ಅನಿಲ್ ದೇಶಮುಖ್ ವಿರುದ್ಧ ಪೊಲೀಸರಿಗೆ ಏಕೆ ದೂರು ನೀಡಲಿಲ್ಲ?: ಪರಮ್ ಬಿರ್ ಸಿಂಗ್ ಗೆ ಬಾಂಬೆ ಹೈಕೋರ್ಟ್ ಪ್ರಶ್ನೆ

ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶಮುಖ್ ಅವರು ತಪ್ಪು ಮಾಡುತ್ತಿರುವ ಬಗ್ಗೆ ಗೊತ್ತಿದ್ದರೂ ಅವರ ವಿರುದ್ಧ ಏಕೆ ದೂರು ದಾಖಲಿಸಲಿಲ್ಲ? ಎಂದು ಮುಂಬೈ ಮಾಜಿ ಪೊಲೀಸ್ ಆಯುಕ್ತ ಪರಮ್ ಬಿರ್ ಸಿಂಗ್ ಅವರಿಗೆ ಬಾಂಬೆ ಹೈಕೋರ್ಟ್ ಬುಧವಾರ ಪ್ರಶ್ನಿಸಿದೆ.

Published: 31st March 2021 03:27 PM  |   Last Updated: 31st March 2021 03:27 PM   |  A+A-


Former Mumbai Police chief Parambir Singh (L) and Maharashtra Home Minister Anil Deshmukh

ಪರಮ್ ಬಿರ್ ಸಿಂಗ್ ಮತ್ತು ಅನಿಲ್ ದೇಶಮುಖ್

Posted By : Lingaraj Badiger
Source : PTI

ಮುಂಬೈ: ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶಮುಖ್ ಅವರು ತಪ್ಪು ಮಾಡುತ್ತಿರುವ ಬಗ್ಗೆ ಗೊತ್ತಿದ್ದರೂ ಅವರ ವಿರುದ್ಧ ಏಕೆ ದೂರು ದಾಖಲಿಸಲಿಲ್ಲ? ಎಂದು ಮುಂಬೈ ಮಾಜಿ ಪೊಲೀಸ್ ಆಯುಕ್ತ ಪರಮ್ ಬಿರ್ ಸಿಂಗ್ ಅವರಿಗೆ ಬಾಂಬೆ ಹೈಕೋರ್ಟ್ ಬುಧವಾರ ಪ್ರಶ್ನಿಸಿದೆ.

ಬಾರ್ ಮತ್ತು ರೆಸ್ಟೋರೆಂಟ್‌ಗಳಿಂದ ಪ್ರತಿ ತಿಂಗಳು 100 ಕೋಟಿ ರೂ. ಸಂಗ್ರಹಿಸುವಂತೆ ಅನಿಲ್ ದೇಶಮುಖ್ ಅವರು ಅಮಾನತುಗೊಂಡ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಅವರಿಗೆ ಸೂಚಿಸಿದ್ದರು ಎಂದು ಪರಮ್ ಬಿರ್ ಸಿಂಗ್ ಅವರು ಇತ್ತೀಚೆಗೆ ಆರೋಪಿಸಿದ್ದರು. ಆದರೆ ಗೃಹ ಸಚಿವರು ಸಿಂಗ್ ಆರೋಪವನ್ನು ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ.

ಅನಿಲ್ ದೇಶಮುಖ್ ವಿರುದ್ಧ ಸಿಬಿಐ ತನಿಖೆ ಕೋರಿ ಪರಮ್ ಬಿರ್ ಸಿಂಗ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ದೀಪಂಕರ್ ದತ್ತಾ ಮತ್ತು ನ್ಯಾಯಮೂರ್ತಿ ಜಿ ಎಸ್ ಕುಲಕರ್ಣಿ ಅವರ ವಿಭಾಗೀಯ ಪೀಠ, ಸಿಂಗ್ ಅವರನ್ನು ಮೊದಲು ಪೊಲೀಸರಿಗೆ ಏಕೆ ದೂರು ನೀಡಲಿಲ್ಲ ಎಂದು ಪ್ರಶ್ನಿಸಿದೆ.

ಎಫ್ಐಆರ್ ಇಲ್ಲದೆ ಸಿಬಿಐನಂತಹ ಸ್ವತಂತ್ರ ಸಂಸ್ಥೆಗೆ ತನಿಖೆ ನಡೆಸುವ ವಿಚಾರದಲ್ಲಿ ಹೈಕೋರ್ಟ್ ಹಸ್ತಕ್ಷೇಪ ಮಾಡಲು ಅಥವಾ ನಿರ್ದೇಶನ ನೀಡಲು ಸಾಧ್ಯವಿಲ್ಲ ಎಂದು ನ್ಯಾಯಪೀಠ ಹೇಳಿದೆ.

"ನೀವು(ಸಿಂಗ್) ಒಬ್ಬ ಹಿರಿಯ ಪೊಲೀಸ್ ಅಧಿಕಾರಿ. ಸಾಮಾನ್ಯ ವ್ಯಕ್ತಿಯಲ್ಲ. ಯಾವುದೇ ತಪ್ಪುಗಳ ವಿರುದ್ಧ ದೂರು ದಾಖಲಿಸುವುದು ನಿಮ್ಮ ಕರ್ತವ್ಯ. ನಿಮ್ಮ ಬಾಸ್‌ನಿಂದ ಅಪರಾಧ ನಡೆಯುತ್ತಿದೆ ಎಂದು ತಿಳಿದಿದ್ದರೂ ಸಹ, ನೀವು ಮೌನವಾಗಿದ್ದೀರಿ" ಎಂದು ಮುಖ್ಯ ನ್ಯಾಯಮೂರ್ತಿ ದತ್ತಾ ಹೇಳಿದ್ದಾರೆ.


Stay up to date on all the latest ರಾಷ್ಟ್ರೀಯ news
Poll
CBSE board exam

12 ನೇ ತರಗತಿ ಮೌಲ್ಯಮಾಪನಕ್ಕೆ 10 ನೇ ತರಗತಿ ಅಂಕಗಳನ್ನು ಸೇರಿಸುವ ಸಿಬಿಎಸ್‌ಇ ಸೂತ್ರವನ್ನು ನೀವು ಬೆಂಬಲಿಸುತ್ತೀರಾ?


Result
ಹೌದು
ಇಲ್ಲ
flipboard facebook twitter whatsapp