ಮಹಾರಾಷ್ಟ್ರ: ಅನಿಲ ಸೋರಿಕೆಯಿಂದ ಅಗ್ನಿ ಅವಘಡ- 5 ಮಂದಿ ಗಾಯ

ಮಹಾರಾಷ್ಟ್ರ ಥಾಣೆ ಜಿಲ್ಲೆಯಲ್ಲಿರುವ ಮನೆಯೊಂದರಲ್ಲಿ ಎಲ್'ಪಿಜಿ ಅನಿಲ ಸೋರಿಕೆಯಾದ ಪರಿಣಾಮ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಭಾನುವಾರ ನಡೆದಿದೆ. 

Published: 02nd May 2021 11:04 AM  |   Last Updated: 02nd May 2021 11:04 AM   |  A+A-


File photo

ಸಂಗ್ರಹ ಚಿತ್ರ

Posted By : Manjula VN
Source : The New Indian Express

ಥಾಣೆ: ಮಹಾರಾಷ್ಟ್ರ ಥಾಣೆ ಜಿಲ್ಲೆಯ ಮನೆಯೊಂದರಲ್ಲಿ ಎಲ್'ಪಿಜಿ ಅನಿಲ ಸೋರಿಕೆಯಾದ ಪರಿಣಾಮ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಭಾನುವಾರ ನಡೆದಿದೆ. 

ಬದ್ಲಾಪುರ ಟೌನ್ ಶಿಪ್ ನಲ್ಲಿರುವ ಅಪಾರ್ಟ್ ಮೆಂಟ್ ನಲ್ಲಿರುವ ಫ್ಲ್ಯಾಟ್ ನಲ್ಲಿ ಅಗ್ನಿ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ. 

ಇಂದು ಬೆಳಿಗ್ಗೆ 9.30ರ ಸುಮಾರಿಗೆ ಅಪಾರ್ಟ್'ಮೆಂಟ್'ನ 7ನೇ ಹಂತದಲ್ಲಿರುವ ಫ್ಲ್ಯಾಟ್ ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಒಂದೇ ಕುಟುಂಬದ ನಾಲ್ವರು ಹಾಗೂ ಓರ್ವ ಮೆಕಾನಿಕ್ ಗಾಯಗೊಂಡಿದ್ದಾನೆಂದು ಥಾಣೆ ಮಹಾನಗರ ಪಾಲಿಕೆಯ ಸ್ಥಳೀಯ ವಿಪತ್ತು ನಿರ್ವಹಣಾ ಪಡೆಯ ಮುಖ್ಯಸ್ಥ ಸಂತೋಷ್ ಕದಮ್ ಅವರು ಹೇಳಿದ್ದಾರೆ. 

ಎಲ್'ಪಿಜಿ ಅನಿಲ ಸೋರಿಕೆಯಾಗುತ್ತಿದ್ದ ಹಿನ್ನೆಲೆಯಲ್ಲಿ ಮನೆಯವರು ಮೆಕಾನಿಕ್'ನ್ನು ಕರೆದಿದ್ದಾರೆ. ಈ ವೇಳೆ ವ್ಯಕ್ತಿ ಪರಿಶೀಲನೆ ನಡೆಸುವ ವೇಳೆಯೇ ಅನಿಲ ಸ್ಫೋಟಗೊಂಡಿದೆ ಎಂದು ತಿಳಿಸಿದ್ದಾರೆ. 

ಘಟನೆಯಲ್ಲಿ ದಂಪತಿಗಳು ಹಾಗೂ ಅವರ ಇಬ್ಬರು ಮಕ್ಕಳು ಮೆಕಾನಿಕ್ ಗಾಯಗೊಂಡಿದ್ದಾರೆ. ಇದೀಗ ಐವರನ್ನೂ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸುದ್ದಿ ತಿಳಿಯುತ್ತಿದಂತೆಯೇ ಸ್ಥಳಕ್ಕೆ ದಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು ಎಂದು ಮಾಹಿತಿ ನೀಡಿದ್ದಾರೆ. 

Stay up to date on all the latest ರಾಷ್ಟ್ರೀಯ news
Poll
Rahul_Gandhi1

ರಾಹುಲ್ ಗಾಂಧಿ ಟೀಕೆ ಮಾಡುವುದನ್ನು ನಿಲ್ಲಿಸಿ ಕೋವಿಡ್ ಬಿಕ್ಕಟ್ಟಿನ ವಿರುದ್ಧ ಹೋರಾಡಲು ಪಕ್ಷವನ್ನು ಸಜ್ಜುಗೊಳಿಸಬೇಕೇ?


Result
ಹೌದು, ರಾಹುಲ್ ಮುಂದಾಳತ್ವ ವಹಿಸಬೇಕು.
ಇಲ್ಲ, ಇದು ಕೇಂದ್ರ ಸರ್ಕಾರದ ಜವಾಬ್ದಾರಿ.
flipboard facebook twitter whatsapp