ಅಸ್ಸಾಂನಲ್ಲಿ ಬಿಜೆಪಿ ಸರ್ಕಾರ ರಚನೆ- ಸೊನೊವಾಲ್

ಅಸ್ಸಾಂನಲ್ಲಿ ಸದ್ಯದ ಟ್ರೆಂಡ್ ಪ್ರಕಾರ ಬಿಜೆಪಿ ಭಾರೀ ಮುನ್ನಡೆ ಕಾಯ್ದುಕೊಂಡಿದ್ದು, ಬಿಜೆಪಿ ಮತ್ತೆ  ಸರ್ಕಾರ ರಚಿಸಲಿದೆ ಎಂದು ಮುಖ್ಯಮಂತ್ರಿ ಸರ್ಬಾನಂದ ಸೊನೊವಾಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸರ್ಬಾನಂದ ಸೊನೊವಾಲ್
ಸರ್ಬಾನಂದ ಸೊನೊವಾಲ್

ದಿಬ್ರುಗರ್: ಅಸ್ಸಾಂನಲ್ಲಿ ಸದ್ಯದ ಟ್ರೆಂಡ್ ಪ್ರಕಾರ ಬಿಜೆಪಿ ಭಾರೀ ಮುನ್ನಡೆ ಕಾಯ್ದುಕೊಂಡಿದ್ದು, ಬಿಜೆಪಿ ಮತ್ತೆ  ಸರ್ಕಾರ ರಚಿಸಲಿದೆ ಎಂದು ಮುಖ್ಯಮಂತ್ರಿ ಸರ್ಬಾನಂದ ಸೊನೊವಾಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸದ್ಯದ ಟ್ರೆಂಡ್ ಪ್ರಕಾರ, ಬಿಜೆಪಿ ಯುನೈಟೆಡ್ ಫೀಪಲ್ಸ್ ಪಾರ್ಟಿ ಲಿಬರಲ್ ಜೊತೆಗೂಡಿ ಸರ್ಕಾರ ರಚಿಸಲಿದೆ ಎಂದು ಸೊನೊವಾಲ್ ಎಎನ್ ಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಇದು ಜನರ ಬೆಂಬಲದಿಂದ ಸಿಕ್ಕ ಗೆಲುವು. ಮತ ಎಣಿಕೆ ಪೂರ್ಣಗೊಳ್ಳುವವರೆಗೂ ಕಾಯುತ್ತೇವೆ. ಆದರೆ, ಸದ್ಯದ ಅಂಕಿ ಅಂಕಿಗಳ ಪ್ರಕಾರ ಗೆಲುವು ನಮ್ಮ ಕಡೆ ಇದೆ ಎಂದು ಅವರು ಹೇಳಿದ್ದಾರೆ.

ಅಸ್ಸಾಂ 126 ಸ್ಥಾನಗಳಿಗೆ ನಡೆದಿದ್ದ ಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದೆ. ಮಜೌಲಿ ಕ್ಷೇತ್ರದಲ್ಲಿ ಸೊನೊವಾಲ್
ಮುನ್ನಡೆ ಕಾಯ್ದುಕೊಂಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com