ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಪರ ಶರದ್ ಪವಾರ್ ಪ್ರಚಾರ

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಪರವಾಗಿ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಪ್ರಚಾರ ಮಾಡಲಿದ್ದಾರೆ ಎಂದು ಎನ್‌ಸಿಪಿ ಮುಖ್ಯ ವಕ್ತಾರ ಮಹೇಶ್ ತಪಾಸೆ ಅವರು ಗುರುವಾರ ಹೇಳಿದ್ದಾರೆ.

Published: 25th March 2021 03:47 PM  |   Last Updated: 25th March 2021 04:00 PM   |  A+A-


NCP chief Sharad Pawar

ಎನ್'ಸಿಪಿ ಮುಖ್ಯಸ್ಥ ಶರದ್ ಪವಾರ್

Posted By : Lingaraj Badiger
Source : ANI

ನವದೆಹಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಪರವಾಗಿ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಪ್ರಚಾರ ಮಾಡಲಿದ್ದಾರೆ ಎಂದು ಎನ್‌ಸಿಪಿ ಮುಖ್ಯ ವಕ್ತಾರ ಮಹೇಶ್ ತಪಾಸೆ ಅವರು ಗುರುವಾರ ಹೇಳಿದ್ದಾರೆ.

"ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಮಮತಾ ಬ್ಯಾನರ್ಜಿ ಅವರನ್ನು ಬೆಂಬಲಿಸಿ ಪಶ್ಚಿಮ ಬಂಗಾಳದಲ್ಲಿ ಪ್ರಚಾರ ನಡೆಸಲಿದ್ದಾರೆ. ಏಪ್ರಿಲ್ 1 ರಿಂದ ಮೂರು ದಿನಗಳ ಕಾಲ ಆ ರಾಜ್ಯಕ್ಕೆ ಭೇಟಿ ನೀಡಲಿದ್ದು, ವಿವಿಧ ರ್ಯಾಲಿಗಳು, ಪತ್ರಿಕಾಗೋಷ್ಠಿಗಳು ಮತ್ತು ಮಮತಾ ಬ್ಯಾನರ್ಜಿ ಹಾಗೂ ತೃಣಮೂಲ ಕಾಂಗ್ರೆಸ್(ಟಿಎಂಸಿ) ಕಾರ್ಯಕರ್ತರನ್ನು ಭೇಟಿಯಾಗಲಿದ್ದಾರೆ ಎಂದು ತೃಣಮೂಲ ಭವನದಲ್ಲಿ ತಪಾಸೆ ತಿಳಿಸಿದ್ದಾರೆ.

294 ಸದಸ್ಯ ಬಲದ ಪಶ್ಚಿಮ ಬಂಗಾಳ ವಿಧಾನಸಭೆಗೆ ಮಾರ್ಚ್ 27 ರಿಂದ ಎಂಟು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಅಂತಿಮ ಸುತ್ತಿನ ಮತದಾನ ಏಪ್ರಿಲ್ 29 ರಿಂದ ನಡೆಯಲಿದೆ. ಮೇ 2 ರಂದು ಫಲಿತಾಂಸ ಪ್ರಕಟವಾಗಲಿದೆ.

ಪಶ್ಚಿಮ ಬಂಗಾಳದಲ್ಲಿ ಈ ಬಾರಿ ತ್ರಿಕೋನ ಸ್ಪರ್ಧೆ ಏರ್ಪಟಿದ್ದು, ಟಿಎಂಸಿ, ಕಾಂಗ್ರೆಸ್-ಎಡ ಮೈತ್ರಿ ಮತ್ತು ಬಿಜೆಪಿ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ ಇದೆ.


Stay up to date on all the latest ರಾಷ್ಟ್ರೀಯ news
Poll
CBSE board exam

12 ನೇ ತರಗತಿ ಮೌಲ್ಯಮಾಪನಕ್ಕೆ 10 ನೇ ತರಗತಿ ಅಂಕಗಳನ್ನು ಸೇರಿಸುವ ಸಿಬಿಎಸ್‌ಇ ಸೂತ್ರವನ್ನು ನೀವು ಬೆಂಬಲಿಸುತ್ತೀರಾ?


Result
ಹೌದು
ಇಲ್ಲ
flipboard facebook twitter whatsapp