ಸಿಬಿಐಗೆ ಖಾಯಂ ನಿರ್ದೇಶಕರ ನೇಮಕ: ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೊಟೀಸ್ 

ಖಾಯಂ ಸಿಬಿಐ ನಿರ್ದೇಶಕರನ್ನು ನೇಮಕ ಮಾಡುವ ಸಂಬಂಧ ಸಲ್ಲಿಸಲಾಗಿದ್ದ ಮನವಿಗೆ ಸಂಬಂಧಪಟ್ಟಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಕೇಂದ್ರ ಸರ್ಕಾರದ ಬಳಿ ಪ್ರತಿಕ್ರಿಯೆ ಕೇಳಿದೆ.

Published: 12th March 2021 02:16 PM  |   Last Updated: 12th March 2021 02:29 PM   |  A+A-


CBI

ಸಿಬಿಐ

Posted By : Sumana Upadhyaya
Source : PTI

ನವದೆಹಲಿ: ಖಾಯಂ ಸಿಬಿಐ ನಿರ್ದೇಶಕರನ್ನು ನೇಮಕ ಮಾಡುವ ಸಂಬಂಧ ಸಲ್ಲಿಸಲಾಗಿದ್ದ ಮನವಿಗೆ ಸಂಬಂಧಪಟ್ಟಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಕೇಂದ್ರ ಸರ್ಕಾರದ ಬಳಿ ಪ್ರತಿಕ್ರಿಯೆ ಕೇಳಿದೆ.

ನ್ಯಾಯಮೂರ್ತಿಗಳಾದ ಎಲ್ ನಾಗೇಶ್ವರ ರಾವ್ ಮತ್ತು ಎಸ್ ರವೀಂದ್ರ ಭಟ್ ನೇತೃತ್ವದ ನ್ಯಾಯಪೀಠ, ಕಾಮನ್ ಕಾಸ್ ಎಂಬ ಎನ್ ಜಿಒ ಸಲ್ಲಿಸಿದ್ದ ಮನವಿಗೆ ನೊಟೀಸ್ ಜಾರಿ ಮಾಡಿದೆ. ಫೆಬ್ರವರಿ 2 ರಂದು ರಿಷಿ ಕುಮಾರ್ ಶುಕ್ಲಾ ಅವರ ಅವಧಿ ಮುಗಿದ ನಂತರ ದೆಹಲಿ ವಿಶೇಷ ಪೊಲೀಸ್ ಸ್ಥಾಪನೆ (ಡಿಎಸ್‌ಪಿಇ) ಕಾಯ್ದೆಯ ಸೆಕ್ಷನ್ 4 ಎ ಪ್ರಕಾರ, ಖಾಯಂ ಸಿಬಿಐ ನಿರ್ದೇಶಕರ ನೇಮಕಾತಿ ಮಾಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಎನ್ ಜಿಒ ಆರೋಪಿಸಿದೆ.

ದೇಶದ ಪ್ರಮುಖ ತನಿಖಾ ಸಂಸ್ಥೆಗೆ ಖಾಯಂ ನಿರ್ದೇಶಕರನ್ನು ನೇಮಿಸುವ ಬದಲು ಮಧ್ಯಂತರ ನಿರ್ದೇಶಕರನ್ನಾಗಿ ಪ್ರವೀಣ್ ಸಿನ್ಹ ಅವರನ್ನು ಸರ್ಕಾರ ನೇಮಿಸಿದೆ ಎಂದು ಎನ್ ಜಿಒ ಆರೋಪಿಸಿತ್ತು.

ಇಂದು ಆದೇಶ ಹೊರಡಿಸಿರುವ ಸುಪ್ರೀಂ ಕೋರ್ಟ್ ಸರ್ಕಾರಕ್ಕೆ ನೊಟೀಸ್ ಜಾರಿ ಮಾಡಿ, ಇನ್ನು ಎರಡು ವಾರಗಳಲ್ಲಿ ಪ್ರತಿಕ್ರಿಯೆ ನೀಡುವಂತೆ ಸೂಚಿಸಿದೆ.

ಎನ್‌ಜಿಒ ಪರ ಹಾಜರಾದ ವಕೀಲ ಪ್ರಶಾಂತ್ ಭೂಷಣ್, ಸಿಬಿಐನ ಕೆಲಸವು ಖಾಯಂ ನಿರ್ದೇಶಕರಿಲ್ಲದೆ ತೊಂದರೆಯಾಗುತ್ತಿದೆ ಎಂದು ವಾದಿಸಿದರು. ಮುಂದಿನ ವಾರಕ್ಕೆ ವಿಚಾರಣೆಯನ್ನು ಮುಂದೂಡಲಾಯಿತು.


Stay up to date on all the latest ರಾಷ್ಟ್ರೀಯ news
Poll
kangana ranaut

ಗುಲಾಮರು ಇಟ್ಟಿರುವ 'ಇಂಡಿಯಾ' ಹೆಸರನ್ನು 'ಭಾರತ್' ಎಂದು ಬದಲಾಯಿಸುವಂತೆ ಕಂಗನಾ ರಣಾವತ್ ಹೇಳಿದ್ದಾರೆ. ನೀವು ಏನಂತೀರಿ?


Result
ಹೌದು, ಅವರು ಹೇಳಿದ್ದು ಸರಿ.
ಇಲ್ಲ, ಇದು ತುಂಬಾ ಸಿಲ್ಲಿ.
flipboard facebook twitter whatsapp