೆಯಾಗಿದ್ದಾರೆ.

82 ವರ್ಷದ ರಾವ್ ಅವರಿಗೆ ಫೆಬ್ರುವರಿ 22ರಂದು ವೈದ್ಯಕೀಯ ಕಾರಣಗಳಿಗಾಗಿ ಬಾಂಬೆ ಹೈಕೋರ್ಟ್ ಆರು ತಿಂಗಳ ಮಧ್ಯಂತರ ಜಾಮೀನು ನೀಡಿತ್ತು. ದಲಿತರು ಮರಾಠಾ ಪೇಶ್ವೆಗಳ ವಿರುದ್ಧ ಯುದ್ಧದಲ್ಲಿ ಜಯಗಳಿಸಿದ ದ್ವಿಶತಮಾನೋತ್ಸವ ಆಚರಣೆ ಸಂದರ್ಭದಲ್ಲಿ ಭೀಮಾ ಕೋರೆಗಾಂವ್‌ನಲ್ಲಿ 2018ರ ಜನವರಿ 1ರಂದು ಹಿಂಸಾಚಾರ ನಡೆದಿತ್ತು. 

ಇಬ್ಬರ ಶೂರಿಟಿ ಹಾಗೂ 50 ಸಾವಿರ ರು ಬಾಂಡ್ ನೀಡುವಂತೆ ಕೋರ್ಟ್ ಆದೇಶಿಸಿತ್ತು. ಸೂಕ್ತ ಜಾಮೀನುದಾರರು ದೊರೆಯುವವರೆಗೂ ನಗದು ಜಾಮೀನು ನೀಡಲು ಅವಕಾಶ ನೀಡಬೇಕು ಎಂದು ಅವರು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.

ಆಸ್ಪತ್ರೆಯಿಂದ ಬಿಡುಗಡೆಯಾದ ಕೂಡಲೇ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಬೇಕು ಎಂದು ನ್ಯಾಯಾಲಯವು ಆದೇಶಿಸಿತ್ತು. ಬಂಧನದಲ್ಲಿದ್ದ ರಾವ್ ಅವರನ್ನು ಅನಾರೋಗ್ಯದ ಕಾರಣ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

Stay up to date on all the latest ರಾಷ್ಟ್ರೀಯ news
Poll
Mamata_PM_Modi1

ಕೋವಿಡ್ ಉಲ್ಬಣದ ಕಾರಣ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮತ್ತು ಟಿಎಂಸಿ ಸಾಮೂಹಿಕ ಚುನಾವಣಾ ಪ್ರಚಾರವನ್ನು ಸ್ಥಗಿತಗೊಳಿಸಬೇಕೇ?


Result
ಹೌದು
ಬೇಡ
flipboard facebook twitter whatsapp