ಪದ್ಮಭೂಷಣ ಪ್ರಶಸ್ತಿ ವಿಜೇತ ಖ್ಯಾತ ವರ್ಣಚಿತ್ರಕಾರ ಲಕ್ಷ್ಮಣ್ ಪೈ ನಿಧನ

ಖ್ಯಾತ ವರ್ಣಚಿತ್ರಕಾರ ಮತ್ತು ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ಲಕ್ಷ್ಮಣ್ ಪೈ (95) ಅವರು ಭಾನುವಾರ ಸಂಜೆ ಗೋವಾದ ತಮ್ಮ ನಿವಾಸದಲ್ಲಿ ನಿಧನರಾದರು.

Published: 15th March 2021 12:17 PM  |   Last Updated: 15th March 2021 12:59 PM   |  A+A-


ಲಕ್ಷ್ಮಣ ಪೈ

Posted By : Raghavendra Adiga
Source : Online Desk

ಪಣಜಿ: ಖ್ಯಾತ ವರ್ಣಚಿತ್ರಕಾರ ಮತ್ತು ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ಲಕ್ಷ್ಮಣ್ ಪೈ (95) ಅವರು ಭಾನುವಾರ ಸಂಜೆ ಗೋವಾದ ತಮ್ಮ ನಿವಾಸದಲ್ಲಿ ನಿಧನರಾದರು. ಅವರು ದೋಣ ಪೌಲಾದಲ್ಲಿರುವ ತಮ್ಮ ಮನೆಯಲ್ಲಿ ಕೊನೆಯುಸಿರೆಳೆದರು ಎಂದು  ಅವರ ಆಪ್ತ ಮೂಲಗಳು ತಿಳಿಸಿವೆ.

1926 ರಲ್ಲಿ ಗೋವಾದಲ್ಲಿ ಜನಿಸಿದ ಲಕ್ಷ್ಮಣ್ ಪೈ ಅವರಿಗೆ ಪದ್ಮಭೂಷಣ್, ಪದ್ಮಶ್ರೀ, ನೆಹರೂ ಪ್ರಶಸ್ತಿ ಮತ್ತು ಲಲಿತಕಲಾ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಹಲವಾರು ಪ್ರತಿಷ್ಠಿತ ಪ್ರಶಸ್ತಿಗಳು ಲಭಿಸಿದೆ.

ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಲಕ್ಷ್ಮಣ್ ಪೈ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.

"ಗೋವಾ ಇಂದು ರತ್ನವೊಂದನ್ನು ಕಳೆದುಕೊಂಡಿದೆ. ಕಲಾ ಕ್ಷೇತ್ರದಲ್ಲಿ ಅವರು ನೀಡಿದ ಅಪಾರ ಕೊಡುಗೆಯನ್ನು ನಾವು ಯಾವಾಗಲೂ ನೆನಪಿಸಿಕೊಳ್ಳುತ್ತೇವೆ. ಅವರ ಕುಟುಂಬಕ್ಕೆ ನನ್ನ ಹೃತ್ಪೂರ್ವಕ ಸಂತಾಪವಿದೆ, ಓಂ ಶಾಂತಿ." ಎಂದು ಸಿಎಂ ಪ್ರಮೋದ್ ಸಾವಂತ್ ಟ್ವೀಟ್ ಮಾಡಿದ್ದಾರೆ.

Stay up to date on all the latest ರಾಷ್ಟ್ರೀಯ news
Poll
Mamata1

ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಟಿಎಂಸಿ ಪಕ್ಷಕ್ಕೆ ಗೆಲುವು: ಮಮತಾ ಬ್ಯಾನರ್ಜಿ ಈಗ ಭಾರತದ ಪ್ರಬಲ ಪ್ರತಿಪಕ್ಷ ನಾಯಕಿಯೇ?


Result
ಹೌದು, ನಿರ್ವಿವಾದವಾಗಿ.
ಇಲ್ಲ, ಪ್ರಾದೇಶಿಕ ನಾಯಕಿ ಅಷ್ಟೇ.
flipboard facebook twitter whatsapp