ಮಹಾರಾಷ್ಟ್ರದಲ್ಲಿ ಕೊರೋನಾ ರಣಕೇಕೆ: ಸೋಲಾಪುರದಲ್ಲಿ ವಾರಾಂತ್ಯದಲ್ಲಿ ಅಂಗಡಿ, ವಾಣಿಜ್ಯ ಸಂಸ್ಥೆಗಳು ಬಂದ್

ನೆರೆಯ ಮಹಾರಾಷ್ಟ್ರದಲ್ಲಿ ಕೊರೋನಾ ರಣಕೇಕೆ ಹಾಕುತ್ತಿದ್ದು, ಮಹಾಮಾರಿಯನ್ನು ಕಟ್ಟಿಹಾಕಲು ಸೋಲಾಪುರದಲ್ಲಿ ವಾರಾಂತ್ಯದಲ್ಲಿ ಅಗತ್ಯ ಸೇವೆ ಹೊರತುಪಡಿಸಿ ಇತರೆ ಎಲ್ಲಾ ರೀತಿಯ ಅಂಗಡಿಗಳು ಹಾಗೂ ವಾಣಿಜ್ಯ ಸಂಸ್ಥೆಗಳನ್ನು ಬಂದ್ ಮಾಡಲಾಗುತ್ತಿದೆ.

Published: 27th March 2021 02:50 PM  |   Last Updated: 27th March 2021 03:02 PM   |  A+A-


Bagalkote begins lockdown

ಸಾಂದರ್ಭಿಕ ಚಿತ್ರ

Posted By : Lingaraj Badiger
Source : PTI

ಪುಣೆ: ನೆರೆಯ ಮಹಾರಾಷ್ಟ್ರದಲ್ಲಿ ಕೊರೋನಾ ರಣಕೇಕೆ ಹಾಕುತ್ತಿದ್ದು, ಮಹಾಮಾರಿಯನ್ನು ಕಟ್ಟಿಹಾಕಲು ಸೋಲಾಪುರದಲ್ಲಿ ವಾರಾಂತ್ಯದಲ್ಲಿ ಅಗತ್ಯ ಸೇವೆ ಹೊರತುಪಡಿಸಿ ಇತರೆ ಎಲ್ಲಾ ರೀತಿಯ ಅಂಗಡಿಗಳು ಹಾಗೂ ವಾಣಿಜ್ಯ ಸಂಸ್ಥೆಗಳನ್ನು ಬಂದ್ ಮಾಡಲಾಗುತ್ತಿದೆ.

ಕೋವಿಡ್-19 ಪ್ರಕರಣಗಳ ಹೆಚ್ಚಳದಿಂದಾಗಿ ಈ ಪ್ರದೇಶದಲ್ಲಿ ವಿಧಿಸಲಾದ ನಿರ್ಬಂಧಗಳ ಭಾಗವಾಗಿ ಜಿಲ್ಲಾಡಳಿತ ಮತ್ತು ನಗರ ಪಾಲಿಕೆ ವಾರಾಂತ್ಯ ಶನಿವಾರ ಹಾಗೂ ಭಾನುವಾರ ಅಗತ್ಯ ಸೇವೆ ಹೊರತುಪಡಿಸಿ ಇತರೆ ಎಲ್ಲಾ ಅಂಗಡಿ ಹಾಗೂ ವಾಣಿಜ್ಯ ಸಂಸ್ಥೆಗಳನ್ನು ಬಂದ್ ಮಾಡುವಂತೆ ಸೂಚಿಸಲಾಗಿದೆ.

"ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಾವು ನಗರದಲ್ಲಿ ಕೆಲವು ನಿರ್ಬಂಧಗಳನ್ನು ವಿಧಿಸಿದ್ದೇವೆ. ಇದರ ಭಾಗವಾಗಿ, ಶನಿವಾರ ಮತ್ತು ಭಾನುವಾರದಂದು ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳು ಮುಚ್ಚಲ್ಪಡುತ್ತವೆ" ಎಂದು ಸೋಲಾಪುರ ಮಹಾನಗರ ಪಾಲಿಕೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

"ಮಾರುಕಟ್ಟೆಗಳಲ್ಲಿ ಜನಸಂದಣಿಯನ್ನು ಕಡಿಮೆ ಮಾಡುವ ಉದ್ದೇಶದಿಂದ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳನ್ನು ಬಂದ್ ಮಾಡಲಾಗುತ್ತಿದೆ" ಎಂದು ಅವರು ಹೇಳಿದ್ದಾರೆ.

ಆದಾಗ್ಯೂ, ವಾರಾಂತ್ಯದಲ್ಲಿ ಹಗಲಿನ ವೇಳೆಯಲ್ಲಿ ಜನರ ಸಂಚಾರಕ್ಕೆ ಯಾವುದೇ ನಿರ್ಬಂಧವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.


Stay up to date on all the latest ರಾಷ್ಟ್ರೀಯ news
Poll
CBSE board exam

12 ನೇ ತರಗತಿ ಮೌಲ್ಯಮಾಪನಕ್ಕೆ 10 ನೇ ತರಗತಿ ಅಂಕಗಳನ್ನು ಸೇರಿಸುವ ಸಿಬಿಎಸ್‌ಇ ಸೂತ್ರವನ್ನು ನೀವು ಬೆಂಬಲಿಸುತ್ತೀರಾ?


Result
ಹೌದು
ಇಲ್ಲ
flipboard facebook twitter whatsapp