ಬಿಹಾರ: ಬಿಜೆಪಿ ಎಂಎಲ್ ಸಿ ಹರಿ ನಾರಾಯಣ್ ಚೌಧರಿ ಕೋವಿಡ್ ಗೆ ಬಲಿ

ಬಿಹಾರ ಬಿಜೆಪಿ ಎಂಎಲ್ಸಿ ಹರಿ ನಾರಾಯಣ್ ಚೌಧರಿ ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಪಾಟ್ನಾ: ಬಿಹಾರ ಬಿಜೆಪಿ ಎಂಎಲ್ಸಿ ಹರಿ ನಾರಾಯಣ್ ಚೌಧರಿ ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ.

77 ವರ್ಷದ ಚೌಧರಿ ಸಮಸ್ತಿಪುರ ಸ್ಥಳೀಯ ಕ್ಷೇತ್ರದಿಂದ ಆಯ್ಕೆಯಾಗಿದ್ದರು. ಕೊರೋನಾ ಪಾಸಿಟಿವ್ ಪತ್ತೆಯಾದ ಹಿನ್ನೆಲೆಯಲ್ಲಿ 1 ವಾರದ ಹಿಂದೆ ಇಂದಿರಾಗಾಂಧಿ ಮೆಡಿಕಲ್ ಸೈನ್ಸ್ ಆಸ್ಪತ್ರೆಗೆ ದಾಖಲಾಗಿದ್ದರು ಎಂದು ಬಿಹಾರ ವಿಧಾನ ಪರಿಷತ್ ಸಭಾಧ್ಯಕ್ಷ ಅವದೇಶ್ ನರೈನ್ ಸಿಂಗ್ ಹೇಳಿದ್ದಾರೆ.

ಶುಕ್ರವಾರ ಬೆಳಗ್ಗೆ 11 ಗಂಟೆಗೆ  ಅವರು ಕೊನೆಯುಸಿರೆಳೆದಿದ್ದಾರೆ. ಸಿಎಂ ನಿತೀಶ್ ಕುಮಾರ್ ಕೂಡ ಚೌಧರಿ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಚೌಧರಿ ಅವರು ಪತ್ನಿ, ಇಬ್ಬರು ಪುತ್ರರು ಹಾಗೂ ಮೂರು ಪುತ್ರಿಯರನ್ನು ಅಗಲಿದ್ದಾರೆ. ಸರ್ಕಾರದ ಸಕಲ ಗೌರವಗಳೊಂದಿಗೆ ಮುಕ್ತಿಧಾಮದಲ್ಲಿ ಅಂತ್ಯ ಕ್ರಿಯೆ ನಡೆಯಲಿದೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com