ನಾಲ್ಕು ರಾಜ್ಯ, ಒಂದು ಕೇಂದ್ರಾಡಳಿತ ಚುನಾವಣೆ: 331 ಕೋಟಿ ರೂ. ಮೊತ್ತದ ನಗದು, ವಸ್ತು ವಶ
ವಿಧಾನಸಭಾ ಚುನಾವಣೆ ನಡೆಯಲಿರುವ ನಾಲ್ಕು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿ ದಾಖಲೆ ಪ್ರಮಾಣದಲ್ಲಿ ನಗದು, ವಸ್ತು ವಶಪಡಿಸಿಕೊಂಡಿರುವುದಾಗಿ ಚುನಾವಣಾ ಆಯೋಗ ತಿಳಿಸಿದೆ.
Published: 17th March 2021 04:02 PM | Last Updated: 17th March 2021 04:26 PM | A+A A-

ಸಾಂದರ್ಭಿಕ ಚಿತ್ರ
ನವದೆಹಲಿ: ವಿಧಾನಸಭಾ ಚುನಾವಣೆ ನಡೆಯಲಿರುವ ನಾಲ್ಕು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿ ದಾಖಲೆ ಪ್ರಮಾಣದಲ್ಲಿ ನಗದು, ವಸ್ತು ವಶಪಡಿಸಿಕೊಂಡಿರುವುದಾಗಿ ಚುನಾವಣಾ ಆಯೋಗ ತಿಳಿಸಿದೆ.
ಚುನಾವಣಾ ವೆಚ್ಚ ನಿರ್ವಹಣೆ ಪ್ರಕ್ರಿಯೆ ಭಾಗವಾಗಿ ನಾಲ್ಕು ರಾಜ್ಯಗಳು ಹಾಗೂ ಪುದುಚೇರಿಯಲ್ಲಿ ಈವರೆಗೂ 331 ಕೋಟಿ ರೂ. ಮೊತ್ತದ ವಸ್ತು ವಶಕ್ಕೆ ಪಡೆದಿರುವುದಾಗಿ ಆಯೋಗ ಹೇಳಿದೆ.
2016ರ ಚುನಾವಣೆ ಸಂದರ್ಭದಲ್ಲಿ ವಶಕ್ಕೆ ಪಡೆಯಲಾದ ಮೊತ್ತಕ್ಕಿಂತಲೂ ಇದು ಹೆಚ್ಚಾಗಿದೆ. ಚುನಾವಣೆ ಇನ್ನೂ ಆರಂಭವಾಗದಿದ್ದರೂ ದಾಖಲೆ ಪ್ರಮಾಣದಲ್ಲಿ ವಶಕ್ಕೆ ಪಡೆದಿರುವುದು ಮಹತ್ವದ ಅಂಶವಾಗಿದೆ ಎಂದು ಆಯೋಗ ತಿಳಿಸಿದೆ.
ತಮಿಳುನಾಡಿನಲ್ಲಿ ಗರಿಷ್ಠ 127.64 ಕೋಟಿ, ಪಶ್ಚಿಮ ಬಂಗಾಳದಲ್ಲಿ 112.59 ಕೋಟಿ ಮೊತ್ತವನ್ನು ವಶಕ್ಕೆ ಪಡೆಯಲಾಗಿದೆ. ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿ ಕಪ್ಪು ಹಣ ತಡೆಗಾಗಿ 295 ವೆಚ್ಚ ವೀಕ್ಷಕರನ್ನು ಚುನಾವಣಾ ಸಮಿತಿ ನಿಯೋಜಿಸಿದೆ.