ಮಹಾರಾಷ್ಟ್ರದಲ್ಲಿ ಇಂದು 63,282 ಕೋವಿಡ್-19 ಸೋಂಕು ಪ್ರಕರಣಗಳು, 802 ಸೋಂಕಿತರ ಸಾವು! 

ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕದಿಂದಾಗಿ ತತ್ತರಿಸಿ ಹೋಗಿರುವ ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಮತ್ತೆ 63 ಸಾವಿರಕ್ಕೂ ಅಧಿಕ ಸೋಂಕು ಪ್ರಕರಣಗಳು ದಾಖಲಾಗಿದೆ.
ಕೊರೋನಾ ಪರೀಕ್ಷೆ
ಕೊರೋನಾ ಪರೀಕ್ಷೆ

ಮುಂಬೈ: ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕದಿಂದಾಗಿ ತತ್ತರಿಸಿ ಹೋಗಿರುವ ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಮತ್ತೆ 63 ಸಾವಿರಕ್ಕೂ ಅಧಿಕ ಸೋಂಕು ಪ್ರಕರಣಗಳು ದಾಖಲಾಗಿದೆ.

ಈ ಬಗ್ಗೆ ಮಹಾರಾಷ್ಟ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 63,282 ಸೋಂಕು ಪ್ರಕರಣಗಳು ವರದಿಯಾಗಿದೆ. ಆ ಮೂಲಕ ಮಹಾರಾಷ್ಟ್ರದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 46,65,754ಕ್ಕೆ ಏರಿಕೆಯಾಗಿದೆ. ಅಂತೆಯೇ ಇಂದು 802 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ  ಮೂಲಕ ಈ ವರೆಗೂ ಕೋವಿಡ್-19 ಸೋಂಕಿಗೆ ಬಲಿಯಾದವರ ಸಂಖ್ಯೆ 69,615ಕ್ಕೆ ಏರಿಕೆಯಾಗಿದೆ.

ಅಂತೆಯೇ ಕಳೆದ 24 ಗಂಟೆಗಳ ಅವಧಿಯಲ್ಲಿ ಮಹಾರಾಷ್ಟ್ರದಲ್ಲಿ 61,326 ಮಂದಿ ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ಕೋವಿಡ್-19 ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,30,302ಕ್ಕೇರಿಕೆಯಾಗಿದ್ದು, ಪ್ರಸ್ತುತ ಮಹಾರಾಷ್ಟ್ರದಲ್ಲಿ 6,63,758 ಸಕ್ರಿಯ ಪ್ರಕರಣಗಳಿವೆ.

ಮುಂಬೈನಲ್ಲಿ 3,908 ಹೊಸ ಸೋಂಕು ಪ್ರಕರಣಗಳು ಪತ್ತೆ
ಇನ್ನು ಮಹಾರಾಷ್ಟ್ರ ಮತ್ತು ದೇಶದ ವಾಣಿಜ್ಯ ರಾಜಧಾನಿ ಎಂದೇ ಕರೆಯಲಾಗುವ ಮುಂಬೈನಲ್ಲಿ ಇಂದು 3,908 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಮುಂಬೈನಲ್ಲಿ ಪ್ರಸ್ತುತ ಒಟ್ಟಾರೆ ಸೋಂಕಿತರ ಸಂಖ್ಯೆ 6,52,532ಕ್ಕೆ ಏರಿಕೆಯಾಗಿದ್ದು, ಈ ಪೈಕಿ 5,78,331 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ.  ಅಂತೆಯೇ 13,251 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಪ್ರಸ್ತುತ ಮುಂಬೈನಲ್ಲಿ 59,318 ಸಕ್ರಿಯ ಪ್ರಕರಣಗಳಿವೆ ಎಂದು ಬಿಎಂಸಿ ಮಾಹಿತಿ ನೀಡಿದೆ.  

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com