ಚುನಾವಣೆ ಹಿನ್ನೆಲೆ ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆ ಮಾಡಿದೆ: ರಾಹುಲ್ ಗಾಂಧಿ

ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಪ್ರತಿ ಲೀಟರ್ ಪೆಟ್ರೋಲ್ ಹಾಗೂ ಡೀಸೆಲ್ ದರದ ಮೇಲೆ 17/18 ಪೈಸೆ ಕಡಿಮೆ ಮಾಡಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಭಾನುವಾರ ಹೇಳಿದ್ದಾರೆ. 

Published: 28th March 2021 01:03 PM  |   Last Updated: 28th March 2021 01:03 PM   |  A+A-


rahul gandhi

ರಾಹುಲ್ ಗಾಂಧಿ

Posted By : Manjula VN
Source : ANI

ನವದೆಹಲಿ: ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಪ್ರತಿ ಲೀಟರ್ ಪೆಟ್ರೋಲ್ ಹಾಗೂ ಡೀಸೆಲ್ ದರದ ಮೇಲೆ 17/18 ಪೈಸೆ ಕಡಿಮೆ ಮಾಡಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಭಾನುವಾರ ಹೇಳಿದ್ದಾರೆ. 

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಚುನಾವಣೆ ಕಾರಣದಿಂದ ಕೇಂದ್ರ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ಪ್ರತೀ ಲೀಟರ್ ದರದಲ್ಲಿ 17/18 ಪೈಸೆ ಕಡಿಮೆ ಮಾಡಿದೆ. ಈ ಪ್ರಮಾಣದ ಉಳಿತಾಯದೊಂದಿಗೆ ನೀವು ಏನು ಮಾಡುತ್ತೀರಿ? ಎಂದು ವ್ಯಂಗ್ಯವಾಡಿದ್ದಾರೆ. 

ಈ ಹಿಂದೆ ಮೋದಿ ಸರ್ಕಾರದ ವಿರುದ್ಧ ಕಿಡಿಕಾರಿದ್ದ ರಾಹುಲ್ ಗಾಂಧಿ, ಕೇಂದ್ರದ ಎನ್'ಡಿಎ ನೇತೃತ್ವದ ಬಿಜೆಪಿ ಸರ್ಕಾರದ ಆರ್ಥಿಕ ನೀತಿಯಿಂದಾಗಿ ದೇಶದಲ್ಲಿ ನಿರುದ್ಯೋಗ, ಬಡತನ ಹೆಚ್ಚಾಗಿದೆ ಎಂದು ಹೇಳಿದ್ದರು.

Stay up to date on all the latest ರಾಷ್ಟ್ರೀಯ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp