ಕೋವಿಡ್ ಪರಿಸ್ಥಿತಿ ಸುಧಾರಿಸದಿದ್ದರೆ ಪುಣೆಯಲ್ಲಿ 'ಕಠಿಣ ಕ್ರಮ': ಮಹಾರಾಷ್ಟ್ರ ಡಿಸಿಎಂ ಎಚ್ಚರಿಕೆ

ಪುಣೆ ಜಿಲ್ಲೆಯಲ್ಲಿ ಮುಂದಿನ ಒಂದು ವಾರದಲ್ಲಿ ಕೋವಿಡ್-19 ಪರಿಸ್ಥಿತಿ ಸುಧಾರಿಸದಿದ್ದರೆ ಕೆಲವು "ಕಠಿಣ ಕ್ರಮಗಳನ್ನು" ತೆಗೆದುಕೊಳ್ಳಬೇಕಾಗುತ್ತದೆ ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಶುಕ್ರವಾರ ಎಚ್ಚರಿಸಿದ್ದಾರೆ.

Published: 26th March 2021 05:04 PM  |   Last Updated: 26th March 2021 05:04 PM   |  A+A-


Covid-19 cases in Bengaluru

ಸಾಂದರ್ಭಿಕ ಚಿತ್ರ

Posted By : Lingaraj Badiger
Source : PTI

ಪುಣೆ: ಪುಣೆ ಜಿಲ್ಲೆಯಲ್ಲಿ ಮುಂದಿನ ಒಂದು ವಾರದಲ್ಲಿ ಕೋವಿಡ್-19 ಪರಿಸ್ಥಿತಿ ಸುಧಾರಿಸದಿದ್ದರೆ ಕೆಲವು "ಕಠಿಣ ಕ್ರಮಗಳನ್ನು" ತೆಗೆದುಕೊಳ್ಳಬೇಕಾಗುತ್ತದೆ ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಶುಕ್ರವಾರ ಎಚ್ಚರಿಸಿದ್ದಾರೆ.

ಜಿಲ್ಲೆಯ ಕೋವಿಡ್-19 ಪರಿಸ್ಥಿತಿ ಪರಿಶೀಲಿಸಿದ ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತಮಾಡಿದ ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ಅಜಿತ್ ಪವಾರ್ ಅವರು, "ಪರಿಸ್ಥಿತಿ ಗಂಭೀರವಾಗುತ್ತಿದೆ ಎಂದು ನಾನು ಜನರಿಗೆ ಹೇಳಲು ಬಯಸುತ್ತೇನೆ. ಪರಿಸ್ಥಿತಿ (ಪ್ರಕರಣಗಳ ವಿಷಯದಲ್ಲಿ) ಹೀಗೆ ಮುಂದುವರೆದರೆ, ಏಪ್ರಿಲ್ ಮೊದಲ ವಾರದಲ್ಲಿ ನಾವು ಜಿಲ್ಲೆಯಲ್ಲಿ ಹೆಚ್ಚು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕಾಗುತ್ತದೆ ಎಂದರು.

ಇದೇ ವೇಳೆ ಜನ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ದೈಹಿಕ ಅಂತರ ಕಾಯ್ದುಕೊಳ್ಳಬೇಕು ಮತ್ತು ಕೈಗಳನ್ನು ಸಾನಿಟೈಸ್ ಮಾಡಿಕೊಳ್ಳಬೇಕು ಉಪಮುಖ್ಯಮಂತ್ರಿ ಜನರಿಗೆ ಎಚ್ಚರಿಕೆ ನೀಡಿದರು.

ಮದುವೆಗಳಲ್ಲಿ 50ಕ್ಕಿಂತ ಹೆಚ್ಚು ಮಂದಿ ಪಾಲ್ಗೊಳ್ಳಲು ಅವಕಾಶ ಇಲ್ಲ, ಅಂತ್ಯಕ್ರಿಯೆಯಲ್ಲಿ 20 ಜನರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ, ಸಾಮಾಜಿಕ ಮತ್ತು ರಾಜಕೀಯ ಕಾರ್ಯಕ್ರಮಗಳನ್ನು ರದ್ದುಪಡಿಸಲಾಗಿದೆ ಎಂದು ಅವರು ಹೇಳಿದರು.


Stay up to date on all the latest ರಾಷ್ಟ್ರೀಯ news
Poll
lokasbha

ಸಂಸತ್ತಿನ ಕಲಾಪಗಳಿಗೆ ಅಡ್ಡಿಪಡಿಸುವ ಸಂಸದರಿಗೆ ದಂಡ ವಿಧಿಸಬೇಕೇ?


Result
ಹೌದು, ಇವರಿಂದ ಸಮಯ ವ್ಯರ್ಥ
ಬೇಡ, ಅವರು ಪ್ರತಿಭಟಿಸಬೇಕು
flipboard facebook twitter whatsapp