ಭಾರತದಲ್ಲಿ ಮುಂದುವರೆದ ಕೊರೋನಾ ಅಟ್ಟಹಾಸ: ದೇಶದಲ್ಲಿಂದು 3.92 ಲಕ್ಷ ಹೊಸ ಕೇಸ್ ಪತ್ತೆ, 3,689 ಮಂದಿ ಸಾವು

ಭಾರತದಲ್ಲಿ ಮಹಾಮಾರಿ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು, ದೈನಂದಿನ ಪ್ರಕರಣಗಳ ಸಂಖ್ಯೆ ಅಧಿಕವಾಗಿ ದಾಖಲಾಗುತ್ತಿದೆ. ಭಾನುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ ದಾಖಲೆಯ 3,92,488 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದೇ ಅವಧಿಯಲ್ಲಿ 3,689 ಮಂದಿ ಸಾವು ಸಂಭವಿಸಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು, ದೈನಂದಿನ ಪ್ರಕರಣಗಳ ಸಂಖ್ಯೆ ಅಧಿಕವಾಗಿ ದಾಖಲಾಗುತ್ತಿದೆ. ಭಾನುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ ದಾಖಲೆಯ 3,92,488 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದೇ ಅವಧಿಯಲ್ಲಿ 3,689 ಮಂದಿ ಸಾವು ಸಂಭವಿಸಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,95,57,457ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 2,15,542ಕ್ಕೆ ತಲುಪಿದೆ. 

ದೇಶದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ ದಾಖಲೆ ಮಟ್ಟದಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 33,49,644ಕ್ಕೆ ಏರಿಕೆಯಾಗಿದೆ. 

ಈ ನಡುವೆ ಕಳೆದ 24 ಗಂಟೆಗಳಲ್ಲಿ 3,07,865 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 1,59,92,271ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ ದಿನ 18,04,954 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ 29,01,42,339 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. 

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 15,68,16,031 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com