ಪುದುಚೇರಿ ಚುನಾವಣೆ: ಎನ್‌ಡಿಎ ಸೀಟು ಹಂಚಿಕೆ ಅಂತಿಮ, 16 ಕ್ಷೇತ್ರಗಳಲ್ಲಿ ಎನ್ಆರ್ ಕಾಂಗ್ರೆಸ್ ಸ್ಪರ್ಧೆ

ಭಾರೀ ಗೊಂದಲ ಮತ್ತು ಸುದೀರ್ಘ ಮಾತುಕತೆಗಳ ನಂತರ ಎನ್ ಆರ್ ಕಾಂಗ್ರೆಸ್ ಅಧ್ಯಕ್ಷ ಎನ್ ರಂಗಸ್ವಾಮಿ ಮಂಗಳವಾರ ಬಿಜೆಪಿ ಮತ್ತು ಎನ್‌ಡಿಎ ಜೊತೆ ಮೈತ್ರಿ ಮಾಡಿಕೊಳ್ಳಲು ಒಪ್ಪಿಕೊಂಡಿದ್ದು, ಸ್ಥಾನ ಹಂಚಿಕೆ ಅಂತಿಮಗೊಳಿಸಿದ್ದಾರೆ. 

Published: 09th March 2021 03:27 PM  |   Last Updated: 09th March 2021 03:27 PM   |  A+A-


nrc-bjp

ಎನ್ ಡಿಎ ಮೈತ್ರಿ ಅಂತಿಮ

Posted By : Lingaraj Badiger
Source : UNI

ಪುದುಚೇರಿ: ಭಾರೀ ಗೊಂದಲ ಮತ್ತು ಸುದೀರ್ಘ ಮಾತುಕತೆಗಳ ನಂತರ ಎನ್ ಆರ್ ಕಾಂಗ್ರೆಸ್ ಅಧ್ಯಕ್ಷ ಎನ್ ರಂಗಸ್ವಾಮಿ ಮಂಗಳವಾರ ಬಿಜೆಪಿ ಮತ್ತು ಎನ್‌ಡಿಎ ಜೊತೆ ಮೈತ್ರಿ ಮಾಡಿಕೊಳ್ಳಲು ಒಪ್ಪಿಕೊಂಡಿದ್ದು, ಸ್ಥಾನ ಹಂಚಿಕೆ ಅಂತಿಮಗೊಳಿಸಿದ್ದಾರೆ. 

ಇಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ರಂಗಸ್ವಾಮಿ, ಒಪ್ಪಂದದಂತೆ, 30 ಸ್ಥಾನಗಳ ಪೈಕಿ, ಎನ್‌ಆರ್ ಕಾಂಗ್ರೆಸ್ 16 ಸ್ಥಾನಗಳಲ್ಲಿ ಹಾಗೂ ಬಿಜೆಪಿ ಮತ್ತು ಎಐಎಡಿಎಂಕೆ ಉಳಿದ 14 ಸ್ಥಾನಗಳನ್ನು ಹಂಚಿಕೊಳ್ಳಲಿವೆ ಎಂದು ಹೇಳಿದರು.

ಮೈತ್ರಿಕೂಟ ಚುನಾವಣೆಯಲ್ಲಿ ಗೆದ್ದು ಪುದುಚೇರಿಯಲ್ಲಿ ಸರ್ಕಾರ ರಚಿಸುತ್ತದೆ. ಮೈತ್ರಿ ಪಕ್ಷಗಳು ಯಾವ ಕ್ಷೇತ್ರಗಳಿಗೆ ಸ್ಪರ್ಧಿಸಲಿವೆ ಎಂಬ ಕುರಿತು ಶೀಘ್ರದಲ್ಲೇ ನಿರ್ಧರಿಸಲಾಗುವುದು ಎಂದು ರಂಗಸ್ವಾಮಿ ಹೇಳಿದ್ದಾರೆ.

ಪಟ್ಟಾಳಿ ಮಕ್ಕಳ್ ಕಚ್ಚಿ(ಪಿಎಂಕೆ) ಕುರಿತ ಪ್ರಶ್ನಿಗೆ ಉತ್ತರಿಸಿದ ಪುದುಚೇರಿ ಬಿಜೆಪಿ ಉಸ್ತುವಾರಿ ನಿರ್ಮಲ್ ಕುಮಾರ್ ಸುರಾನಾ, ಬಿಜೆಪಿ, ಎನ್ಆರ್ ಕಾಂಗ್ರೆಸ್ ಮತ್ತು ಎಐಎಡಿಎಂಕೆ ಮಾತ್ರ ಎನ್‌ಡಿಎ ಮೈತ್ರಿಕೂಟದ ಪಕ್ಷಗಳಾಗಿವೆ ಎಂದು ಹೇಳಿದರು.

ತಮಿಳುನಾಡಿನಲ್ಲಿ ಪಿಎಂಕೆ ಎನ್‌ಡಿಎ ಜೊತೆ ಇದೆ. ಎಐಎಡಿಎಂಕೆ ನೇತೃತ್ವದ ಎನ್‌ಡಿಎಯಲ್ಲಿ ಪಿಎಂಕೆಗೆ 23 ಸ್ಥಾನಗಳನ್ನು ಹಂಚಿಕೆ ಮಾಡಿದೆ ಎಂಬುದನ್ನು ಇಲ್ಲಿ ಗಮನಿಸಬಹುದು.

Stay up to date on all the latest ರಾಷ್ಟ್ರೀಯ news
Poll
Mamata_PM_Modi1

ಕೋವಿಡ್ ಉಲ್ಬಣದ ಕಾರಣ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮತ್ತು ಟಿಎಂಸಿ ಸಾಮೂಹಿಕ ಚುನಾವಣಾ ಪ್ರಚಾರವನ್ನು ಸ್ಥಗಿತಗೊಳಿಸಬೇಕೇ?


Result
ಹೌದು
ಬೇಡ
flipboard facebook twitter whatsapp