ಮಾಜಿ ಪ್ರಧಾನಿ ದೇವೇಗೌಡ, ಪತ್ನಿಯ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಅವರ ಪತ್ನಿ ಚೆನ್ನಮ್ಮ ಅವರಿಗೆ ಕೊರೋನಾ ಸೋಂಕು ದೃಢವಾಗಿದ್ದು ಪ್ರಧಾನಿ ನರೇಂದ್ರ ಮೋದಿ ದೇವೇಗೌಡ ದಂಪತಿಗಳ ಆರೋಗ್ಯ ವಿಚಾರಿಸಿದ್ದಾರೆ. 
ಪ್ರಧಾನಿ ಮೋದಿ ಹಾಗೂ ದೇವೇಗೌಡ (ಸಂಗ್ರಹ ಚಿತ್ರ)
ಪ್ರಧಾನಿ ಮೋದಿ ಹಾಗೂ ದೇವೇಗೌಡ (ಸಂಗ್ರಹ ಚಿತ್ರ)

ನವದೆಹಲಿ: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಅವರ ಪತ್ನಿ ಚೆನ್ನಮ್ಮ ಅವರಿಗೆ ಕೊರೋನಾ ಸೋಂಕು ದೃಢವಾಗಿದ್ದು ಪ್ರಧಾನಿ ನರೇಂದ್ರ ಮೋದಿ ದೇವೇಗೌಡ ದಂಪತಿಗಳ ಆರೋಗ್ಯ ವಿಚಾರಿಸಿದ್ದಾರೆ.

"ದೇವೇಗೌಡ ಅವರೊಂದಿಗೆ ನಾನು ಮಾತನಾಡಿದ್ದು ಅವರ ಹಾಗೂ ಅವರ ಪತ್ನಿಯ ಆರೋಗ್ಯ ವಿಚಾರಿಸಿದ್ದೇನೆ. ಇಬ್ಬರೂ ಶೀಘ್ರದಲ್ಲಿ ಚೇತರಿಸಿಕೊಳ್ಳಲಿ ಎಂದು ಹಾರೈಸುವೆ" ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

ಇನ್ನು ಇದಕ್ಕೆ ಪ್ರತಿಯಾಗಿ ದೇವೇಗೌಡ ಸಹ ಟ್ವೀಟ್ ಮಾಡಿದ್ದು "ನನ್ನ ಆರೋಗ್ಯದ ಕುರಿತು ವಿಚಾರಿಸಿದ ಪ್ರಧಾನಿ ಮೋದಿಯವರಿಗೆ ಕೃತಜ್ಞನಾಗಿದ್ದೇನೆ. ಯಾವುದೇ ನಗರದಲ್ಲಿ ನನ್ನ ಆಯ್ಕೆಯ ಯಾವುದೇ ಆಸ್ಪತ್ರೆಯಲ್ಲಿ ನಾನು ಚಿಕಿತ್ಸೆ ಪಡೆಯಬೇಕೆಂಬ ಅವರ ಪ್ರಸ್ತಾಪಕ್ಕೆ ನಾನು ಆಭಾರಿಯಾಗಿದ್ದೇನೆ. ಅಲ್ಲದೆ ಬೆಂಗಳೂರಿನಲ್ಲಿ ನನ್ನನ್ನು ಚೆನ್ನಾಗಿ ನೋಡಿಕೊಳ್ಳಲಾಗುತ್ತಿದೆ ಎಂದು ನಾನು ಅವರಿಗೆ ಭರವಸೆ ನೀಡಿದ್ದೇನೆ" ಎಂದಿದ್ದಾರೆ.

ಶೀಘ್ರದಲ್ಲಿ ಚೇತರಿಸಿಕೊಳ್ಳಿ: ಮುಖ್ಯಮಂತ್ರಿ ಯಡಿಯೂರಪ್ಪ ಹಾರೈಕೆ

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೂಡ ದೇವೇಗೌಡರ ಶೀಘ್ರ ಚೇತರಿಕೆಗೆ ಹಾರೈಸಿದ್ದಾರೆ.

"ಹಿರಿಯ ರಾಜಕಾರಣಿಗಳು ಹಾಗೂ ಮಾಜಿ ಪ್ರಧಾನಮಂತ್ರಿಗಳಾದ ಸನ್ಮಾನ್ಯ ಶ್ರೀ ದೇವೇಗೌಡರು ಮತ್ತು ಅವರ ಶ್ರೀಮತಿ ಚೆನ್ನಮ್ಮನವರು ಕೊರೋನಾ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಲಿ, ಶೀಘ್ರದಲ್ಲಿ ಚೇತರಿಸಿಕೊಂಡು ಎಂದಿನಂತೆ ತಮ್ಮ ಕೆಲಸಕಾರ್ಯಗಳಲ್ಲಿ ತೊಡಗಿಕೊಳ್ಳಲಿ ಎಂದು ಹಾರೈಸುತ್ತೇನೆ" ಯಡಿಯೂರಪ್ಪ ಟ್ವಿಟ್ ಮಾಡಿ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com