ಶ್ರೀಲಂಕಾ ನೌಕಾಪಡೆಯಿಂದ 20 ಭಾರತೀಯ ಮೀನುಗಾರರ ಬಂಧನ!

ಶ್ರೀಲಂಕಾಗೆ ಸೇರಿದ ಗಡಿಯಲ್ಲಿ ಅಕ್ರಮವಾಗಿ ಮೀನುಗಾರಿಕೆ ನಡೆಸಿದ ಆರೋಪದ ಮೇಲೆ 20 ಭಾರತೀಯ ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಬಂಧಿಸಿದ್ದು, 2 ದೋಣಿಗಳನ್ನು ಕೂಡ ವಶಪಡಿಸಿಕೊಂಡಿದೆ.

Published: 25th March 2021 11:43 AM  |   Last Updated: 25th March 2021 11:43 AM   |  A+A-


File photo

ಸಂಗ್ರಹ ಚಿತ್ರ

Posted By : Manjula VN
Source : The New Indian Express

ರಾಮೇಶ್ವರಂ: ಶ್ರೀಲಂಕಾಗೆ ಸೇರಿದ ಗಡಿಯಲ್ಲಿ ಅಕ್ರಮವಾಗಿ ಮೀನುಗಾರಿಕೆ ನಡೆಸಿದ ಆರೋಪದ ಮೇಲೆ 20 ಭಾರತೀಯ ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಬಂಧಿಸಿದ್ದು, 2 ದೋಣಿಗಳನ್ನು ಕೂಡ ವಶಪಡಿಸಿಕೊಂಡಿದೆ.

ರಾಮೇಶ್ವರಂ ಮತ್ತು ತಂಗಚಿಮಡಂ ಮೂಲದ ಮೀನುಗಾರರನ್ನು ಕಚ್ಚತೀವು ಬಳಿ ಶ್ರೀಲಂಕಾ ಪಡೆಗಳು ವಶಕ್ಕೆ ಪಡೆದುಕೊಂಡಿದ್ದಾರೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ವಶಕ್ಕೆ ಪಡೆದಿರುವ ಮೀನುಗಾರರನ್ನು ಸ್ಥಳೀಯ ನೌಕಾ ಕೇಂದ್ರಕ್ಕೆ ಕರೆದೊಯ್ದಿರುವ ಶ್ರೀಲಂಕಾ ಪಡೆಗಳು, ವಿಚಾರಣೆಗೊಳಪಡಿಸಿದ್ದು, ವಿಚಾರಣೆ ಪೂರ್ಣಗೊಂಡ ಬಳಿಕ ಶ್ರೀಲಂಕಾ ಮೀನುಗಾರಿಕಾ ಪ್ರಾಧಿಕಾರದ ವಶಕ್ಕೆ ನೀಡಲಿದ್ದಾರೆಂದು ತಿಳಿಸಿದ್ದಾರೆ.

ಮೀನುಗಾರರನ್ನು ಶ್ರೀಲಂಕಾಪಡೆಗಳು ವಶಕ್ಕೆ ಪಡೆದುಕೊಂಡಿರುವ ಹಿನ್ನೆಲೆಯಲ್ಲಿ ಮೀನುಗಾರರ ಸಂಘದ ಪ್ರತಿನಿಧಿಗಳು ಕಳವಳ ವ್ಯಕ್ತಪಡಿಸಿದ್ದು, ಶೀಘ್ರಗತಿಯಲ್ಲಿ ಬಿಡುಗಡೆ ಮಾಡುವಂತೆ ಕೇಂದ್ರ ಹಾಗೂ ತಮಿಳುನಾಡು ಸರ್ಕಾರವನ್ನು ಆಗ್ರಹಿಸಿದ್ದಾರೆ.

Stay up to date on all the latest ರಾಷ್ಟ್ರೀಯ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp