ಮಹಿಳಾ ಬ್ಯಾಂಕ್ ಮ್ಯಾನೇಜರ್ ಗೆ ವಾಟ್ಸಾಪ್ ನಲ್ಲಿ ಅಶ್ಲೀಲ ಸಂದೇಶ: ಕಾಂಗ್ರೆಸ್ ಮುಖಂಡನ ಬಂಧನ

ಬ್ಯಾಂಕ್ ಮ್ಯಾನೇಜರ್ ಒಬ್ಬರ ಜೊತೆಗಿನ ವಾಟ್ಸಾಪ್ ಸಂಭಾಷಣೆ ವೇಳೆ ಅಶ್ಲೀಲ ಸಂದೇಶ ಕಳುಹಿಸಿದ ಆರೋಪದ ಮೇರೆಗೆ ಕಾಂಗ್ರೆಸ್ ಮುಖಂಡರೊಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

Published: 23rd March 2021 05:06 PM  |   Last Updated: 23rd March 2021 06:06 PM   |  A+A-


Casual_Photo1

ಸಾಂದರ್ಭಿಕ ಚಿತ್ರ

Posted By : Nagaraja AB
Source : The New Indian Express

ಡೆಹ್ರಾಡೂನ್: ಬ್ಯಾಂಕ್ ಮ್ಯಾನೇಜರ್ ಒಬ್ಬರ ಜೊತೆಗಿನ ವಾಟ್ಸಾಪ್ ಸಂಭಾಷಣೆ ವೇಳೆ ಅಶ್ಲೀಲ ಸಂದೇಶ ಕಳುಹಿಸಿದ ಆರೋಪದ ಮೇರೆಗೆ ಕಾಂಗ್ರೆಸ್ ಮುಖಂಡರೊಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಆರೋಪ ಕೇಳಿಬಂದ ಕೂಡಲೇ ಕಾಂಗ್ರೆಸ್ ಮುಖಂಡ ಅಜಾದ್ ಅಲಿ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ ಎಂದು ಉತ್ತರಾಖಂಡ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿಜಯ್ ಸರಸ್ವತ್ ಹೇಳಿದ್ದಾರೆ.

ಬ್ಯಾಂಕ್ ಮ್ಯಾನೇಜರ್ ನೀಡಿದ ದೂರಿನ ಆಧಾರದ ಮೇಲೆ ಅಲಿ ವಿರುದ್ಧ ಪ್ರಕರಣವೊಂದನ್ನು ದಾಖಲಿಸಿದ ನಂತರ ಅವರನ್ನು ಸೋಮವಾರ ಬಂಧಿಸಲಾಯಿತು ಎಂದು ಕೊಟ್ವಾಲಿ ಠಾಣೆಯ ಹಿರಿಯ ಸಬ್ ಇನ್ಸ್ ಪೆಕ್ಟರ್ ಲೊಕೇಂದ್ರ ಬಹುಗುಣ ತಿಳಿಸಿದ್ದಾರೆ. 

ವಿಮಾ ಪಾಲಿಸಿಯೊಂದನ್ನು ಖರೀದಿಸುವುದಾಗಿ ಕೇಳಿಕೊಂಡ ನಂತರ ಬ್ಯಾಂಕ್ ಮ್ಯಾನೇಜರ್ ಆಲಿ ಅವರೊಂದಿಗೆ ಸಂಪರ್ಕದಲ್ಲಿದ್ದರು. ವಾಟ್ಸಾಪ್ ನಲ್ಲಿ ವಿಮಾ ಯೋಜನೆಗೆ ಸಂಬಂಧಿಸಿದ ಮಾಹಿತಿಯನ್ನು ನೀಡುತ್ತಿದ್ದರು. ಆದರೆ, ವಾಟ್ಸಾಪ್ ಸಂಭಾಷಣೆ ವೇಳೆಯಲ್ಲಿ ಅಲಿ ಅಶ್ಲೀಲ ಸಂದೇಶವೊಂದನ್ನು ಕಳುಹಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.


Stay up to date on all the latest ರಾಷ್ಟ್ರೀಯ news
Poll
CBSE board exam

12 ನೇ ತರಗತಿ ಮೌಲ್ಯಮಾಪನಕ್ಕೆ 10 ನೇ ತರಗತಿ ಅಂಕಗಳನ್ನು ಸೇರಿಸುವ ಸಿಬಿಎಸ್‌ಇ ಸೂತ್ರವನ್ನು ನೀವು ಬೆಂಬಲಿಸುತ್ತೀರಾ?


Result
ಹೌದು
ಇಲ್ಲ
flipboard facebook twitter whatsapp