ಅಂಬಾನಿ ನಿವಾಸದ ಬಳಿ ಸ್ಫೋಟಕ ತುಂಬಿದ ಸ್ಕಾರ್ಪಿಯೊ ಪ್ರಕರಣ ಎನ್‌ಐಎ ತನಿಖೆಗೆ: ಏನೋ ರಹಸ್ಯವಿದೆ ಎಂದ ಉದ್ಧವ್ ಠಾಕ್ರೆ

ಉದ್ಯಮಿ ಮುಕೇಶ್‌ ಅಂಬಾನಿ ಅವರ ಮುಂಬೈ ನಿವಾಸದ ಸಮೀಪ ಸ್ಪೋಟಕಗಳನ್ನು ತುಂಬಿದ ವಾಹನವನ್ನು ಜಪ್ತಿ ಮಾಡಿರುವ ಪ್ರಕರಣದ ತನಿಖೆಯನ್ನು ಸೋಮವಾರ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಕೈಗೆತ್ತಿಕೊಂಡಿದೆ.

Published: 09th March 2021 08:57 AM  |   Last Updated: 09th March 2021 12:35 PM   |  A+A-


uddhav thackeray

ಉದ್ದವ್ ಟಾಕ್ರೆ

Posted By : Shilpa D
Source : Online Desk

ಮುಂಬೈ: ಉದ್ಯಮಿ ಮುಕೇಶ್‌ ಅಂಬಾನಿ ಅವರ ಮುಂಬೈ ನಿವಾಸದ ಸಮೀಪ ಸ್ಪೋಟಕಗಳನ್ನು ತುಂಬಿದ ವಾಹನವನ್ನು ಜಪ್ತಿ ಮಾಡಿರುವ ಪ್ರಕರಣದ ತನಿಖೆಯನ್ನು ಸೋಮವಾರ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಕೈಗೆತ್ತಿಕೊಂಡಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಸಿಎಂ ಉದ್ಧವ್ ಠಾಕ್ರೆ 'ಈ ಪ್ರಕರಣದಲ್ಲಿ ಏನೋ ರಹಸ್ಯ ಅಡಗಿದೆ. ಆದ್ದರಿಂದಲೇ ಎನ್‌ಐಎ ತನಿಖೆಯನ್ನು ವಹಿಸಿಕೊಂಡಿದೆ. ಅದೇನೆಂದು ನಾವು ಖಚಿತವಾಗಿ ಬಯಲಿಗೆಳೆಯುತ್ತೇವೆ. ವಿರೋಧ ಪಕ್ಷಕ್ಕೆ ರಾಜ್ಯ ಸರ್ಕಾರದ ತನಿಖಾ ಸಂಸ್ಥೆಗಳ ಮೇಲೆ ನಂಬಿಕೆ ಇಲ್ಲ,' ಎಂದು ಹೇಳಿದರು.

ಕೇಂದ್ರ ಗೃಹ ಸಚಿವಾಲಯದ ಆದೇಶದಂತೆ ಎನ್‌ಐಎ ಈ ಪ್ರಕರಣ ವನ್ನು ಕೈಗೆತ್ತಿಕೊಳ್ಳುತ್ತಿರುವುದಾಗಿ ತನಿಖಾ ಸಂಸ್ಥೆಯ ವಕ್ತಾರರು ಸೋಮವಾರ ತಿಳಿಸಿದರು. ಎಸ್‌ಯುವಿ ಪತ್ತೆಯಾದ ಪ್ರಕರಣವನ್ನು ಎನ್‌ಐಎ ವಹಿಸಿಕೊಂಡಿದ್ದರೂ, ಎಸ್‌ಯುವಿ ಒಡೆತನ ಹೊಂದಿರುವ ಥಾಣೆ ಮೂಲದ ಉದ್ಯಮಿ ಮನ್ಸುಖ್ ಹಿರೆನ್ ಸಾವಿನ ಬಗ್ಗೆ ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ತನಿಖೆ ಮುಂದುವರಿಸಲಿದೆ ಎಂದು ಗೃಹ ಸಚಿವ ಅನಿಲ್‌ ದೇಶ್‌ಮುಖ್‌ ತಿಳಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ವಿರೋಧ ಪಕ್ಷವಾಗಿರುವ ಬಿಜೆಪಿಯ ತೀವ್ರ ಒತ್ತಡದ ಹಿನ್ನೆಲೆಯಲ್ಲಿ ಸರ್ಕಾರವೂ 'ಸ್ಕಾರ್ಪಿಯೊ' ಪ್ರಕರಣವನ್ನು ಭಯೋತ್ಪಾದನ ನಿಗ್ರಹ ಪಡೆ (ಎಟಿಎಸ್‌)ಗೆ ವಹಿಸಿತ್ತು. ಅದರ ಮರುದಿನವೇ ಪ್ರಕರಣವನ್ನು ಎನ್‌ಐಎ ಕೈಗೆತ್ತಿಕೊಂಡಿದೆ.
 

Stay up to date on all the latest ರಾಷ್ಟ್ರೀಯ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp