ಉತ್ತರಾಖಂಡದಲ್ಲಿ ನಾಯಕತ್ವ ಬದಲಾವಣೆಗೆ ಬಿಜೆಪಿ ಮುಂದು, ಸಚಿವ ಧನ್ ಸಿಂಗ್ ರಾವತ್ ನೂತನ ಸಿಎಂ?
ಉತ್ತರಾಖಂಡದಲ್ಲಿ ನಾಯಕತ್ವದ ಬದಲಾವಣೆಗೆ ಮುಂದಾಗಿರುವ ಬಿಜೆಪಿ, ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಅವರನ್ನು ಕೆಳಗಿಳಿಸಿ, ಸಚಿವ ಧನ್ ಸಿಂಗ್ ರಾವತ್ ಅವರನ್ನು ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡುವ ಸಾಧ್ಯತೆ ಇದೆ.
Published: 09th March 2021 04:01 PM | Last Updated: 09th March 2021 05:22 PM | A+A A-

ಧನ್ ಸಿಂಗ್ ರಾವತ್
ನವದೆಹಲಿ: ಉತ್ತರಾಖಂಡದಲ್ಲಿ ನಾಯಕತ್ವದ ಬದಲಾವಣೆಗೆ ಮುಂದಾಗಿರುವ ಬಿಜೆಪಿ, ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಅವರನ್ನು ಕೆಳಗಿಳಿಸಿ, ಸಚಿವ ಧನ್ ಸಿಂಗ್ ರಾವತ್ ಅವರನ್ನು ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡುವ ಸಾಧ್ಯತೆ ಇದೆ.
ಕುಮಾವೂನ್ ಪ್ರದೇಶದ ನಾಯಕ ಪುಷ್ಕರ್ ಸಿಂಗ್ ಧಮಿ ಅವರನ್ನು ಉಪ ಮುಖ್ಯಮಂತ್ರಿ ಮಾಡಬಹುದು ಎಂದು ಪಕ್ಷದ ಮೂಲಗಳು ತಿಳಿಸಿವೆ.
ಮುಖ್ಯಮಂತ್ರಿ ವಿರುದ್ಧದ ಅಸಮಾಧಾನದ ವರದಿಯ ಮಧ್ಯೆ, ರಾಜ್ಯದ ಪಕ್ಷದ ಪ್ರಮುಖ ಗುಂಪಿನಿಂದ ಪ್ರತಿಕ್ರಿಯೆ ಪಡೆಯಲು ಬಿಜೆಪಿ ಕೇಂದ್ರ ನಾಯಕರು, ಇತ್ತೀಚೆಗೆ ಪಕ್ಷದ ಉಪಾಧ್ಯಕ್ಷ ರಮಣ್ ಸಿಂಗ್ ಮತ್ತು ಪ್ರಧಾನ ಕಾರ್ಯದರ್ಶಿ ದುಷ್ಯಂತ್ ಕುಮಾರ್ ಗೌತಮ್ ಅವರನ್ನು ಉತ್ತರಾಖಂಡ್ ಗೆ ಕಳುಹಿಸಿದೆ. ಅಲ್ಲದೆ ಈ ಇಬ್ಬರು ನಾಯಕರು ರಾಜ್ಯ ಬಿಜೆಪಿ ಕೋರ್ ಕಮಿಟಿ ಸದಸ್ಯರ ಜತೆ ರಾಜಕೀಯ ಪರಿಸ್ಥಿತಿ ಕುರಿತು ನಡೆಸಿದ ಮಾತುಕತೆಯ ವರದಿಯನ್ನು ಪಕ್ಷದ ಅಧ್ಯಕ್ಷ ಜೆ.ಪಿ ನಡ್ಡಾ ಅವರಿಗೆ ಸಲ್ಲಿಸಿದ್ದಾರೆ ಎನ್ನಲಾಗಿದೆ.
ಉತ್ತರಾಖಂಡದಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ಹೆಚ್ಚುತ್ತಿರುವ ಊಹಾಪೋಹಗಳ ನಡುವೆ ಸಿಎಂ ರಾವತ್ ಅವರು ಇಂದು ಬೆಳಗ್ಗೆ ದೆಹಲಿಗೆ ದೌಡಾಯಿಸಿದ್ದಾರೆ.