ಮಹಾರಾಷ್ಟ್ರ ಗೃಹ ಸಚಿವರ ವಿರುದ್ಧದ ಭ್ರಷ್ಟಾಚಾರ ಆರೋಪದ ಮಧ್ಯೆ ಸೋನಿಯಾ ಭೇಟಿಯಾದ ಸುಪ್ರಿಯಾ ಸುಳೆ!

 ಗೃಹ ಸಚಿವ ಅನಿಲ್  ದೇಶಮುಖ್ ವಿರುದ್ಧ ಕೇಳಿಬಂದಿರುವ ಭ್ರಷ್ಟಾಚಾರ ಆರೋಪ ಮಹಾರಾಷ್ಟ್ರ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿರುವಂತೆಯೇ, ಎನ್ ಸಿಪಿ ಮುಖಂಡೆ ಸುಪ್ರೀಯಾ ಸುಳೆ ಹಂಗಾಮಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ್ದಾರೆ. 

Published: 25th March 2021 03:15 PM  |   Last Updated: 25th March 2021 03:17 PM   |  A+A-


Supriya_sule_Sonia_Gandhi1

ಸುಪ್ರಿಯಾ ಸುಳೆ, ಸೋನಿಯಾ ಗಾಂಧಿ

Posted By : Nagaraja AB
Source : PTI

ನವದೆಹಲಿ: ಗೃಹ ಸಚಿವ ಅನಿಲ್  ದೇಶಮುಖ್ ವಿರುದ್ಧ ಕೇಳಿಬಂದಿರುವ ಭ್ರಷ್ಟಾಚಾರ ಆರೋಪ ಮಹಾರಾಷ್ಟ್ರ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿರುವಂತೆಯೇ, ಎನ್ ಸಿಪಿ ಮುಖಂಡೆ ಸುಪ್ರೀಯಾ ಸುಳೆ ಹಂಗಾಮಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ್ದಾರೆ. 

ಈ ಕುರಿತು ಟ್ವೀಟ್ ಮಾಡಿರುವ ಸುಪ್ರಿಯಾ ಸುಳೆ, ಸೋನಿಯಾ ಗಾಂಧಿ ಅವರ ಅಮೂಲ್ಯ ಮಾರ್ಗದರ್ಶನಕ್ಕಾಗಿ  ಧನ್ಯವಾದಗಳು. ನಿಮ್ಮೊಂದಿಗೆ ಸಂವಹನ ನಡೆಸುವುದು ಯಾವಾಗಲೂ ಸಂತೋಷಕರವಾಗಿರುತ್ತದೆ ಎಂದು ಬರೆದುಕೊಂಡಿದ್ದಾರೆ.

 

ಗೃಹ ಸಚಿವ ಅನಿಲ್ ದೇಶ್ ಮುಖ್ ಪ್ರತಿ ತಿಂಗಳು 100 ಕೋಟಿ ರೂ. ಸಂಗ್ರಹಿಸಲು ಪೊಲೀಸರಿಗೆ ಟಾರ್ಗೆಟ್ ಫಿಕ್ಸ್ ಮಾಡಿದ್ದರು ಎಂಬ ಮಾಜಿ ಮುಂಬೈ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಆರೋಪದ ಬೆನ್ನಲ್ಲೇ, ಶಿವಸೇನಾ, ಎನ್ ಸಿಪಿ ಮತ್ತು ಕಾಂಗ್ರೆಸ್ ನೇತೃತ್ವದ ಮಹಾ ವಿಕಾಸ್ ಅಘಾದಿ ಸರ್ಕಾರಕ್ಕೆ ವಿವಾದ ಮೆತ್ತಿಕೊಂಡಿರುವಂತೆಯೇ, ಸುಪ್ರಿಯಾ ಸುಳೆ, ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿರುವುದು ಮಹತ್ವ ಪಡೆದುಕೊಂಡಿದೆ.

ಬುಧವಾರ ಪ್ರತಿಪಕ್ಷ ನಾಯಕ ದೇವೇಂದ್ರ ಫಡ್ನವೀಸ್ ನೇತೃತ್ವದಲ್ಲಿನ ನಿಯೋಗ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರನ್ನು ಭೇಟಿ ಮಾಡಿ, ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿ ಬಗ್ಗೆ ರಾಜ್ಯದ ಮುಖ್ಯ ಕಾರ್ಯದರ್ಶಿಯಿಂದ ವಸ್ತುಸ್ಥಿತಿ ವರದಿ ಪಡೆಯುವಂತೆ ರಾಜ್ಯಪಾಲರನ್ನು ಒತ್ತಾಯಿಸಿತು. ಪೊಲೀಸ್ ವರ್ಗಾವಣೆಯಲ್ಲೂ ಭ್ರಷ್ಟಾಚಾರ ನಡೆದಿದೆ ಎಂದು ಬಿಜೆಪಿ ಆರೋಪಿಸಿದೆ. 


Stay up to date on all the latest ರಾಷ್ಟ್ರೀಯ news
Poll
Yediyurappa

ಯಡಿಯೂರಪ್ಪ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿ ತಮ್ಮ ಅವಧಿಯನ್ನು ಪೂರ್ಣಗೊಳಿಸಲು ಸಾಧ್ಯವಾಗುವುದೇ?


Result
ಹೌದು
ಇಲ್ಲ
flipboard facebook twitter whatsapp