'ಪ್ರಜಾಪ್ರಭುತ್ವದ ಕರಾಳ ದಿನ': ರಾಜಧಾನಿ (ತಿದ್ದುಪಡಿ) ಮಸೂದೆ 2021 ಅಂಗೀಕಾರದ ಕುರಿತು ಸಿಎಂ ಕೇಜ್ರಿವಾಲ್ ಕಿಡಿ

ರಾಜಧಾನಿ (ತಿದ್ದುಪಡಿ) ಮಸೂದೆ 2021ಕ್ಕೆ ರಾಜ್ಯಸಭೆಯಲ್ಲಿ ಅನುಮೋದನೆ ದೊರೆತ ಬೆನ್ನಲ್ಲೇ ಈ ಕುರಿತು ಕಿಡಿಕಾರಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು 'ಪ್ರಜಾಪ್ರಭುತ್ವದ ಕರಾಳದಿನ' ಎಂದು ಪ್ರತಿಕ್ರಿಯೆ ನೀಡಿದ್ದಾರೆ.

Published: 25th March 2021 12:20 AM  |   Last Updated: 25th March 2021 12:53 PM   |  A+A-


Arvind Kejriwal

ಅರವಿಂದ್ ಕೇಜ್ರಿವಾಲ್

Posted By : Srinivasamurthy VN
Source : Online Desk

ನವದೆಹಲಿ: ರಾಜಧಾನಿ (ತಿದ್ದುಪಡಿ) ಮಸೂದೆ 2021ಕ್ಕೆ ರಾಜ್ಯಸಭೆಯಲ್ಲಿ ಅನುಮೋದನೆ ದೊರೆತ ಬೆನ್ನಲ್ಲೇ ಈ ಕುರಿತು ಕಿಡಿಕಾರಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು 'ಪ್ರಜಾಪ್ರಭುತ್ವದ ಕರಾಳದಿನ' ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಅರವಿಂದ್ ಕೇಜ್ರಿವಾಲ್, ರಾಜ್ಯಸಭೆಯಲ್ಲಿ ಜಿಎಲ್ ಸಿಟಿಡಿ ತಿದ್ದುಪಡಿ ಮಸೂದೆಗೆ ಅನುಮೋದನೆ ದೊರೆತಿದೆ. ನಿಜಕ್ಕೂ ಇದು ಪ್ರಜಾಪ್ರಭುತ್ವದ ಕರಾಳ ದಿನವಾಗಿದೆ. ಅಂತೆಯೇ ನಾವು ನಮ್ಮ ಹೋರಾಟವನ್ನು ಮುಂದುವರೆಸುತ್ತೇವೆ. ನಮ್ಮ ಒಳ್ಳೆಯ ಕೆಲಸಗಳನ್ನು ನಾವು ಕೈ ಬಿಡುವುದಿಲ್ಲ. ನಮ್ಮ ಕೆಲಸಗಳಿಗೆ ಯಾರೂ ತಡೆಯೊಡ್ಡಲು ಸಾಧ್ಯವಿಲ್ಲ. ಅದು ನಿಲ್ಲುವುದೂ ಇಲ್ಲ ಎಂದು ಅರವಿಂದ್ ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.

ಅಂತೆಯೇ ನಮ್ಮ ಅಧಿಕಾರ ಮರಳಿ ಪಡೆಯಲು ನಮ್ಮ ಕಾನೂನು ಹೋರಾಟ ಮುಂದುವರೆಸುತ್ತೇವೆ ಎಂದೂ ಕೇಜ್ರಿವಾಲ್ ಹೇಳಿದ್ದಾರೆ.

ಇನ್ನು ಇದೇ ವಿಚಾರವಾಗಿ ಟ್ವೀಟ್ ಮಾಡಿರುವ ದೆಹಲಿ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಅವರು, 'ಪ್ರಜಾಪ್ರಭುತ್ವದ ಕರಾಳದಿನ.. ದೆಹಲಿ ಜನರು ಆಯ್ಕೆ ಮಾಡಿದ ಸರ್ಕಾರದ ಹಕ್ಕುಗಳನ್ನು ಕಿತ್ತುಕೊಂಡು ಲೆಫ್ಟಿನೆಂಟ್ ಗವರ್ನರ್ ಗೆ ನೀಡಲಾಗಿದೆ. ವಿಪರ್ಯಾಸವನ್ನು ನೋಡಿ, ನಮ್ಮ ಪ್ರಜಾಪ್ರಭುತ್ವದ ದೇವಾಲಯ ಎಂದು ಕರೆಯಲ್ಪಡುವ ಸಂಸತ್ತನ್ನು ಪ್ರಜಾಪ್ರಭುತ್ವದ ಹತ್ಯೆ ಮಾಡಲು ಬಳಸಲಾಗಿದೆ. ದೆಹಲಿಯ ಜನರು ಈ ಸರ್ವಾಧಿಕಾರದ ವಿರುದ್ಧ ಹೋರಾಡಲಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ. 

ದೆಹಲಿಯ ಮೇಲೆ ಕೇಂದ್ರಕ್ಕೆ ಹೆಚ್ಚಿನ ಅಧಿಕಾರವನ್ನು ನೀಡುವ ಪ್ರಸ್ತಾವಿತ ರಾಷ್ಟ್ರೀಯ ರಾಜಧಾನಿ ದೆಹಲಿ ಸರ್ಕಾರ ( ತಿದ್ದುಪಡಿ) ಮಸೂದೆ 2021 ರನ್ನು ಲೋಕಸಭೆಯಲ್ಲಿ ಅಂಗೀಕರಿಸಲಾಗಿದೆ. ದೆಹಲಿಯ ಚುನಾಯಿತ ಸರ್ಕಾರಕ್ಕಿಂತಲೂ ದೆಹಲಿಯಲ್ಲಿನ ಕೇಂದ್ರ ಸರ್ಕಾರದ ಪ್ರತಿನಿಧಿ ಲೆಫ್ಟಿನೆಂಟ್ ಗವರ್ನರ್ ಗೆ ಹೆಚ್ಚಿನ ಅಧಿಕಾರವನ್ನು ಈ ಪ್ರಸ್ತಾವಿತ ಕಾಯಿದೆ ನೀಡಲಿದೆ. ವಿರೋಧ ಪಕ್ಷದ ನಾಯಕರ ಕೋಲಾಹಲದ ನಡುವೆ ಜಿಎನ್‌ಸಿಟಿಡಿ ಮಸೂದೆಯನ್ನು ಅಂಗೀಕರಿಸಲಾಯಿತು. ಕಾಯ್ದೆ ಕುರಿತು ನಡೆದ ಮತದಾನದಲ್ಲಿ 83 ಸದಸ್ಯರು ಕಾಯ್ದೆ ಪರವಾಗಿ ಮತ ಹಾಕಿದ್ದು, 45 ಮಂದಿ ಕಾಯ್ದೆ ವಿರುದ್ಧವಾಗಿ ಮತ ಹಾಕಿದ್ದಾರೆ ಎಂದು ತಿಳಿದುಬಂದಿದೆ. 
 


Stay up to date on all the latest ರಾಷ್ಟ್ರೀಯ news
Poll
CBSE board exam

12 ನೇ ತರಗತಿ ಮೌಲ್ಯಮಾಪನಕ್ಕೆ 10 ನೇ ತರಗತಿ ಅಂಕಗಳನ್ನು ಸೇರಿಸುವ ಸಿಬಿಎಸ್‌ಇ ಸೂತ್ರವನ್ನು ನೀವು ಬೆಂಬಲಿಸುತ್ತೀರಾ?


Result
ಹೌದು
ಇಲ್ಲ
flipboard facebook twitter whatsapp