ಬನಾರಸ್ ಹಿಂದೂ ವಿವಿಗೆ ನೀತಾ ಅಂಬಾನಿ ವಿಸಿಟಿಂಗ್ ಪ್ರೊಫೆಸರ್: ಪ್ರಸ್ತಾಪಕ್ಕೆ ವಿದ್ಯಾರ್ಥಿಗಳ ವಿರೋಧ
ಉತ್ತರ ಪ್ರದೇಶದಲ್ಲಿನ ಬನಾರಸ್ ಹಿಂದೂ ವಿಶ್ವವಿದ್ಯಾಲಯಕ್ಕೆ ಉದ್ಯಮಿ ಮುಕೇಶ್ ಅಂಬಾನಿಯ ಪತ್ನಿ ನೀತಾ ಅಂಬಾನಿ ಅವರನ್ನು ವಿಸಿಟಿಂಗ್ ಪ್ರೊಫೆಸರ್ ಆಗಿ ನೇಮಕ ಮಾಡಿರುವುದಕ್ಕೆ ವಿದ್ಯಾರ್ಥಿಗಳು ತೀವ್ರ ವಿರೋಧ ವ್ಯಕ್ತ ಪಡಿಸಿದ್ದಾರೆ.
Published: 17th March 2021 11:43 AM | Last Updated: 17th March 2021 11:43 AM | A+A A-

ನೀತಾ ಅಂಬಾನಿ
ಲಕ್ನೋ: ಉತ್ತರ ಪ್ರದೇಶದಲ್ಲಿನ ಬನಾರಸ್ ಹಿಂದೂ ವಿಶ್ವವಿದ್ಯಾಲಯಕ್ಕೆ ಉದ್ಯಮಿ ಮುಕೇಶ್ ಅಂಬಾನಿಯ ಪತ್ನಿ ನೀತಾ ಅಂಬಾನಿ ಅವರನ್ನು ವಿಸಿಟಿಂಗ್ ಪ್ರೊಫೆಸರ್ ಆಗಿ ನೇಮಕ ಮಾಡಿರುವುದಕ್ಕೆ ವಿದ್ಯಾರ್ಥಿಗಳು ತೀವ್ರ ವಿರೋಧ ವ್ಯಕ್ತ ಪಡಿಸಿದ್ದಾರೆ.
ವಿವಿಯ ಆವರಣದಲ್ಲಿರುವ ಉಪ ಕುಲಪತಿ ರಾಕೇಶ್ ಭಟ್ನಾಗರ್ ಅವರ ನಿವಾಸದ ಮುಂದೆ ಮಂಗಳವಾರ ಪ್ರತಿಭಟನೆ ನಡೆಸಿದ 40ಕ್ಕೂ ಹೆಚ್ಚು ವಿದ್ಯಾರ್ಥಿಗಳ ಗುಂಪು, ಈ ಕುರಿತು ಮನವಿ ಪತ್ರ ಸಲ್ಲಿಸಿದೆ.
ನೀತಾ ಅಂಬಾನಿ ಒಬ್ಬ ಮಹಿಳಾ ಉದ್ಯಮಿ. ಅವರು ನಮ್ಮ ಕೇಂದ್ರವನ್ನು ಸೇರಿಕೊಂಡರೆ ಅವರ ಅನುಭವದಿಂದ ಪೂರ್ವಾಂಚಲ ಭಾಗದ ಮಹಿಳೆಯರಿಗೆ ಉತ್ತಮ ಪ್ರಯೋಜನವಾಗಲಿದೆ. ಇದು ಮಹಿಳೆಯರಿಗೆ ಭವಿಷ್ಯದಲ್ಲಿ ಸ್ಫೂರ್ತಿ ನೀಡಲಿದೆ' ಎಂದು ಮಹಿಳಾ ಅಧ್ಯಯನ ಕೇಂದ್ರದ ಸಮನ್ವಯ ಅಧಿಕಾರಿ ನಿಧಿ ಶರ್ಮಾ ಹೇಳಿದ್ದಾರೆ.
ನಾವು ಕೆಟ್ಟ ನಿದರ್ಶನ ಸೃಷ್ಟಿಸುತ್ತಿದ್ದೇವೆ. ಶ್ರೀಮಂತ ವ್ಯಕ್ತಿಯ ಪತ್ನಿಯಾಗಿರುವುದು ದೊಡ್ಡ ಸಾಧನೆಯಲ್ಲ. ಇಂತಹ ವ್ಯಕ್ತಿಗಳು ನಮಗೆ ಆದರ್ಶಪ್ರಾಯವಾಗಿರಲು ಕೂಡ ಸಾಧ್ಯವಿಲ್ಲ. ನೀವು ಮಹಿಳಾ ಸಬಲೀಕರಣದ ಬಗ್ಗೆ ಮಾತನಾಡುವುದಾದರೆ ಅರುಣಿಮಾ ಸಿನ್ಹಾ, ಬಚೇಂದ್ರಿ ಪಾಲ್, ಮೇರಿ ಕೋಮ್ ಅಥವಾ ಕಿರಣ್ ಬೇಡಿ ಅವರಂತಹ ಅನುಕರಣೀಯ ಮಹಿಳೆಯರನ್ನು ಆಹ್ವಾನಿಸಿ' ಎಂದು ಹೇಳಿದ್ದಾರೆ.