ಎಎಪಿ ಶಾಸಕ ಸೋಮನಾಥ ಭಾರ್ತಿ ಮೇಲಿನ 2 ವರ್ಷದ ಜೈಲು ಶಿಕ್ಷೆ ರದ್ದು

ಏಮ್ಸ್ ಭದ್ರತಾ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ 2 ವರ್ಷದ ಜೈಲು ಶಿಕ್ಷೆಗೆ ಗುರಿಯಾಗಿದ್ದ ಆಪ್ ಶಾಸಕ ಸೋಮನಾಥ ಭಾರ್ತಿ ಶಿಕ್ಷೆಯನ್ನು ರದ್ದುಗೊಳಿಸಲಾಗಿದೆ.

Published: 24th March 2021 11:34 PM  |   Last Updated: 24th March 2021 11:34 PM   |  A+A-


AAP MLA Somnath Bharti arrested by Delhi Police for assaulting AIIMS security guards

ಸೋಮನಾಥ್ ಭಾರ್ತಿ (ಸಂಗ್ರಹ ಚಿತ್ರ)

Posted By : Srinivasamurthy VN
Source : PTI

ನವದೆಹಲಿ: ಏಮ್ಸ್ ಭದ್ರತಾ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ 2 ವರ್ಷದ ಜೈಲು ಶಿಕ್ಷೆಗೆ ಗುರಿಯಾಗಿದ್ದ ಆಪ್ ಶಾಸಕ ಸೋಮನಾಥ ಭಾರ್ತಿ ಶಿಕ್ಷೆಯನ್ನು ರದ್ದುಗೊಳಿಸಲಾಗಿದೆ.

ಹೌದು.. ಏಮ್ಸ್ ಭದ್ರತಾ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ ಎಎಪಿ ಶಾಸಕ ಸೋಮನಾಥ ಭಾರ್ತಿ ಅವರ ಅಪರಾಧ ಮತ್ತು 2 ವರ್ಷಗಳ ಜೈಲು ಶಿಕ್ಷೆಯನ್ನು ದೆಹಲಿ ಹೈಕೋರ್ಟ್ ಬುಧವಾರ ಅಮಾನತುಗೊಳಿಸಿದೆ. ಹಲ್ಲೆ ಪ್ರಕರಣದಲ್ಲಿ ಶಿಕ್ಷೆಯನ್ನು ದೆಹಲಿ ಸೆಷನ್ಸ್ ನ್ಯಾಯಾಲಯ ಎತ್ತಿಹಿಡಿದಿದ್ದ ನಂತರ ಸೋಮನಾಥ್ ಭಾರ್ತಿ ಇಂದು ದೆಹಲಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. 

ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುರೇಶ್ ಕೈಟ್ ಅವರು, ಆದೇಶವನ್ನು ನಿರ್ದೇಶಿಸುವಾಗ, ಸೋಮನಾಥ್ ಭಾರ್ತಿ ಅವರ ಅಪರಾಧ ಮತ್ತು ಶಿಕ್ಷೆಯನ್ನು ಪ್ರಶ್ನಿಸಿ ದೆಹಲಿ ಸರ್ಕಾರದ ಪ್ರತಿಕ್ರಿಯೆಯನ್ನು ಕೇಳಿದ್ದಾರೆ. ಹೈಕೋರ್ಟ್‌ನ ಮುಂದೆ ಅವರು ಸಲ್ಲಿಸಿದ್ದ ಮನವಿಯಲ್ಲಿ, ಪರಿಷ್ಕರಣೆ ಅರ್ಜಿಯ ಬಾಕಿ ಇರುವಾಗ ವಿಚಾರಣಾ ನ್ಯಾಯಾಲಯದ ತೀರ್ಪನ್ನು ಮತ್ತು ಶಿಕ್ಷೆಯನ್ನು ಅಮಾನತುಗೊಳಿಸಲು ಅವರು ಕೋರಿದ್ದರು.  

2016 ರಲ್ಲಿ ಏಮ್ಸ್ ಭದ್ರತಾ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ವರ್ಷ ಜನವರಿಯಲ್ಲಿ ಸೋಮನಾಥ್ ಭಾರ್ತಿ ಅವರಿಗೆ ಶಿಕ್ಷೆ ವಿಧಿಸಲಾಗಿತ್ತು. ವಿಚಾರಣಾ ನ್ಯಾಯಾಲಯ ಮಂಗಳವಾರ ತೀರ್ಪು ಪ್ರಕಟಿಸಿದ ನಂತರ ಸೋಮನಾಥ್ ಭಾರ್ತಿ ಅವರನ್ನು ವಶಕ್ಕೆ ತೆಗೆದುಕೊಳ್ಳಲಾಗಿತ್ತು. 
 

Stay up to date on all the latest ರಾಷ್ಟ್ರೀಯ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp