ಮಹಾರಾಷ್ಟ್ರ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ: ಶರದ್ ಪವಾರ್‌ರನ್ನು ಗುಪ್ತವಾಗಿ ಭೇಟಿಯಾದ್ರಾ ಅಮಿತ್ ಶಾ

ಮಹಾರಾಷ್ಟ್ರ ಸಮ್ಮಿಶ್ರ ಸರ್ಕಾರದ ಬಿಕ್ಕಟ್ಟಿನ ಮಧ್ಯೆ ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ(ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್ ರನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಗುಪ್ತವಾಗಿ ಭೇಟಿ ಮಾಡಿದ್ದಾರೆ ಎನ್ನಲಾಗಿದೆ.

Published: 28th March 2021 08:33 PM  |   Last Updated: 28th March 2021 08:33 PM   |  A+A-


Sharad Pawar-Amit Shah

ಶರದ್ ಪವಾರ್-ಅಮಿತ್ ಶಾ

Posted By : Vishwanath S
Source : Online Desk

ನವದೆಹಲಿ: ಮಹಾರಾಷ್ಟ್ರ ಸಮ್ಮಿಶ್ರ ಸರ್ಕಾರದ ಬಿಕ್ಕಟ್ಟಿನ ಮಧ್ಯೆ ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ(ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್ ರನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಗುಪ್ತವಾಗಿ ಭೇಟಿ ಮಾಡಿದ್ದಾರೆ ಎನ್ನಲಾಗಿದೆ.

ಶರದ್ ಪವಾರ್ ರನ್ನು ರಹಸ್ಯ ಸಭೆ ಬಗ್ಗೆ ಏನನ್ನು ಹೇಳದ ಅಮಿತ್ ಶಾ ಭಾನುವಾರ ಎಲ್ಲವನ್ನು ಸಾರ್ವಜನಿಕವಾಗಿ ಹೇಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಶರದ್ ಪವಾರ್ ಎನ್‌ಸಿಪಿ ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ(ಎಂವಿಎ) ಸಮ್ಮಿಶ್ರ ಸರ್ಕಾರದ ಸದಸ್ಯರಾಗಿದ್ದು, ರಾಜ್ಯ ಗೃಹ ಸಚಿವ ಅನಿಲ್ ದೇಶ್ಮುಖ್ ವಿರುದ್ಧ ಮುಂಬೈನ ಮಾಜಿ ಪೊಲೀಸ್ ಮುಖ್ಯಸ್ಥ ಪರಮ್ ಬಿರ್ ಸಿಂಗ್ ಅವರ ಭ್ರಷ್ಟಾಚಾರದ ಆರೋಪಗಳಿಂದ ಮುಜುಗುರವಾಗಿತ್ತು.

ಗುಜರಾತ್‌ನ ಸ್ಥಳೀಯ ಸುದ್ದಿ ಸಂಸ್ಥೆಗಳ ಪ್ರಕಾರ, ಶರದ್ ಪವಾರ್ ಮತ್ತು ಅವರ ಪಕ್ಷದ ಸಹೋದ್ಯೋಗಿ ಪ್ರಫುಲ್ ಪಟೇಲ್ ಅವರು ಅಮಿತ್ ಶಾ ಅವರನ್ನು ಅಹಮದಾಬಾದ್‌ನ ತೋಟದ ಮನೆಯಲ್ಲಿ ಭೇಟಿಯಾಗಿದ್ದರು ಎಂದು ವರದಿ ಮಾಡಿದೆ. 


Stay up to date on all the latest ರಾಷ್ಟ್ರೀಯ news
Poll
CBSE board exam

12 ನೇ ತರಗತಿ ಮೌಲ್ಯಮಾಪನಕ್ಕೆ 10 ನೇ ತರಗತಿ ಅಂಕಗಳನ್ನು ಸೇರಿಸುವ ಸಿಬಿಎಸ್‌ಇ ಸೂತ್ರವನ್ನು ನೀವು ಬೆಂಬಲಿಸುತ್ತೀರಾ?


Result
ಹೌದು
ಇಲ್ಲ
flipboard facebook twitter whatsapp