ಕೋವಿಡ್-19: ದೇಶದಲ್ಲಿಂದು 53,480 ಹೊಸ ಕೇಸ್ ಪತ್ತೆ, 354 ಮಂದಿ ಸಾವು

ಭಾರತದಲ್ಲಿ ಕೊರೋನಾ ಆರ್ಭಟ ಎಂದಿನಂತೆ ಮುಂದುವರೆಸಿದ್ದು, ಬುಧವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ ದಾಖಲೆಯ 53,480 ಹೊಸ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

Published: 31st March 2021 10:20 AM  |   Last Updated: 31st March 2021 12:57 PM   |  A+A-


File photo

ಸಂಗ್ರಹ ಚಿತ್ರ

Posted By : Manjula VN
Source : ANI

ನವದೆಹಲಿ: ಭಾರತದಲ್ಲಿ ಕೊರೋನಾ ಆರ್ಭಟ ಎಂದಿನಂತೆ ಮುಂದುವರೆಸಿದ್ದು, ಬುಧವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ ದಾಖಲೆಯ 53,480 ಹೊಸ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಹೊಸ ಸೋಂಕಿತರ ಸಂಖ್ಯೆ ಸತತ ಏರುಗತಿಯಲ್ಲಿ ಇರುವ ಪರಿಣಾಮ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,21,49,335ಕ್ಕೆ ಏರಿಕೆಯಾಗಿದೆ.

1,21,49,335 ಮಂದಿ ಒಟ್ಟಾರೆ ಸೋಂಕಿತರ ಪೈಕಿ ನಿನ್ನೆ ಒಂದೇ ದಿನ 41,280 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಇದರೊಂದಿಗೆ ಚೇತರಿಸಿಕೊಂಡವರ ಸಂಖ್ಯೆ 1,14,34,301ಕ್ಕೆ ತಲುಪಿದೆ. ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 5,52,566ಕ್ಕೆ ತಲುಪಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 354 ಮಂದಿ ಮಹಾಮಾರಿ ವೈರಸ್'ಗೆ ಬಲಿಯಾಗಿದ್ದು, ಸಾವಿನ ಸಂಖ್ಯೆ 1,62,468ಕ್ಕೆ ಏರಿಕೆಯಾಗಿದೆ.

ಇನ್ನು ಭಾರತದಲ್ಲಿ ಒಂದೇ ದಿನ 10,22,915 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ ದೇಶದಲ್ಲಿ 24,36,72,940 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಇದೀಗ ಹಿರಿಯ ನಾಗರೀಕರಿಗೆ ಹಾಗೂ ದೀರ್ಘಕಾಲಿಕ ರೋಗದಿಂದ ಬಳಲುತ್ತಿರುವವರಿಗೂ ಲಸಿಕೆ ನೀಡಲಾಗುತ್ತಿದೆ.

ಇದರಂತೆ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 6,30,54,353 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

Stay up to date on all the latest ರಾಷ್ಟ್ರೀಯ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp