ಏಮ್ಸ್  ಸಿಬ್ಬಂದಿ ಮೇಲೆ ಹಲ್ಲೆ ಪ್ರಕರಣ: ಎಎಪಿ ಶಾಸಕ ಸೋಮನಾಥ ಭಾರ್ತಿಗೆ 2 ವರ್ಷ ಜೈಲುಶಿಕ್ಷೆ

2016ರಲ್ಲಿ  ಏಮ್ಸ್ ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಪಿ ಶಾಸಕ ಸೋಮನಾಥ  ಭಾರ್ತಿ ಅವರಿಗೆ ಮ್ಯಾಜಿಸ್ಟ್ರೇಟ್ ನೀಡಿದ್ದ ಎರಡು ವರ್ಷ ಜೈಲು ಶಿಕ್ಷೆ ತೀರ್ಪನ್ನು ಸೆಷನ್ಸ್  ನ್ಯಾಯಾಲಯ ಎತ್ತಿ ಹಿಡಿದಿದೆ

Published: 23rd March 2021 06:21 PM  |   Last Updated: 23rd March 2021 06:23 PM   |  A+A-


Somnath_Bharti1

ಎಎಪಿ ಶಾಸಕ ಸೋಮನಾಥ ಭಾರ್ತಿ

Posted By : Nagaraja AB
Source : PTI

ನವದೆಹಲಿ: 2016ರಲ್ಲಿ  ಏಮ್ಸ್ ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಪಿ ಶಾಸಕ ಸೋಮನಾಥ  ಭಾರ್ತಿ ಅವರಿಗೆ ಮ್ಯಾಜಿಸ್ಟ್ರೇಟ್ ನೀಡಿದ್ದ ಎರಡು ವರ್ಷ ಜೈಲು ಶಿಕ್ಷೆ ತೀರ್ಪನ್ನು ಸೆಷನ್ಸ್  ನ್ಯಾಯಾಲಯ ಎತ್ತಿ ಹಿಡಿದಿದೆ. ತೀರ್ಪು ಹೊರಬಂದ ಕೂಡಲೇ  ಸೋಮನಾಥ ಭಾರ್ತಿ ಅವರನ್ನು ನ್ಯಾಯಾಂಗ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ.  

ಮ್ಯಾಜಿಸ್ಟ್ರೇಟ್ ನೀಡಿದ ತೀರ್ಪು ವಿರೋಧಿಸಿ ಸೋಮನಾಥ ಭಾರ್ತಿ ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಿದ ಸೆಷನ್ಸ್ ನ್ಯಾಯಾಲಯ, ಎರಡು ವರ್ಷ ಜೈಲು ಶಿಕ್ಷೆಗೆ ಸಹಮತ ವ್ಯಕ್ತಪಡಿಸಿದೆ. 

2018ರಲ್ಲಿ ಮಹಿಳಾ ಪತ್ರಕರ್ತರೊಬ್ಬರು ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಕೇಸ್ ಗೆ ಸಂಬಂಧಿಸಿದಂತೆ ನ್ಯಾಯಾಧೀಶರ ಎದುರು ಸೋಮನಾಥ ಭಾರ್ತಿ ಕ್ಷಮೆ ಕೇಳಿದ ನಂತರ  ದೆಹಲಿ ನ್ಯಾಯಾಲಯವೊಂದು ಶನಿವಾರ ಆ ಪ್ರಕರಣವನ್ನು ರದ್ದುಗೊಳಿಸಿತ್ತು.


Stay up to date on all the latest ರಾಷ್ಟ್ರೀಯ news
Poll
CBSE board exam

12 ನೇ ತರಗತಿ ಮೌಲ್ಯಮಾಪನಕ್ಕೆ 10 ನೇ ತರಗತಿ ಅಂಕಗಳನ್ನು ಸೇರಿಸುವ ಸಿಬಿಎಸ್‌ಇ ಸೂತ್ರವನ್ನು ನೀವು ಬೆಂಬಲಿಸುತ್ತೀರಾ?


Result
ಹೌದು
ಇಲ್ಲ
flipboard facebook twitter whatsapp