ಸಂಸತ್ ಬಜೆಟ್ ಅಧಿವೇಶನ ಅಂತ್ಯ, ಉಭಯ ಸದನಗಳು ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ಪ್ರತಿಪಕ್ಷಗಳ ಪ್ರತಿಭಟನೆ, ಸಭಾತ್ಯಾಗದ ನಡುವೆಯೇ ಸಂಸತ್ ಬಜೆಟ್ ಅಧಿವೇಶನ ಗುರುವಾರ ಅಂತ್ಯವಾಗಿದ್ದು, ಸಂಸತ್ ನ ಉಭಯ ಸದನಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ.

Published: 25th March 2021 02:51 PM  |   Last Updated: 25th March 2021 02:51 PM   |  A+A-


Parliament

ಸಂಸತ್ತು

Posted By : Lingaraj Badiger
Source : ANI

ನವದೆಹಲಿ: ಪ್ರತಿಪಕ್ಷಗಳ ಪ್ರತಿಭಟನೆ, ಸಭಾತ್ಯಾಗದ ನಡುವೆಯೇ ಸಂಸತ್ ಬಜೆಟ್ ಅಧಿವೇಶನ ಗುರುವಾರ ಅಂತ್ಯವಾಗಿದ್ದು, ಸಂಸತ್ ನ ಉಭಯ ಸದನಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ.

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭಾ ಚುನಾವಣೆಗೂ ಮುಂಚಿತವಾಗಿ ರಾಜ್ಯಸಭೆಯನ್ನು ಇಂದು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಇದರೊಂದಿಗೆ ಸಂಸತ್ ಬಜೆಟ್ ಅಧಿವೇಶನ ಮುಕ್ತಾಯಗೊಂಡಿದೆ. ಇದಕ್ಕು ಮುನ್ನ ಲೋಕಸಭೆಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿತ್ತು.

ಮಾರ್ಚ್ 8ರಂದು ಆರಂಭವಾದ ಬಜೆಟ್ ಅಧಿವೇಶನದ ಎರಡನೇ ಭಾಗ ಏಪ್ರಿಲ್ 8ರ ವರೆಗೆ ಒಂದು ತಿಂಗಳ ಕಾಲ ನಡೆಯಬೇಕಿತ್ತು. ಆದರೆ ಚುನಾವಣೆ ಹಿನ್ನೆಲೆಯಲ್ಲಿ ಅವಧಿಗೂ ಮುನ್ನವೇ ಅಧಿವೇಶನ ಅಂತ್ಯಗೊಳಿಸಲಾಗಿದೆ.

ಈ ಹಿಂದೆ ತಮ್ಮ ಪಕ್ಷಗಳ ಆಜ್ಞೆಯ ಮೇರೆಗೆ ಹಲವು ಸಂಸದರು ಸಂಸತ್ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಮತ್ತು ರಾಜ್ಯಸಭೆಯ ಅಧ್ಯಕ್ಷ ಎಂ.ವೆಂಕಯ್ಯ ನಾಯ್ಡು ಅವರನ್ನು ಭೇಟಿ ಮಾಡಿ, ಚುನಾವಣೆ ಕಾರಣದಿಂದ ಅಧಿವೇಶನ ಮೊಟಕುಗೊಳಿಸುವಂತೆ ಮನವಿ ಮಾಡಿದ್ದರು.

ತೃಣಮೂಲ ಕಾಂಗ್ರೆಸ್ ಮುಖಂಡರಾದ ಸುದೀಪ್ ಬಂಡೋಪಾಧ್ಯಾಯ ಮತ್ತು ಡೆರೆಕ್ ಒ'ಬ್ರೇನ್ ಅವರುಲೋಕಸಭಾ ಸ್ಪೀಕರ್ ಮತ್ತು ರಾಜ್ಯಸಭಾ ಅಧ್ಯಕ್ಷರಿಗೆ ಪತ್ರ ಬರೆದು, ಅಧಿವೇಶನ ಮುಂದೂಡಬೇಕೆಂದು ಮನವಿ ಮಾಡಿದ್ದರು.

ಮಾರ್ಚ್ 27 ರಿಂದ ಏಪ್ರಿಲ್ 29 ರವರೆಗೆ ತಮಿಳುನಾಡು, ಪಶ್ಚಿಮ ಬಂಗಾಳ, ಕೇರಳ, ಅಸ್ಸಾಂ ಮತ್ತು ಪುದುಚೇರಿಯಲ್ಲಿ ಚುನಾವಣೆ ನಡೆಯಲಿದೆ. ಇದರ ಫಲಿತಾಂಶ ಮೇ 2 ರಂದು ಪ್ರಕಟವಾಗಲಿದೆ.


Stay up to date on all the latest ರಾಷ್ಟ್ರೀಯ news
Poll
CBSE board exam

12 ನೇ ತರಗತಿ ಮೌಲ್ಯಮಾಪನಕ್ಕೆ 10 ನೇ ತರಗತಿ ಅಂಕಗಳನ್ನು ಸೇರಿಸುವ ಸಿಬಿಎಸ್‌ಇ ಸೂತ್ರವನ್ನು ನೀವು ಬೆಂಬಲಿಸುತ್ತೀರಾ?


Result
ಹೌದು
ಇಲ್ಲ
flipboard facebook twitter whatsapp