ಸಂಜೆ ನಾಲ್ಕು ಗಂಟೆಯವರೆಗೂ ಬಂಗಾಳದಲ್ಲಿ ಶೇ.70, ಅಸ್ಸಾಂನಲ್ಲಿ ಶೇ. 62 ರಷ್ಟು ಮತದಾನ,ಸುವೇಂದು ಸಹೋದರನ ಕಾರು ಮೇಲೆ ದಾಳಿ
ಪಶ್ಚಿಮ ಬಂಗಾಳ ವಿಧಾನಸಭೆಗೆ ಮೊದಲ ಹಂತದಲ್ಲಿ ನಡೆಯುತ್ತಿರುವ ಚುನಾವಣೆಯಲ್ಲಿ ಸಂಜೆ ನಾಲ್ಕು ಗಂಟೆಯವರೆಗೂ ಶೇ. 70 ರಷ್ಟು ಮತದಾನವಾಗಿದೆ ಎಂದು ಭಾರತೀಯ ಚುನಾವಣಾ ಆಯೋಗ ತಿಳಿಸಿದೆ.
Published: 27th March 2021 02:41 PM | Last Updated: 27th March 2021 05:13 PM | A+A A-

ಸೋಮೆಂದು ಅಧಿಕಾರಿ ಸಹೋದರನ ಕಾರು ಮೇಲೆ ಹಲ್ಲೆ, ಅಸ್ಸಾಂನಲ್ಲಿ ಮತ ಚಲಾಯಿಸಿದ ಮಹಿಳೆಯ ಚಿತ್ರ
ನವದೆಹಲಿ: ಪಶ್ಚಿಮ ಬಂಗಾಳ ವಿಧಾನಸಭೆಗೆ ಮೊದಲ ಹಂತದಲ್ಲಿ ನಡೆಯುತ್ತಿರುವ ಚುನಾವಣೆಯಲ್ಲಿ ಸಂಜೆ ನಾಲ್ಕು ಗಂಟೆಯವರೆಗೂ ಶೇ. 70 ರಷ್ಟು ಮತದಾನವಾಗಿದೆ ಎಂದು ಭಾರತೀಯ ಚುನಾವಣಾ ಆಯೋಗ ತಿಳಿಸಿದೆ.
ಪಶ್ಚಿಮ ಬಂಗಾಳದ 30 ಸ್ಥಾನಗಳಿಗೆ ನಡೆಯುತ್ತಿರುವ ಮೊದಲ ಹಂತದ ಚುನಾವಣೆಯಲ್ಲಿ 23 ಮಹಿಳೆಯರು ಸೇರಿದಂತೆ 191 ಅಭ್ಯರ್ಥಿಗಳ ಅದೃಷ್ಟ ಇಂದು ನಿರ್ಧಾರವಾಗಲಿದೆ.
ಈ ಮಧ್ಯೆ ಬಿಜೆಪಿ ಅಭ್ಯರ್ಥಿ ಸುವೇಂದು ಅಧಿಕಾರಿ ಸಹೋದರನ ಕಾರು ಮೇಲೆ ದುಷ್ಕರ್ಮಿಗಳು ಸಾಬಾಜ್ ಪುತ್ ಪ್ರದೇಶದಲ್ಲಿ ದಾಳಿ ನಡೆಸಿದ್ದಾರೆ. ಅಲ್ಲದೇ, ಆತನ ಕಾರು ಚಾಲಕನ ಮೇಲೆ ಟಿಎಂಸಿ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ. ಟಿಎಂಸಿ ಬ್ಲಾಕ್ ಅಧ್ಯಕ್ಷ ರಾಮ್ ಗೋವಿಂದ್ ದಾಸ್ ಪ್ರಚೋದನೆಯಿಂದ ಹಲ್ಲೆ ದಾಳಿ ನಡೆದಿದೆ ಎಂದು ಸುವೇಂದು ಮತ್ತು ಆತನ ಸಹೋದರ ದಿಬಿಯಾಂದು ಅಧಿಕಾರಿ ಆರೋಪಿಸಿದ್ದಾರೆ. ಘಟನೆಯಲ್ಲಿ ಸೋಮೆಂದುಗೆ ಯಾವುದೇ ರೀತಿಯ ಹಲ್ಲೆಯಾಗಿಲ್ಲ.
ಈ ಘಟನೆ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಘಟನೆ ಬಗ್ಗೆ ಕಠಿಣ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ತಿಳಿಸಲಾಗಿದೆ ಎಂದು ದಿಬಿಯಾಂದು ಅಧಿಕಾರಿ ಹೇಳಿದ್ದಾರೆ.
ಅಸ್ಸಾಂನ 47 ವಿಧಾನಸಭಾ ಕ್ಷೇತ್ರಗಳಿಗೆ ಮೊದಲ ಹಂತದ ಚುನಾವಣೆಯಲ್ಲಿ ಸಂಜೆ ನಾಲ್ಕು ಗಂಟೆಯವರೆಗೂ ಶೇ.62 ರಷ್ಟು ಮತದಾನವಾಗಿದೆ ಎಂದು ಆಯೋಗ ಮಾಹಿತಿ ನೀಡಿದೆ.
ಕೈಲಾಬೊರ್ ಕ್ಷೇತ್ರದಲ್ಲಿ ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಮತದಾನವಾಗಿದ್ದರೆ, ಗೋಹ್ಪುರದಲ್ಲಿ ಅತ್ಯಂತ ಕಡಿಮೆ ಸಂಖ್ಯೆಯ ಮತದಾನವಾಗಿದೆ. ಅಸ್ಸಾಂನ 47 ಕ್ಷೇತ್ರಗಳಲ್ಲಿ ಒಟ್ಟಾರೇ, 2564 ಅಭ್ಯರ್ಥಿಗಳು ಕಣದಲ್ಲಿದ್ದು, ಗೆಲುವಿಗಾಗಿ ಪ್ರಾರ್ಥಿಸುತ್ತಿದ್ದಾರೆ.
ಮುಂದಿನ ಹಂತದ ಮತದಾನ ಏಪ್ರಿಲ್ 1 ಮತ್ತು ಏಪ್ರಿಲ್ 6 ರಂದು ನಡೆಯಲಿದ್ದು, ಮೇ 2 ರಂದು ಫಲಿತಾಂಶ ಪ್ರಕಟವಾಗಲಿದೆ.