ಭರೂಚ್ ಆಸ್ಪತ್ರೆ ಅಗ್ನಿ ದುರಂತ: ಪ್ರಧಾನಿ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಂತಾಪ

ಗುಜರಾತ್ ರಾಜ್ಯದ ಭರೂಚ್ ಕೋವಿಡ್ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಭರೂಚ್: ಗುಜರಾತ್ ರಾಜ್ಯದ ಭರೂಚ್ ಕೋವಿಡ್ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. 

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ಭರೂಚ್ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಹಲವು ಮಂದಿ ಸಾವನ್ನಪ್ಪಿದ್ದು, ಘಟನೆ ಸಾಕಷ್ಟು ನೋವು ತಂದಿದೆ. ಮೃತರ ಕುಟುಂಬಸ್ಥರಿಗೆ ಸಂತಾಪ ಸೂಚಿಸುತ್ತೇನೆಂದು ಹೇಳಿದ್ದಾರೆ. 

ಇದರಂತೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಟ್ವೀಟ್ ಮಾಡಿ, ಗುಜರಾತ್‌ನ ಭರೂಚ್‌ನ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಪ್ರಾಣಹಾನಿಗಳು ಸಂಭವಿಸಿವೆ. ದುಃಖಿತ ಕುಟುಂಬಗಳಿಗೆ ಹೃತ್ಪೂರ್ವಕ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಶೀಘ್ರಗತಿಯಲ್ಲಿ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆಂದು ತಿಳಿಸಿದ್ದಾರೆ. 

4 ಅಂತಸ್ತಿನ ಕೋವಿಡ್ ಆಸ್ಪತ್ರೆ ಭರೂಚ್-ಜಂಬುಸಾರ್ ಹೈವೇ ಬಳಿಯಲ್ಲಿದ್ದು, ಆಸ್ಪತ್ರೆಯ ನೆಲಮಹಡಿಯಲ್ಲಿರುವ ಕೋವಿಡ್ ವಾರ್ಡ್ ಒಂದರಲ್ಲಿ ಇಂದು ಮುಂಜಾನೆ 1 ಗಂಟೆ ಸುಮಾರಿಗೆ ಅಗ್ನಿ ಆಕಸ್ಮಿಕ ಸಂಭವಿಸಿದೆ. ಘಟನೆಯಲ್ಲಿ 12 ಕೋವಿಡ್ ರೋಗಿಗಳು ಮತ್ತು ಇಬ್ಬರು ಸಿಬ್ಬಂದಿ ಸೇರಿ ಒಟ್ಟು 16 ಜನ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com