ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಪರಮ್ ಬೀರ್: ಅನಿಲ್ ದೇಶ್ ಮುಖ್ ವಿರುದ್ಧದ ಆರೋಪಗಳ ತನಿಖೆಗೆ ಮನವಿ 

ಮಹಾರಾಷ್ಟ್ರ ಗೃಹ ಸಚಿವರ ವಿರುದ್ಧ ತಾವು ಮಾಡಿದ್ದ ಆರೋಪಗಳ ಬಗ್ಗೆ ತನಿಖೆಗೆ ಆದೇಶಿಸಬೇಕೆಂದ ಮಹಾರಾಷ್ಟ್ರದ ಹಿರಿಯ ಪೊಲೀಸ್ ಅಧಿಕಾರಿ ಪರಮ್ ಬೀರ್ ಸಿಂಗ್ ಸುಪ್ರೀಂ ಕೋರ್ಟ್ ಗೆ ಮನವಿ ಮಾಡಿದ್ದಾರೆ. 

Published: 22nd March 2021 03:46 PM  |   Last Updated: 22nd March 2021 04:02 PM   |  A+A-


Mumbai former top cop Param Bir Singh moves SC, seeks probe in allegations against Anil Deshmukh

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಪರಮ್ ಬೀರ್: ಅನಿಲ್ ದೇಶ್ ಮುಖ್ ವಿರುದ್ಧದ ಆರೋಪಗಳ ತನಿಖೆಗೆ ಮನವಿ

Posted By : Srinivas Rao BV
Source : The New Indian Express

ಮುಂಬೈ: ಮಹಾರಾಷ್ಟ್ರ ಗೃಹ ಸಚಿವರ ವಿರುದ್ಧ ಮಾಡಿದ್ದ ಆರೋಪಗಳ ಬಗ್ಗೆ ತನಿಖೆಗೆ ಆದೇಶಿಸಬೇಕೆಂದ ಮಹಾರಾಷ್ಟ್ರದ ಹಿರಿಯ ಪೊಲೀಸ್ ಅಧಿಕಾರಿ ಪರಮ್ ಬೀರ್ ಸಿಂಗ್ ಸುಪ್ರೀಂ ಕೋರ್ಟ್ ಗೆ ಮನವಿ ಮಾಡಿದ್ದಾರೆ. 

ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ ಮುಖ್ ಅವರ ವಿರುದ್ಧ ಗಂಭೀರ ಆರೋಪ ಮಾಡಿ ಬರೆದಿದ್ದ ಪತ್ರವನ್ನು ಪರಮ್ ಬೀರ್ ಸಿಂಗ್ ಮಹಾ ಸಿಎಂ ಉದ್ಧವ್ ಠಾಕ್ರೆಗೆ ತಲುಪಿಸಿದ್ದರು.

ಈ ಹಿಂದೆ ಮುಂಬೈ ನ ಪೊಲೀಸ್ ಆಯುಕ್ತರಾಗಿದ್ದ ಪರಮ್ ಬೀರ್ ಸಿಂಗ್ ಅವರನ್ನು ಈಗ ಮಹಾರಾಷ್ಟ್ರ ಹೋಮ್ ಗಾರ್ಡ್ ನ ಡಿಜಿಯನ್ನಾಗಿ ವರ್ಗಾವಣೆ ಮಾಡಲಾಗಿದೆ.

ಪರಮ್ ಬೀರ್ ಸಿಂಗ್ ಪರವಾಗಿ ಸುಪ್ರೀಂ ಕೋರ್ಟ್ ನಲ್ಲಿ ಮುಕುಲ್ ರೊಹಟ್ಗಿ ಅವರು ವಾದ ಮಂಡಿಸಲಿದ್ದಾರೆ.
 
ಫೆ.22 ರಂದು ನಡೆದ ಎಂಪಿ ಮೋಹನ್ ದೆಲ್ಕರ್ ಅವರ ಆತ್ಮಹತ್ಯೆ ಪ್ರಕರಣದಲ್ಲಿ, ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಕೇಸ್ ದಾಖಲಿಸುವಂತೆ, ಗೃಹ ಸಚಿವ ಅನಿಲ್ ದೇಶ್ ಮುಖ್ ಆದೇಶಿಸಿದ್ದರು.  ಈ ರೀತಿ ಎಫ್ಐಆರ್ ದಾಖಲಿಸುವುದಕ್ಕೆ ಕಾನೂನು ತಜ್ಞರು ವಿರೋಧ ವ್ಯಕ್ತಪಡಿಸಿದ್ದರೂ ಸಹ ಆತ್ಮಹತ್ಯೆಗೆ ಪ್ರಚೋದನೆ ಆರೋಪದಡಿ ಎಫ್ಐಆರ್ ದಾಖಲಿಸಲು ಗೃಹ ಸಚಿವರು ಸೂಚಿಸಿದ್ದರು ಎಂದು ಪರಮ್ ಬೀರ್ ಸಿಂಗ್ ತಮ್ಮ ಪತ್ರದಲ್ಲಿ ಆರೋಪಿಸಿದ್ದರು.


Stay up to date on all the latest ರಾಷ್ಟ್ರೀಯ news
Poll
CBSE board exam

12 ನೇ ತರಗತಿ ಮೌಲ್ಯಮಾಪನಕ್ಕೆ 10 ನೇ ತರಗತಿ ಅಂಕಗಳನ್ನು ಸೇರಿಸುವ ಸಿಬಿಎಸ್‌ಇ ಸೂತ್ರವನ್ನು ನೀವು ಬೆಂಬಲಿಸುತ್ತೀರಾ?


Result
ಹೌದು
ಇಲ್ಲ
flipboard facebook twitter whatsapp