ಕೊಲ್ಕತ್ತಾದಲ್ಲಿ ಅಗ್ನಿ ಅವಘಡ: 4 ಅಗ್ನಿಶಾಮಕ ಸಿಬ್ಬಂದಿ, ಪೊಲೀಸ್ ಸೇರಿದಂತೆ ಒಂಬತ್ತು ಮಂದಿ ಸಜೀವ ದಹನ!

ಬಹುಮಹಡಿ ಕಟ್ಟಡದ 13ನೇ ಮಹಡಿಯಲ್ಲಿ ಸೋಮವಾರ ರಾತ್ರಿ ಸಂಭವಿಸಿದ ಬೆಂಕಿಯಲ್ಲಿ ನಾಲ್ವರು ಅಗ್ನಿಶಾಮಕ ದಳ, ರೈಲ್ವೆ ಅಧಿಕಾರಿ, ಆರ್‌ಪಿಎಫ್ ಕಾನ್‌ಸ್ಟೆಬಲ್ ಮತ್ತು ಕೋಲ್ಕತಾ ಪೊಲೀಸರ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಸೇರಿದಂತೆ ಒಂಬತ್ತು ಮಂದಿ ಮೃತಪಟ್ಟಿದ್ದಾರೆ.

Published: 09th March 2021 01:33 AM  |   Last Updated: 09th March 2021 01:33 AM   |  A+A-


Fire-breaks

ಅಗ್ನಿ ಅವಘಡ

Posted By : Vishwanath S
Source : The New Indian Express

ಕೋಲ್ಕತಾ: ಬಹುಮಹಡಿ ಕಟ್ಟಡದ 13ನೇ ಮಹಡಿಯಲ್ಲಿ ಸೋಮವಾರ ರಾತ್ರಿ ಸಂಭವಿಸಿದ ಬೆಂಕಿಯಲ್ಲಿ ನಾಲ್ವರು ಅಗ್ನಿಶಾಮಕ ದಳ, ರೈಲ್ವೆ ಅಧಿಕಾರಿ, ಆರ್‌ಪಿಎಫ್ ಕಾನ್‌ಸ್ಟೆಬಲ್ ಮತ್ತು ಕೋಲ್ಕತಾ ಪೊಲೀಸರ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಸೇರಿದಂತೆ ಒಂಬತ್ತು ಮಂದಿ ಮೃತಪಟ್ಟಿದ್ದಾರೆ.

ಬಹುಮಡಿ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಒಂಬತ್ತು ಮಂದಿ ಮೃತಪಟ್ಟಿದ್ದಾರೆ ಎಂದು ಪಶ್ಚಿಮ ಬಂಗಾಳ ಸರ್ಕಾರದ ಎಂಐಸಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸುಜಿತ್ ಬೋಸ್ ತಿಳಿಸಿದ್ದಾರೆ.

ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. 6 ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ.

ಘಟನಾ ಸ್ಥಳಕ್ಕೆ ಧಾವಿಸಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮೃತ ಕುಟುಂಬಕ್ಕೆ ತಲಾ 10 ಲಕ್ಷ ರೂ.ಗಳ ಪರಿಹಾರ ಮತ್ತು ಮೃತ ಕುಟುಂಬಸ್ಥರಲ್ಲಿ ಒಬ್ಬರಿಗೆ ಸರ್ಕಾರಿ ಉದ್ಯೋಗವನ್ನು ನೀಡುವುದಾಗಿ ಘೋಷಿಸಿತು.

Stay up to date on all the latest ರಾಷ್ಟ್ರೀಯ news
Poll
Kumbh-Covid-19

ಚುನಾವಣಾ ಸಮಾವೇಶ, ಕುಂಭಮೇಳ, ಧಾರ್ಮಿಕ ಸಭೆಗಳು ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಹದಗೆಡಿಸುತ್ತಿವೆಯೇ?


Result
ಹೌದು, ಅದು ನಿಜ.
ಇಲ್ಲ, ಖಂಡಿತ ಅಲ್ಲ.
flipboard facebook twitter whatsapp