ಮಹಾರಾಷ್ಟ್ರ: 10 ವರ್ಷದೊಳಗಿನ ಮಕ್ಕಳಲ್ಲಿ ಕೊರೋನಾ ಸೋಂಕು ಹೆಚ್ಚಳ, ಆತಂಕದಲ್ಲಿ ಜನತೆ!

ಮಹಾರಾಷ್ಟ್ರ ರಾಜ್ಯದಲ್ಲಿ ಕೊರೋನಾ ಬೆನ್ನು ಬಿಡದಂತೆ ಕಾಡುತ್ತಿದೆ. ರಾಜ್ಯದಲ್ಲಿ ಇದೀಗ 10 ವರ್ಷದೊಳಗಿನ ಮಕ್ಕಳಿಗೆ ಸೋಂಕು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ ಎಂಬ ಆಘಾತಕಾರಿ ಮಾಹಿತಿಯೊಂದನ್ನು ಆರೋಗ್ಯ ಇಲಾಖೆ ನೀಡಿದ್ದು, ಜನರಲ್ಲಿ ಆತಂಕ ಹೆಚ್ಚಾಗುವಂತೆ ಮಾಡಿದೆ. 

Published: 02nd May 2021 10:45 AM  |   Last Updated: 02nd May 2021 01:08 PM   |  A+A-


File photo

ಸಂಗ್ರಹ ಚಿತ್ರ

Posted By : Manjula VN
Source : The New Indian Express

ಮುಂಬೈ: ಮಹಾರಾಷ್ಟ್ರ ರಾಜ್ಯದಲ್ಲಿ ಕೊರೋನಾ ಬೆನ್ನು ಬಿಡದಂತೆ ಕಾಡುತ್ತಿದೆ. ರಾಜ್ಯದಲ್ಲಿ ಇದೀಗ 10 ವರ್ಷದೊಳಗಿನ ಮಕ್ಕಳಿಗೆ ಸೋಂಕು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ ಎಂಬ ಆಘಾತಕಾರಿ ಮಾಹಿತಿಯೊಂದನ್ನು ಆರೋಗ್ಯ ಇಲಾಖೆ ನೀಡಿದ್ದು, ಜನರಲ್ಲಿ ಆತಂಕ ಹೆಚ್ಚಾಗುವಂತೆ ಮಾಡಿದೆ. 

ಕೇವಲ ಒಂದು ತಿಂಗಳಲ್ಲೇ ರಾಜ್ಯದಲ್ಲಿನ ಮಕ್ಕಳಿಗೆ ಶೇ.51 ರಷ್ಟು ಸೋಂಕು ಹೆಚ್ಚಾಗಿದೆ ಎಂದು ಮಹಾರಾಷ್ಟ್ರ ಆರೋಗ್ಯ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಏಪ್ರಿಲ್ 3 ರವರೆಗೂ ರಾಜ್ಯದಲ್ಲಿ 10 ವರ್ಷದೊಳಗಿನ 1,34,470 ರಷ್ಟು ಮಕ್ಕಳು ಸೋಂಕಿಗೊಳಗಾಗಿದ್ದಾರೆ. ಕೇವಲ 25 ದಿನಗಳಲ್ಲಿ 75,387 ಮಕ್ಕಳಲ್ಲಿ ಸೋಂಕು ದೃಢಪಟ್ಟಿದ್ದು, ಶೇ.51ರಷ್ಟು ಮಕ್ಕಳಲ್ಲಿ ಸೋಂಕು ಕಾಣಿಸಿಕೊಂಡಿದೆ ಎಂದು ತಿಳಿಸಿದ್ದಾರೆ. 

ಆರೋಗ್ಯ ಇಲಾಖೆಯ ಅಂಕಿ ಅಂಶಗಳ ಪ್ರಕಾರ, 10 ವರ್ಷ ವಯಸ್ಸಿನವರಲ್ಲಿ ಶೇಕಡಾ 3.04 ರಷ್ಟು ಮಕ್ಕಳು ಸೋಂಕಿಗೆ ಒಳಗಾಗಿದ್ದರೆ, 11-20 ವಯಸ್ಸಿನವರಲ್ಲಿ ಶೇಕಡಾ 6.80 ರಷ್ಟು, 21-30 ವಯಸ್ಸಿನವರಲ್ಲಿ ಶೇಕಡಾ 17.51 ರಷ್ಟು ಮಂದಿ ಸೋಂಕಿಗೊಳಗಾಗಿದ್ದಾರೆಂದು ತಿಳಿದುಬಂದಿದೆ. 

ರಾಜ್ಯದಲ್ಲಿ 31-40 ವರ್ಷದವರಲ್ಲೇ ಹೆಚ್ಚಿನ ಸೋಂಕು ಪತ್ತೆಯಾಗಿದ್ದು, ಶೇ.22.09 ರಷ್ಟು ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. 61 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಹಿರಿಯ ನಾಗರಿಕರಲ್ಲಿ ಪಾಸಿಟಿವಿ ಪ್ರಮಾಣವು ಶೇ.17.15 ರಷ್ಟಿದೆ. ಮಕ್ಕಳ ಬಳಿಕ ಯುವ ಜನರಲ್ಲಿ 21-60 ವಯಸ್ಸಿನವರು ಹೆಚ್ಚು ಸೋಂಕಿಗೊಳಲಾಗುತ್ತಿದ್ದಾರೆ. ರಾಜ್ಯದಲ್ಲಿ 72.6 ರಷ್ಟು ಯುವ ಜನರು ಸೋಂಕಿಗೊಳಗಾಗಿದ್ದಾರೆ. ಮಹಿಳೆಯರಿಗೆ ಹೋಲಿಸದರೆ ಪುರುಷರಲ್ಲಿಯೇ ಹೆಚ್ಚು ಸೋಂಕು ಪತ್ತೆಯಾಗುತ್ತಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. 

ದೇಶದಲ್ಲಿ ಈ ವರೆಗೂ 2.48 ಲಕ್ಷ ಮಂದಿ ಸಾವನ್ನಪ್ಪಿದ್ದು, ಈ ಪೈಕಿ ಮಹಾರಾಷ್ಟ್ರ ಒಂದು ರಾಜ್ಯದಲ್ಲಿಯೇ 67,214 ಸಾವು ಸಂಭವಿಸಿದೆ. ಪ್ರಸ್ತುತ ಮಹಾರಾಷ್ಟ್ರದಲ್ಲಿ ಸಾವಿನ ಪ್ರಮಾಣ ಶೇ.1.50ಕ್ಕೆ ತಲುಪಿದೆ. 

Stay up to date on all the latest ರಾಷ್ಟ್ರೀಯ news
Poll
Rahul_Gandhi1

ರಾಹುಲ್ ಗಾಂಧಿ ಟೀಕೆ ಮಾಡುವುದನ್ನು ನಿಲ್ಲಿಸಿ ಕೋವಿಡ್ ಬಿಕ್ಕಟ್ಟಿನ ವಿರುದ್ಧ ಹೋರಾಡಲು ಪಕ್ಷವನ್ನು ಸಜ್ಜುಗೊಳಿಸಬೇಕೇ?


Result
ಹೌದು, ರಾಹುಲ್ ಮುಂದಾಳತ್ವ ವಹಿಸಬೇಕು.
ಇಲ್ಲ, ಇದು ಕೇಂದ್ರ ಸರ್ಕಾರದ ಜವಾಬ್ದಾರಿ.
flipboard facebook twitter whatsapp