'ನನ್ನ ವಿರುದ್ಧ ಅಪಪ್ರಚಾರದಿಂದ ತೀವ್ರ ನೊಂದು ಹೋಗಿದ್ದೇನೆ': ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ ಮುಖ್ 

ಕಳೆದ ಕೆಲ ದಿನಗಳಿಂದ ತಮ್ಮ ಬಗ್ಗೆ ಕೇಳಿಬರುತ್ತಿರುವ ಅಪಪ್ರಚಾರದ ಬಗ್ಗೆ ತೀವ್ರ ತಲ್ಲಣಗೊಂಡಿದ್ದು, ಪರಂ ಬಿರ್ ಸಿಂಗ್ ಅವರ ಆರೋಪದ ನಂತರ ಕಳೆದ ತಿಂಗಳು ಫೆಬ್ರವರಿ ಮಧ್ಯಭಾಗದಲ್ಲಿ ತಾವು ಆಸ್ಪತ್ರೆಯಲ್ಲಿದ್ದೆನು ಎಂದು ನೇರವಾಗಿ ಸಾಬೀತುಪಡಿಸಲು ಇಚ್ಛಿಸುತ್ತೇನೆ ಎಂದು ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ ಮುಖ್ ಹೇಳಿದ್ದಾರೆ.

Published: 24th March 2021 08:06 AM  |   Last Updated: 24th March 2021 08:26 AM   |  A+A-


Former Mumbai Police chief Parambir Singh (L) and Maharashtra Home Minister Anil Deshmukh

ಮುಂಬೈ ಮಾಜಿ ಪೊಲೀಸ್ ಕಮಿಷನರ್ ಪರಂ ಬಿರ್ ಸಿಂಗ್ ಮತ್ತು ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ ಮುಖ್ ಅವರ ಸಂಗ್ರಹ ಚಿತ್ರ

Posted By : Sumana Upadhyaya
Source : PTI

ಮುಂಬೈ: ಕಳೆದ ಕೆಲ ದಿನಗಳಿಂದ ತಮ್ಮ ಬಗ್ಗೆ ಕೇಳಿಬರುತ್ತಿರುವ ಅಪಪ್ರಚಾರದ ಬಗ್ಗೆ ತೀವ್ರ ತಲ್ಲಣಗೊಂಡಿದ್ದು, ಪರಂ ಬಿರ್ ಸಿಂಗ್ ಅವರ ಆರೋಪದ ನಂತರ ಕಳೆದ ತಿಂಗಳು ಫೆಬ್ರವರಿ ಮಧ್ಯಭಾಗದಲ್ಲಿ ತಾವು ಆಸ್ಪತ್ರೆಯಲ್ಲಿದ್ದೆನು ಎಂದು ನೇರವಾಗಿ ಸಾಬೀತುಪಡಿಸಲು ಇಚ್ಛಿಸುತ್ತೇನೆ ಎಂದು ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ ಮುಖ್ ಹೇಳಿದ್ದಾರೆ.

ಕಳೆದ ತಿಂಗಳು ಫೆಬ್ರವರಿ ಮಧ್ಯಭಾಗದಲ್ಲಿ ಪೊಲೀಸ್ ಅಧಿಕಾರಿ ಸಚಿನ್ ವಾಜೆಯವರನ್ನು ಕರೆದು ಮುಂಬೈಯ ಹೊಟೇಲ್ ಮತ್ತು ಬಾರ್ ಗಳಿಂದ ಹಣ ಸಂಗ್ರಹಿಸುವಂತೆ ಅನಿಲ್ ದೇಶ್ ಮುಖ್ ಅವರು ಹೇಳಿದ್ದರು ಎಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಬರೆದ ಪತ್ರದಲ್ಲಿ ಹಿಂದಿನ ಮುಂಬೈ ಪೊಲೀಸ್ ಕಮಿಷನರ್ ಪರಮ್ ಬಿರ್ ಸಿಂಗ್ ಆರೋಪಿಸಿದ ನಂತರ ಗೃಹ ಸಚಿವ ದೇಶ್ ಮುಖ್ ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ, ಹಲವು ವಿಧಗಳಲ್ಲಿ ಸುದ್ದಿಗೆ ಗ್ರಾಸವಾಗಿದ್ದಾರೆ. 

ತಮ್ಮ ಮೇಲಿನ ಆರೋಪವನ್ನು ನಿರಾಕರಿಸಿರುವ ಗೃಹ ಸಚಿವ ಅನಿಲ್ ದೇಶ್ ಮುಖ್ ನಿನ್ನೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆಯವರನ್ನು ಭೇಟಿ ಮಾಡಿದ್ದರು. ಮಾಧ್ಯಮಗಳಲ್ಲಿ ನನ್ನ ವ್ಯಕ್ತಿತ್ವಕ್ಕೆ ಮತ್ತು ಗೃಹ ಇಲಾಖೆಗೆ ಕುಂದು ತರುವ ರೀತಿಯಲ್ಲಿ ಹಲವು ಟೀಕೆಗಳು ಕೇಳಿಬರುತ್ತಿದ್ದು ಇದರಿಂದ ನಾನು ತೀವ್ರ ನೊಂದು ಹೋಗಿದ್ದೇನೆ ಎಂದು ವಿಡಿಯೊ ಸಂದೇಶದಲ್ಲಿ ಹೇಳಿದ್ದಾರೆ.

ಕೋವಿಡ್ -19 ಸೋಂಕು ತಗುಲಿ ನಾನು ಫೆಬ್ರವರಿ 5 ರಂದು ಆಸ್ಪತ್ರೆಗೆ ದಾಖಲಾಗಿದ್ದೆ. ಫೆಬ್ರವರಿ 15 ರವರೆಗೆ ಆಸ್ಪತ್ರೆಯಲ್ಲಿದ್ದೆ, ನಂತರ ಬಿಡುಗಡೆಗೊಂಡು ಮುಂಬೈಗೆ ಬಂದು ಹೋಂ ಕ್ವಾರಂಟೈನ್ ನಲ್ಲಿದ್ದೆ ಎಂದಿದ್ದಾರೆ. ಹೋಂ ಕ್ವಾರಂಟೈನ್ ನಲ್ಲಿರುವಾಗಲೇ ಅಧಿಕಾರಿಗಳು ಮತ್ತು ಪಕ್ಷದ ಕಾರ್ಯಕರ್ತರೊಂದಿಗೆ ಕೆಲವೊಂದು ಸಭೆಗಳನ್ನು ನಡೆಸಿದ್ದೆ. ಮುಂದಿನ ಬಜೆಟ್ ಅಧಿವೇಶನಕ್ಕಾಗಿ ಸಿದ್ದತೆಗಳನ್ನು ಮಾಡಿಕೊಳ್ಳುತ್ತಿದ್ದೆ. ಬಜೆಟ್ ಅಧಿವೇಶನಕ್ಕೆ ಮುಂಚಿತವಾಗಿ ಅಗತ್ಯವಿರುವ ವಿಷಯಗಳನ್ನು ನನ್ನ ಅಧಿಕೃತ ನಿವಾಸಕ್ಕೆ ಭೇಟಿ ನೀಡುವ ಅಧಿಕಾರಿಗಳೊಂದಿಗೆ ಚರ್ಚಿಸುತ್ತಿದ್ದೆ ಎಂದು ಹೇಳಿದ್ದಾರೆ.

ನನ್ನ ಮೇಲಿನ ಆರೋಪ ವಿಷಯದಲ್ಲಿ ಜನರನ್ನು ದಾರಿ ತಪ್ಪಿಸಲಾಗುತ್ತಿದ್ದು, ನನ್ನ ಆರೋಗ್ಯ ಮತ್ತು ಕಳೆದ ತಿಂಗಳು ಮಾಡಿದ್ದ ಅಧಿಕೃತ ಕೆಲಸಗಳ ಬಗ್ಗೆ ಜನರ ಮುಂದೆ ನೇರವಾಗಿ ದಾಖಲೆಗಳನ್ನು ಇಡಲು ಇಚ್ಛಿಸುತ್ತೇನೆ ಎಂದಿದ್ದಾರೆ ಅನಿಲ್ ದೇಶ್ ಮುಖ್. 


Stay up to date on all the latest ರಾಷ್ಟ್ರೀಯ news
Poll
CBSE board exam

12 ನೇ ತರಗತಿ ಮೌಲ್ಯಮಾಪನಕ್ಕೆ 10 ನೇ ತರಗತಿ ಅಂಕಗಳನ್ನು ಸೇರಿಸುವ ಸಿಬಿಎಸ್‌ಇ ಸೂತ್ರವನ್ನು ನೀವು ಬೆಂಬಲಿಸುತ್ತೀರಾ?


Result
ಹೌದು
ಇಲ್ಲ
flipboard facebook twitter whatsapp