ತಮ್ಮ ವಿರುದ್ಧ ಭ್ರಷ್ಟಾಚಾರ ಆರೋಪವನ್ನು ಹೈಕೋರ್ಟ್ ನ ನಿವೃತ್ತ ನ್ಯಾಯಾಧೀಶರು ತನಿಖೆ ನಡೆಸಲಿದ್ದಾರೆ: ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ ಮುಖ್ 

ಹೈಕೋರ್ಟ್ ನ ನಿವೃತ್ತ ನ್ಯಾಯಾಧೀಶರು ತಮ್ಮ ವಿರುದ್ಧದ ಭ್ರಷ್ಟಾಚಾರ ಆರೋಪದ ಬಗ್ಗೆ ತನಿಖೆ ನಡೆಸಲಿದ್ದಾರೆ ಎಂದು ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ ಮುಖ್ ಹೇಳಿದ್ದಾರೆ.

Published: 28th March 2021 02:05 PM  |   Last Updated: 28th March 2021 02:05 PM   |  A+A-


Anil Deshmukh

ಅನಿಲ್ ದೇಶ್ ಮುಖ್

Posted By : Sumana Upadhyaya
Source : PTI

ನಾಗ್ಪುರ: ಹೈಕೋರ್ಟ್ ನ ನಿವೃತ್ತ ನ್ಯಾಯಾಧೀಶರು ತಮ್ಮ ವಿರುದ್ಧದ ಭ್ರಷ್ಟಾಚಾರ ಆರೋಪದ ಬಗ್ಗೆ ತನಿಖೆ ನಡೆಸಲಿದ್ದಾರೆ ಎಂದು ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ ಮುಖ್ ಹೇಳಿದ್ದಾರೆ.

ತನಿಖೆಯ ಬಳಿಕ ಸತ್ಯಾಸತ್ಯತೆ ಹೊರಬರಲಿದೆ ಎಂದು ಅನಿಲ್ ದೇಶ್ ಮುಖ್ ನಾಗ್ಪುರ ವಿಮಾನ ನಿಲ್ದಾಣದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡುತ್ತಾ ಪ್ರತಿಕ್ರಿಯಿಸಿದರು.

ಕಳೆದ ಮಾರ್ಚ್ 20ರಂದು ಮುಂಬೈ ಮಹಾನಗರ ಮಾಜಿ ಪೊಲೀಸ್ ಆಯುಕ್ತ ಪರಮ್ ಬಿರ್ ಸಿಂಗ್ ಮುಖ್ಯಮಂತ್ರಿ ಉದ್ಧವ್ ಠಾಕ್ರೆಯವರಿಗೆ ಪತ್ರ ಬರೆದು ಮುಂಬೈಯ ಹೊಟೇಲ್ ಮತ್ತು ಬಾರ್ ಗಳಿಂದ ತಿಂಗಳಿಗೆ 100 ಕೋಟಿ ರೂಪಾಯಿ ಲಂಚ ಸಂಗ್ರಹಿಸುವಂತೆ ಪೊಲೀಸ್ ಅಧಿಕಾರಿಗೆ ಸೂಚಿಸಿದ್ದರು ಎಂದು ಆರೋಪಿಸಿದ್ದರು. ಇದು ಮಹಾರಾಷ್ಟ್ರ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿತ್ತು.

ಆದರೆ ಗೃಹ ಸಚಿವ ಅನಿಲ್ ದೇಶ್ ಮುಖ್ ತಮ್ಮ ಮೇಲಿನ ಆರೋಪವನ್ನು ನಿರಾಕರಿಸುತ್ತಾ ಬಂದಿದ್ದಾರೆ. ಇನ್ನು ಉದ್ಯಮಿ ಮುಕೇಶ್ ಅಂಬಾನಿ ನಿವಾಸದ ಹೊರಗೆ ಬಾಂಬ್ ಇಟ್ಟು ಬೆದರಿಕೆ ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸರ್ಕಾರ ಮಾರ್ಚ್ 17ರಂದು ಪರಮ್ ಬಿರ್ ಸಿಂಗ್ ಅವರನ್ನು ವರ್ಗಾಯಿಸಿದ್ದು ಗೃಹ ರಕ್ಷಕ ಇಲಾಖೆಗೆ ಕಳುಹಿಸಿದೆ.

ತಮ್ಮ ವಿರುದ್ಧದ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ಆರಂಭಿಸಲು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸೂಚಿಸಿದ್ದಾರೆ ಎಂದು ಅನಿಲ್ ದೇಶ್ ಮುಖ್ ಇಂದು ತಿಳಿಸಿದರು. ಮುಖ್ಯಮಂತ್ರಿಗಳು ಮತ್ತು ರಾಜ್ಯ ಸರ್ಕಾರ ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತನಿಖೆ ನಡೆಸಲು ನಿರ್ಧರಿಸಿದ್ದೇವೆ. ಸತ್ಯಾಸತ್ಯತೆ ಹೊರಬರಲಿ ಎಂದಿದ್ದಾರೆ.

ಇನ್ನು ಶಿವಸೇನೆ ಮುಖವಾಣಿ ಸಾಮ್ನಾದಲ್ಲಿ ಅನಿಲ್ ದೇಶ್ ಮುಖ್ ಅವರನ್ನು ಆಕಸ್ಮಿಕವಾಗಿ ಗೃಹ ಸಚಿವರನ್ನಾಗಿ ಮಾಡಲಾಗಿದೆ ಎಂಬ ಸಂಸದ ಸಂಜಯ್ ರಾವತ್ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಎನ್ ಸಿಪಿಯ ಹಿರಿಯ ನಾಯಕರಾದ ಜಯಂತ್ ಪಾಟೀಲ್ ಮತ್ತು ದಿಲೀಪ್ ವಾಲ್ಸೆ ಪಾಟೀಲ್ ಅವರು ನಿರಾಕರಿಸಿದ್ದ ಕಾರಣ ಅನಿಲ್ ದೇಶ್ ಮುಖ್ ಅವರನ್ನು ಗೃಹ ಸಚಿವರನ್ನಾಗಿ ಮಾಡಲಾಯಿತು ಎಂದು ಸಂಜಯ್ ರಾವತ್ ಹೇಳಿದ್ದರು.

Stay up to date on all the latest ರಾಷ್ಟ್ರೀಯ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp