ಬಿಜೆಪಿಗೆ ಸೇರ್ಪಡೆಗೊಂಡ ನಟ ಮಿಥುನ್ ಚಕ್ರವರ್ತಿ

ಬಾಲಿವುಡ್'ನ ಖ್ಯಾತ ಹಿರಿಯ ನಟ ಮಿಥುನಾ ಚಕ್ರವರ್ತಿಯವರು ಭಾನುವಾರ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

Published: 07th March 2021 01:28 PM  |   Last Updated: 07th March 2021 02:04 PM   |  A+A-


Mithun Chakraborty

ಮಿಥುನ್ ಚಕ್ರವರ್ತಿ

Posted By : Manjula VN
Source : Online Desk

ಕೋಲ್ಕತಾ: ಬಾಲಿವುಡ್'ನ ಖ್ಯಾತ ಹಿರಿಯ ನಟ ಮಿಥುನಾ ಚಕ್ರವರ್ತಿಯವರು ಭಾನುವಾರ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

ಕೋಲ್ಕತಾದಲ್ಲಿ ಆಯೋಜಿಸಲಾದ ಚುನಾವಣಾ ರ್ಯಾಲಿಯಲ್ಲಿ ಬಿಜೆಪಿ ಪಕ್ಷದ ಧ್ವಜವನ್ನು ಹಾರಿಸುವ ಮೂಲಕ ಪಶ್ಚಿಮ ಬಂಗಾಳದ ಬಿಜೆಪಿ ಹಿರಿಯ ನಾಯಕರ ಸಮ್ಮುಖದಲ್ಲಿ ಮಿಥುನಾ ಚಕ್ರವರ್ತಿಯವರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಬಿಜೆಪಿ ನಾಯಕ ಕೈಲಾಶ್ ವಿಜಯವರ್ಗೀಯ ಹಾಗೂ ಇನ್ನಿತರೆ ನಾಯಕರು ಶಾಲು ಹೊದಿಸುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು. ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರೂ ಭಾಗವಹಿಸಲಿದ್ದು, ಭಾಷಣ ಮಾಡಲಿದ್ದಾರೆಂದು ತಿಳಿದುಬಂದಿದೆ.

ಫೆ.16ರಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಅವರು ಮಿಥುನ್‌ ಚಕ್ರವರ್ತಿ ಅವರನ್ನು ಭೇಟಿ ಮಾಡಿದ ಬೆನ್ನಲ್ಲೇ ಮಿಥುನ್‌ ಅವರ ರಾಜಕೀಯ ಸೇರ್ಪಡೆ ಬಗ್ಗೆ ವದಂತಿಗಳು ಹರಿದಾಡುತ್ತಿದ್ದವು.

70 ವರ್ಷದ ನಟ ಮಿಥುನ್‌ ಚಕ್ರವರ್ತಿ ಅವರು ರಾಜ್ಯದಲ್ಲಿ ಸಾಕಷ್ಟುಅಭಿಮಾನಿಗಳನ್ನು ಹೊಂದಿದ್ದಾರೆ. ಈ ಹಿಂದೆ ಸಿಪಿಎಂಗೆ ಆಪ್ತರಾಗಿದ್ದ ಮಿಥುನ್‌, ಕೆಲಕಾಲ ಟಿಎಂಸಿ ಸಂಸದರಾಗಿ ಶಾರದಾ ಚಿಟ್‌ಫಂಡ್‌ ಹಗರಣಕ್ಕೆ ಸಂಬಂಧಿಸಿದಂತೆ ರಾಜೀನಾಮೆ ನೀಡಿದ್ದರು.


Stay up to date on all the latest ರಾಷ್ಟ್ರೀಯ news
Poll
kangana ranaut

ಗುಲಾಮರು ಇಟ್ಟಿರುವ 'ಇಂಡಿಯಾ' ಹೆಸರನ್ನು 'ಭಾರತ್' ಎಂದು ಬದಲಾಯಿಸುವಂತೆ ಕಂಗನಾ ರಣಾವತ್ ಹೇಳಿದ್ದಾರೆ. ನೀವು ಏನಂತೀರಿ?


Result
ಹೌದು, ಅವರು ಹೇಳಿದ್ದು ಸರಿ.
ಇಲ್ಲ, ಇದು ತುಂಬಾ ಸಿಲ್ಲಿ.
flipboard facebook twitter whatsapp