ತೀವ್ರಗೊಂಡ ಕೊರೋನಾ ಸೋಂಕು: ಮೇ.5 ರಿಂದ 14 ದಿನಗಳ ಲಾಕ್'ಡೌನ್ ಘೋಷಿಸಿದ ಒಡಿಶಾ ಸರ್ಕಾರ

ರಾಜ್ಯದಲ್ಲಿ ಕೊರೋನಾ ಸೋಂಕು ತೀವ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸೋಂಕು ನಿಯಂತ್ರಿಸಲು ಕಠಿಣ ಕ್ರಮ ಕೈಗೊಂಡಿರುವ ಒಡಿಶಾ ಸರ್ಕಾರ ರಾಜ್ಯದಲ್ಲಿ ಮೇ.5 ರಿಂದ 14 ದಿನಗಳ ಕಾಲ ಲಾಕ್'ಡೌನ್ ಘೋಷಣೆ ಮಾಡಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಭುವನೇಶ್ವರ್: ರಾಜ್ಯದಲ್ಲಿ ಕೊರೋನಾ ಸೋಂಕು ತೀವ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸೋಂಕು ನಿಯಂತ್ರಿಸಲು ಕಠಿಣ ಕ್ರಮ ಕೈಗೊಂಡಿರುವ ಒಡಿಶಾ ಸರ್ಕಾರ ರಾಜ್ಯದಲ್ಲಿ ಮೇ.5 ರಿಂದ 14 ದಿನಗಳ ಕಾಲ ಲಾಕ್'ಡೌನ್ ಘೋಷಣೆ ಮಾಡಿದೆ. 

ಮೇ 5ರಿಂದ 19ರವರೆಗೆ ಒಟ್ಟು 14 ದಿನಗಳ ಕಾಲ ರಾಜ್ಯದಲ್ಲಿ ಲಾಕ್ ಡೌನ್ ಜಾರಿಯಲ್ಲಿರಲಿದೆ. ಲಾಕ್ ಡೌನ್ ಸಂದರ್ಭದಲ್ಲಿ ಜನರು 500 ಮೀಟರ್ ವ್ಯಾಪ್ತಿಯೊಳಗೆ ಬೆಳಗ್ಗೆ 7ರಿಂದ 12ಗಂಟೆಯೊಳಗೆ ತರಕಾರಿ ಸೇರಿದಂತೆ ಅಗತ್ಯ ವಸ್ತುಗಳನ್ನು ಖರೀದಿಸಲು ಅವಕಾಶ ನೀಡಿರುವುದಾಗಿ ಒಡಿಶಾ ಸರ್ಕಾರ ಹೊರಡಿಸಿರುವ ಆದೇಶದಲ್ಲಿ ಹೇಳಿದೆ. ಅಲ್ಲದೆ, ಲಾಕ್ ಡೌನ್ ಸಂದರ್ಭದಲ್ಲಿ ಆರೋಗ್ಯ ಸೇವೆ ಸೇರಿದಂತೆ ತುರ್ತು ಸೇವೆಗಳಿಗೆ ಯಾವುದೇ ನಿರ್ಬಂಧ ವಿಧಿಸಿಲ್ಲ ಎಂದು ತಿಳಿಸಿದೆ. 

ಕಳೆದ 24ಗಂಟೆಗಳಲ್ಲಿ ಒಡಿಶಾದಲ್ಲಿ 8,105 ಕೋವಿಡ್ ಪ್ರಕರಣ ಹಾಗೂ 14 ಮಂದಿ ಸಾವನ್ನಪ್ಪಿದ್ದಾರೆ. ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ ಕೋವಿಡ್ ಸೋಂಕಿನಿಂದ 3,689 ಜನರು ಸಾವನ್ನಪ್ಪಿದ್ದು, 3,92,488 ಕೋವಿಡ್ 19 ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 1,95,57,457ಕ್ಕೆ ಏರಿಕೆಯಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com