ಪಶ್ಚಿಮ ಬಂಗಾಳ: 84 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ, ಪ್ರಶಾಂತ್ ಕಿಶೋರ್ ಊಹೆ ನಿಜವಾಗುತ್ತಾ?

ಪಶ್ಚಿಮ ಬಂಗಾಳದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ 24, ಕೇಂದ್ರ ಗೃಹ ಸಚಿವ ಅಮಿತ್ ಶಾ 27 ಚುನಾವಣಾ ರ‍್ಯಾಲಿ ನಡೆಸಿದ್ದರೂ ಈವರೆಗಿನ ಮತ ಎಣಿಕೆಯ ಅಂಕಿ ಅಂಶಗಳನ್ನು ನೋಡಿದರೆ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಪಕ್ಷಕ್ಕೆ ಸ್ಪಷ್ಟ ಬಹುಮತ ದೊರೆಯುವ ಸಾಧ್ಯತೆ ನಿಚ್ಚಳವಾಗಿದೆ.
ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ

ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ 24, ಕೇಂದ್ರ ಗೃಹ ಸಚಿವ ಅಮಿತ್ ಶಾ 27 ಚುನಾವಣಾ ರ‍್ಯಾಲಿ ನಡೆಸಿದ್ದರೂ ಈವರೆಗಿನ ಮತ ಎಣಿಕೆಯ ಅಂಕಿ ಅಂಶಗಳನ್ನು ನೋಡಿದರೆ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಪಕ್ಷಕ್ಕೆ ಸ್ಪಷ್ಟ ಬಹುಮತ ದೊರೆಯುವ ಸಾಧ್ಯತೆ ನಿಚ್ಚಳವಾಗಿದೆ.

ಕುದುರೆ ವ್ಯಾಪಾರ ತಡೆಗಟ್ಟಲು ಕನಿಷ್ಠ 200 ಸ್ಥಾನಗಳಲ್ಲಿ ಗೆಲುವು ಅಗತ್ಯವಾಗಿದೆ ಎಂದು ಮಮತಾ ಬ್ಯಾನರ್ಜಿ ಹೇಳುತ್ತಿದ್ದರು. ಮತ್ತೊಂದೆಡೆ 200 ಸ್ಥಾನಗಳಲ್ಲಿ ಗೆಲುವು ಸಾಧಿಸುವುದಾಗಿ ಬಿಜೆಪಿ ಮುಖಂಡರು ಹೇಳಿಕೆ ನೀಡುತ್ತಿದ್ದರು.

ಒಂದು ವೇಳೆ ಟಿಎಂಸಿ ಗೆದ್ದರೆ, ಬಿಜೆಪಿಗೆ ದೊಡ್ಡ ನಷ್ಟವಾಗಲಿದೆ. ಪ್ರಸ್ತುತ ಟಿಎಂಸಿ 204 ಬಿಜೆಪಿ 84 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿವೆ. ಈ ಚುನಾವಣೆಯಲ್ಲಿ ಒಂದು ವೇಳೆ ಬಿಜೆಪಿ 99ಕ್ಕಿಂತ ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸಿದರೆ ಬೂಟ್ ಗಳನ್ನು ಹಾಕುವುದಿಲ್ಲ ಎಂದು ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಸವಾಲು ಹಾಕಿದ್ದರು.

ರ‍್ಯಾಲಿಗಳಲ್ಲಿ ಜನ ಸೇರುತ್ತಿದುದ್ದನ್ನು ನೋಡಿ, ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಪ್ರಧಾನ ಮಂತ್ರಿ ಮತ್ತು ಅಮಿತ್ ಶಾ ಪದೇ ಪದೇ ಹೇಳಿಕೆ ನೀಡುತ್ತಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com