ಬಿಜೆಪಿ ವಿರುದ್ಧ ಸಾಂಘಿಕ ಮತ್ತು ಪರಿಣಾಮಕಾರಿ ಹೋರಾಟ ಮಾಡೋಣ: ವಿಪಕ್ಷಗಳಿಗೆ ಮಮತಾ ಬ್ಯಾನರ್ಜಿ ಪತ್ರ
ಆಢಳಿತಾ ರೂಢ ಬಿಜೆಪಿ ಪಕ್ಷದ ವಿರುದ್ಧ ಒಗ್ಗಟ್ಟಾಗಿ ಮತ್ತು ಪರಿಣಾಮಕಾರಿಯಾಗಿ ಹೋರಾಟ ಮಾಡೋಣ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ವಿಪಕ್ಷ ನಾಯಕರಿಗೆ ಪತ್ರ ಬರೆದಿದ್ದಾರೆ.
Published: 31st March 2021 05:17 PM | Last Updated: 31st March 2021 05:17 PM | A+A A-

ಪ್ರತಿಪಕ್ಷ ನಾಯಕರು
ಕೋಲ್ಕತಾ: ಆಢಳಿತಾ ರೂಢ ಬಿಜೆಪಿ ಪಕ್ಷದ ವಿರುದ್ಧ ಒಗ್ಗಟ್ಟಾಗಿ ಮತ್ತು ಪರಿಣಾಮಕಾರಿಯಾಗಿ ಹೋರಾಟ ಮಾಡೋಣ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ವಿಪಕ್ಷ ನಾಯಕರಿಗೆ ಪತ್ರ ಬರೆದಿದ್ದಾರೆ.
ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ, ಎನ್ ಸಿಪಿ ಅಧ್ಯಕ್ಷ ಶರದ್ ಪವಾರ್, ಡಿಎಂಕೆ ಅಧ್ಯಕ್ಷ ಎಂ.ಕೆ.ಸ್ಟಾಲಿನ್, ಆರ್ ಜೆಡಿ ಪಕ್ಷದ ಅಧ್ಯಕ್ಷ ತೇಜಸ್ವಿ ಯಾದವ್, ಶಿವಸೇನೆ ಮುಖ್ಯಸ್ಥ ಹಾಗೂ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ನವೀನ್ ಪಟ್ನಾಯಕ್ ಅವರಿಗೆ ಮಮತಾ ಬ್ಯಾನರ್ಜಿ ಪತ್ರ ಬರೆದಿದ್ದು, ಸುಮಾರು ಮೂರು ಪುಟಗಳ ಪತ್ರದಲ್ಲಿ ಬಿಜೆಪಿ ಮತ್ತು ಕೇಂದ್ರ ಸರ್ಕಾರವು ಪ್ರಜಾಪ್ರಭುತ್ವ ಮತ್ತು ಸಾಂವಿಧಾನಿಕ ಸಂಯುಕ್ತ ವ್ಯವಸ್ಖೆಯ ಮೇಲೆ ಅಕ್ರಮಣ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.
'ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೇಲಿನ ಬಿಜೆಪಿಯ ದಾಳಿಯ ವಿರುದ್ಧ ಏಕೀಕೃತ ಮತ್ತು ಪರಿಣಾಮಕಾರಿ ಹೋರಾಟದ ಸಮಯ ಬಂದಿದೆ ಎಂದು ನಾನು ಬಲವಾಗಿ ನಂಬುತ್ತೇನೆ. ದೆಹಲಿ ಸರ್ಕಾರದ ಅಧಿಕಾರ ಮೊಟಕುಗೊಳಿಸಿ ಲೆಫ್ಚಿನೆಂಟ್ ಗವರ್ನರ್ ಗೆ ಹೆಚ್ಚಿನ ಅಧಿಕಾರ ನೀಡಿರುವುದು ಕೇಂದ್ರ ಸರ್ಕಾರದ ದುರಾಡಳಿತಕ್ಕೆ ಸಾಕ್ಷೆಯಾಗಿದೆ. ಅಲ್ಲದೆ ಸಂವಿಧಾನ ಬದ್ಧವಾಗಿ ಜನರೇ ಆಯ್ಕೆ ಮಾಡಿರುವ ಸರ್ಕಾರವನ್ನು ತನ್ನ ಹಿಡಿತಕ್ಕೆ ತೆಗೆದುಕೊಳ್ಳುವ ಕಿಡಿಗೇಡಿತನ ಎಂದು ಮಮತಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದೆಹಲಿಯಲ್ಲಿ ಬಿಜೆಪಿ ಮಾಡಿರುವ ಕಾರ್ಯ ಕ್ರಮೇಣ ನಿಯಮವಾಗಿ ಬಿಡುತ್ತದೆ. ಇದನ್ನು ನೀವೂ ಕೂಡ ಒಪ್ಪುತ್ತೀರಿ ಎಂದು ಭಾವಿಸುತ್ತೇನೆ. ಲೆಫ್ಟಿನೆಂಟ್ ಗವರ್ನರ್ ರನ್ನು ದೆಹಲಿ ಅಘೋಷಿತ ವೈಸ್ರಾಯ್ ಗಳು ನೇಮಿಸುತ್ತಾರೆ. ಇವರು ಪ್ರಧಾನಿ ಮತ್ತು ಗೃಹ ಸಚಿವರ ಪ್ರತಿನಿಧಿಯಂತೆ ವರ್ತಿಸುತ್ತಾರೆ. ಇಂತಹ ದುರಾಡಳಿತ ವಿರುದ್ಧ ಸಾಂಘಿಕ ಮತ್ತು ಪರಿಣಾಮಕಾರಿ ಹೋರಾಟ ಅತ್ಯಗತ್ಯ ಎಂದು ಮಮತಾ ಹೇಳಿದ್ದಾರೆ.
Mamata Banerjee writes to leaders incl Sonia Gandhi, Sharad Pawar, MK Stalin, Tejashwi Yadav, Uddhav Thackeray, Arvind Kejriwal, Naveen Patnaik stating, "I strongly believe that the time has come for a united & effective struggle against BJP's attacks on democracy & Constitution" pic.twitter.com/OLp7tDm9pU
— ANI (@ANI) March 31, 2021