ಬಂಗಾಳದಲ್ಲಿ ದೀದಿ ಮ್ಯಾಜಿಕ್; ಶುಭಾಶಯ ಕೋರಿದ ಪ್ರಧಾನಿ ಮೋದಿ

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಅವರ ನೇತೃತ್ವದ ತೃಣಮೂಲ ಕಾಂಗ್ರೆಸ್ ಪಕ್ಷ ಭರ್ಜರಿ ಜಯದ ಮೂಲಕ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿದಿದ್ದು, ಚುನಾವಣಾ ಫಲಿತಾಂಶದ ಬೆನ್ನಲ್ಲೇ ಮಮತಾ ಬ್ಯಾನರ್ಜಿ ಅವರಿಗೆ ಪ್ರಧಾನಿ ಮೋದಿ ಶುಭ ಕೋರಿದ್ದಾರೆ.
ನರೇಂದ್ರ ಮೋದಿ-ಮಮತಾ ಬ್ಯಾನರ್ಜಿ
ನರೇಂದ್ರ ಮೋದಿ-ಮಮತಾ ಬ್ಯಾನರ್ಜಿ

ಕೋಲ್ಕತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಅವರ ನೇತೃತ್ವದ ತೃಣಮೂಲ ಕಾಂಗ್ರೆಸ್ ಪಕ್ಷ ಭರ್ಜರಿ ಜಯದ ಮೂಲಕ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿದಿದ್ದು, ಚುನಾವಣಾ ಫಲಿತಾಂಶದ ಬೆನ್ನಲ್ಲೇ ಮಮತಾ ಬ್ಯಾನರ್ಜಿ ಅವರಿಗೆ ಪ್ರಧಾನಿ ಮೋದಿ ಶುಭ ಕೋರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಮಮತಾ ಬ್ಯಾನರ್ಜಿ ಅವರಿಗೆ ಅಭಿನಂದನೆಗಳು, ಜನರ ಆಕಾಂಕ್ಷೆಗಳನ್ನು ಈಡೇರಿಸಲು ಮತ್ತು ಕೋವಿಡ್-19 ಸಾಂಕ್ರಾಮಿಕ ರೋಗವನ್ನು ಹೋಗಲಾಡಿಸಲು ಕೇಂದ್ರವು ಪಶ್ಚಿಮ ಬಂಗಾಳ ಸರ್ಕಾರಕ್ಕೆ ಎಲ್ಲ ಬೆಂಬಲವನ್ನು ನೀಡಲಿದೆ ಎಂದು ಹೇಳಿದ್ದಾರೆ. 

ಅಂತೆಯೇ ಬಂಗಾಳದಲ್ಲಿ ನಮ್ಮ ಪಕ್ಷವನ್ನು ಬೆಂಬಲಿಸಿ ಆಶೀರ್ವದಿಸಿದ ಬಂಗಾಳದ ನನ್ನ ಎಲ್ಲ ಸಹೋದರಿ ಮತ್ತು ಸಹೋದರರಿಗೆ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ. ಮುಂಚಿನ ನಗಣ್ಯ ಉಪಸ್ಥಿತಿಯಿಂದ, ಬಿಜೆಪಿಯ ಉಪಸ್ಥಿತಿಯು ಗಮನಾರ್ಹವಾಗಿ ಹೆಚ್ಚಾಗಿದೆ. ಬಂಗಾಳದಲ್ಲಿ ಬಿಜೆಪಿ ಮತ್ತಷ್ಟು ಬಲಗೊಂಡಿದೆ. ಬಿಜೆಪಿ  ಜನರಿಗೆ ಸೇವೆ ಸಲ್ಲಿಸುತ್ತಲೇ ಇರುತ್ತದೆ. ಮತದಾನದಲ್ಲಿ ಅವರ ಉತ್ಸಾಹಭರಿತ ಪ್ರಯತ್ನಕ್ಕಾಗಿ ಪ್ರತಿಯೊಬ್ಬ ಮತ್ತು ಪ್ರತಿ ಕಾರ್ಯಕರ್ತರನ್ನು ನಾನು ಶ್ಲಾಘಿಸುತ್ತೇನೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ಹಾಲಿ ಚುನಾವಣೆಯಲ್ಲಿ ಕಳೆದ ಬಾರಿಗಿಂತ ಅತ್ಯುತ್ತಮ ಪ್ರದರ್ಶನ ನೀಡಿರುವ ಟಿಎಂಸಿ 212 ಸ್ಥಾನ ಗೆಲ್ಲುವ ಮೂಲಕ ಹೊಸ ದಾಖಲೆ ಬರೆದಿದೆ. ಇತ್ತ ಬಿಜೆಪಿ ಕೂಡ ತನ್ನ ಪ್ರಾಬಲ್ಯ ಹೆಚ್ಚಿಸಿಕೊಂಡಿದ್ದು, 78 ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com